Monday, Sep 21 2020 | Time 12:10 Hrs(IST)
  • ಎತ್ತಿನ ಬಂಡಿ ಸಮೇತ ಇಬ್ಬರು ಯುವಕರು ನದಿ ಪಾಲು: ಮುಂದುವರೆದ ಶೋಧ ಕಾರ್ಯ
  • ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಯಡಿಯೂರಪ್ಪ
  • ಕೊರೋನಾ ಆರ್ಭಟ, 24 ಗಂಟೆಯಲ್ಲಿ 1,130 ಮಂದಿ ಸಾವು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ರಾಜ್ಯಸಭೆಯಲ್ಲಿ ಕೋಲಾಹಲ; 8 ಸದಸ್ಯರ ಅಮಾನತ್ತು
  • ಕೊವಿಡ್‍-19: ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ 1,36,895 ಕ್ಕೆ ಏರಿಕೆ
  • ಬ್ರೆಜಿಲ್‌ನಲ್ಲಿ ಹೆದ್ದಾರಿ ಅಪಘಾತ: 12 ಮಂದಿ ಸಾವು
  • ಪ್ರೇಮಸೌಧ, ತಾಜ್ ಮಹಲ್ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ
  • ಭಾರತ- ಚೀನಾ ನಡುವೆ ಇಂದು ಸೇನಾ ಮಟ್ಟದ ಮಾತುಕತೆ
  • ಮಹಾರಾಷ್ಟ್ರದಲ್ಲಿ ಕಟ್ಟಡ ಕುಸಿದು 8 ಮಂದಿ ಸಾವು
Karnataka Share

ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ಹಿನ್ನೆಲೆ: ಮಂಗಳೂರಿನಲ್ಲಿ ನಾಳೆಯಿಂದ ನಿಷೇಧಾಜ್ಞೆ

ಮಂಗಳೂರು, ಆ.3 (ಯುಎನ್ಐ) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಭೂಮಿಪೂಜೆ ನೆರವೇರುವ ಹಿನ್ನೆಲೆಯಲ್ಲಿ ಅತಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿರುವ ಮಂಗಳೂರು ಕಮಿಷನೇಟರ್ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆ.4ರಂದು ರಾತ್ರಿ 8ರಿಂದ ಆ.6ರಂದು ಬೆಳಗ್ಗೆ 6 ಗಂಟೆವರೆಗೆ ಸಿಆರ್‌ಪಿಸಿಯ ಕಲಂ 144 ಸೆಕ್ಷನ್‌ನಂತೆ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ‌ಕುಮಾರ್ ಆದೇಶ ಹೊರಡಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿಪೂಜೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ, ಧರಣಿ, ಮುಷ್ಕರ, ಮುತ್ತಿಗೆ, ಬೈಕ್ ರಾಲಿ, ಸಮಾರಂಭ ನಡೆಸುವಂತಿಲ್ಲ. ಕಲ್ಲು ಎಸೆಯುವಂತಿಲ್ಲ. ವ್ಯಕ್ತಿಗಳ ಶವಗಳ ಅಥವಾ ಆಕೃತಿ-ಪ್ರತಿಕೃತಿಗಳ ಪ್ರದರ್ಶನ ನಿಷಿದ್ಧ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮತೀಯ, ರಾಜಕೀಯ ಗಲಭೆ ಗಳನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕ ಪ್ರಾಣ, ಆಸ್ತಿಪಾಸ್ತಿ ಹಾನಿ ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ವಿಧಿಸಿರುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್‌ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಯುಎನ್ಐ ಎಎಚ್ 2110