Monday, Aug 3 2020 | Time 23:54 Hrs(IST)
  • ಕರೋನಾ ಸೇನಾನಿ ಡಾ ಜೋಗಿಂದರ್ ಚೌಧರಿ ಕುಟುಂಬಕ್ಕೆ 1 ಕೋಟಿ ರೂ ಮೊತ್ತದ ಚೆಕ್‍ ನೀಡಿದ ಕೇಜ್ರಿವಾಲ್‍
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
Karnataka Share

ರಾಮನಗರ ಕಂದಾಯ ಭವನ ಕಚೇರಿ ವಿಸ್ತರಿತ ಆಸ್ಪತ್ರೆಯಾಗಿ ಮುಂದುವರಿಕೆ:ಡಿಸಿಎಂ ಡಾ.ಅಶ್ವಥ್ ನಾರಾ ಯಣ್

ಬೆಂಗಳೂರು,ಜು 16(ಯುಎನ್ಐ) ಕೋವಿಡ್-19 ರೆಫೆರೆಲ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ರಾಮನಗ ರದ ಕಂದಾಯ ಭವನವನ್ನು ಮುಂದಿನ ದಿನಗಳಲ್ಲಿ ವಿಸ್ತರಿತ ಆಸ್ಪತ್ರೆಯಾಗಿ ಮುಂದುವರೆಸುವಂತೆ ಉಪ ಮುಖ್ಯ ಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಜಿಲ್ಲಾಡಳಿತ ಕ್ಕೆ ಇಂದು ಸೂಚಿಸಿದರು.

ರಾಮನಗರ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತಂತೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತ ನಾಡಿದ ಅವರು,ಈಗಿರುವ ಕೋವಿಡ್-19 ಆಸ್ಪತ್ರೆಯನ್ನು 300 ಹಾಸಿಗೆಗಳ ಸುಸಜ್ಜಿತ ವಿಸ್ತರಿತ ಆಸ್ಪತ್ರೆಯಾಗಿ ಮಾರ್ಪಡಿಸಲು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು.ವಿಸ್ತರಿತ ಆಸ್ಪತ್ರೆಯಲ್ಲಿ ತುರ್ತು ನಿರ್ವಹಣಾ ಕೇಂದ್ರ,ಅಪಘಾತ ಚಿಕಿತ್ಸೆ ವಿಭಾಗ,ಟ್ರಾಮ,ಕ್ಯಾನ್ಸರ್ ಸೇರಿದಂತೆ ಪ್ರಮುಖ ರೋಗಗಳಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸುವಂತೆ ಡಿಸಿಎಂ ಸಲಹೆ ನೀಡಿದರು.
ಪ್ರಸಕ್ತ ರಾಮನಗರ ಜಿಲ್ಲೆಯಲ್ಲಿ ಅವಶ್ಯಕತೆ ಇರುವ 18 ವೈದ್ಯರು,30 ಶುಶ್ರೂಕಿಯರು,26 ಡಿ ಗ್ರೂಪ್ ಮತ್ತು 14 ಪ್ರಯೋಗಾಲ ಪರೀಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಉಪಮುಖ್ಯಮಂತ್ರಿಗಳು ಅನುಮೋದನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್-19 ಅನ್ನು ನಿಯಂತ್ರಿಸಲು ಅನುವಾಗುವಂತೆ ಸ್ಯಾಂಪಲ್ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸುವಂತೆ ಸೂಚಿಸಿದ ಅವರು,ಪ್ರತಿ ದಿನವೂ 200ಕ್ಕೂ ಹೆಚ್ಚು ಟ್ರೂನೆಟ್ ಮತ್ತು ಆ್ಯಂಟಿಜೆನ್ ಪರೀಕ್ಷೆಗ ಳನ್ನು ಕಡ್ಡಾಯವಾಗಿ ನಡೆಸುವಂತೆ ತಿಳಿಸಿದರು.

ಉದ್ಘಾಟಿಸಬೇಕಾಗಿರುವ ಹೊಸ ಜಿಲ್ಲಾ ಆಸ್ಪತ್ರೆಯ ಕಟ್ಟಡದಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆ ಕೇಂದ್ರವನ್ನು ಅಗತ್ಯ ಸಿಬ್ಬಂದಿಯೊಂದಿಗೆ ಜುಲೈ ತಿಂಗಳ ಅಂತ್ಯಕ್ಕೆ ಆರಂಭಿಸಬೇಕು.ಇದಕ್ಕೆ ಬೇಕಾಗಿರುವ ನೆರವನ್ನು ಕೊಪ್ಪಳ ದಲ್ಲಿರುವ ಕೇಂದ್ರದೊಂದಿಗೆ ಪಡೆದುಕೊಳ್ಳುವಂತೆ ತಿಳಿಸಿದರು.ಹಾಗೆಯೇ,ಆಸ್ಪತ್ರೆಯಲ್ಲಿರುವ ಈ ಕೇಂದ್ರದ ನಿರ್ವಹಣೆಯನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯವರು ನೀಡಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

ಯುಎನ್ಐ ಎಸ್ಎಂಆರ್ ವಿಎನ್ 1815