Monday, Sep 16 2019 | Time 06:08 Hrs(IST)
Parliament Share

ರೈಲ್ವೆ ಅನುದಾನಗಳ ಮೇಲಿನ ಬೇಡಿಕೆ ಲೋಕಸಭೆಯಲ್ಲಿ ಚರ್ಚೆ: ನಿಧಿ ಕ್ರೋಡೀಕರಣಕ್ಕೆ ಒತ್ತು ನೀಡಲು ಅಧೀರ್ ಸಲಹೆ

ನವದೆಹಲಿ, ಜುಲೈ 11 (ಯುಎನ್‌ಐ) ಲೋಕಸಭೆಯಲ್ಲಿ ಗುರುವಾರ ರೈಲ್ವೆಗೆ ಅನುದಾನಗಳ ಮೇಲಿನ ಬೇಡಿಕೆ ಕುರಿತ ಚರ್ಚೆ ಕೈಗೆತ್ತಿಕೊಳ್ಳಲಾಗಿದ್ದು, ಕಾಂಗ್ರೆಸ್ ಸಭಾ ನಾಯಕ ಅಧೀರ್ ರಂಜನ್ ಚೌಧರಿ,ರೈಲ್ವೆ ಸಚಿವಾಲಯದ ಬಗ್ಗೆ ಮೋದಿ ಸರ್ಕಾರ ವಹಿಸಿರುವ ಲಕ್ಷ್ಯದ ಬಗ್ಗೆ ವಿಮರ್ಶಾತ್ಮಕ ಪ್ರಸ್ತಾಪ ಮಾಡಿದ್ದಾರೆ.
ಚರ್ಚೆಯನ್ನು ಆರಂಭಿಸಿದ ಚೌಧರಿ, ಬುಲೆಟ್ ರೈಲುಗಳ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತೋರುತ್ತದೆ, ಆದರೆ ಸರಕು ರೈಲುಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ ಎಂದು ದೂರಿದರು.
'ಸರಕು ಸಾಗಣೆ ಸೇವೆಗಳನ್ನು ಸುಧಾರಿಸಲು ಇನ್ನೂ ಪ್ರಯತ್ನಿಸುತ್ತಲೇ ಇದ್ದೇವೆ. ಯುಪಿಎ ಸರ್ಕಾರದ ಅವಧಿಯಲ್ಲಿ ಸುಸಜ್ಜಿತ ಸರಕು ಕಾರಿಡಾರ್‌ಗಳನ್ನು ಆರಂಭಿಸಲಾಗಿದೆ.' ಎಂದು ಸ್ವಲ್ಪ ಕಾಲ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಚೌಧರಿ, ಪಶ್ಚಿಮ ಬಂಗಾಳಕ್ಕೆ ರೈಲ್ವೆ ಕಾಮಗಾರಿಗಳಿಗೆ ನಿಧಿ ಒದಗಿಸುವಂತೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಸಲಹೆ ನೀಡಿದರು.
' ಪಶ್ಚಿಮ ಬಂಗಾಳಕ್ಕೆ ರಾಜಕೀಯ ಪ್ರವೇಶ ಮಾಡಲು ಬಿಜೆಪಿ ಉತ್ಸುಕವಾಗಿದೆ. ಇದಕ್ಕಾಗಿ ಬಿಜೆಪಿ ಸರ್ಕಾರ ರೈಲ್ವೆ ಕಾರ್ಯಗಳನ್ನು ಮಾಡಬೇಕು. ಬಿಜೆಪಿ ಸರ್ಕಾರವೇ ಇರುವುದರಿಂದ ಸುಲಭವಾಗಿ ಬಂಗಾಳವನ್ನು ಪ್ರವೇಶಿಸಬಹುದು.' ಎಂದು ಚೌಧರಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ ನಡುವೆ ನಡೆಯುತ್ತಿರುವ ರಾಜಕೀಯ ಕದನದ ಬಗ್ಗೆ ವ್ಯಂಗ್ಯವಾಗಿ ಪ್ರಸ್ತಾಪಿಸಿದ್ದಾರೆ.
ರೈಲ್ವೆ ಸಾಮಾಜಿಕ ಬದ್ಧತೆ ಹೊಂದಿದೆ. ಆದ್ದರಿಂದ ಸಾಮಾಜಿಕ ಹೊಣೆಗಾರಿಕೆಯನ್ನು ಭರಿಸುವ ಜವಾಬ್ದಾರಿಯನ್ನು ಸರ್ಕಾರ ಹೊರಬೇಕಾಗಿದೆ ಎಂದು ಚೌಧರಿ ಹೇಳಿದ್ದಾರೆ.
ಭಾರತೀಯ ರೈಲ್ವೆಯ ಸುಧಾರಣೆಗೆ ಹೊಸ ಕ್ರಮಗಳ ಬಗ್ಗೆ ಸಲಹೆ ನೀಡಿದ ಚೌಧರಿ, 'ಸಾಲ'ಗಳ ಮೇಲೆ ಹೆಚ್ಚು ಅವಲಂಬಿತರಾಗುವ ಪ್ರವೃತ್ತಿಯನ್ನು ಬಿಡಬೇಕು. ಆಂತರಿಕ ಸಂಪನ್ಮೂಲ ಕ್ರೋಡೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ರೈಲ್ವೆಯ ಖಾಸಗೀಕರಣ ಮತ್ತು ಕಾರ್ಪೋರೇಟೀಕರಣವನ್ನು ಮೋದಿ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ರೈಲ್ವೆ ಬಜೆಟ್‌ನಲ್ಲಿ ಘೋಷಿಸಿದಂತೆ ಇಲಾಖೆ 50 ಲಕ್ಷ ಕೋಟಿ ರೂ.ಗಳನ್ನು ಹೇಗೆ ಸಂಗ್ರಹಿಸುತ್ತದೆ ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.
ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ 2014 ರಲ್ಲಿ ತಮ್ಮ ಕ್ಷೇತ್ರ ವಾರಾಣಸಿ ಘೋಷಿಸಿದ್ದರು. ಆದರೆ ಸರ್ಕಾರ ಸಾರ್ವಜನಿಕ- ಖಾಸಗಿ ಸಹಭಾಗಿತ್ವದ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು.
ರಷ್ಯಾ, ಜಪಾನ್ ಮತ್ತು ಚೀನಾದೊಂದಿಗಿನ ಅನೇಕ ಒಪ್ಪಂದಗಳನ್ನು ಸರ್ಕಾರ ಮಾಡಿಕೊಂಡಿದೆ. ಆದರೆ, ಸರ್ಕಾರಕ್ಕೆ ಒಪ್ಪಂದಗಳನ್ನು ಕಾರ್ಯಗತಗೊಳಿಸಲಾಗಿಲ್ಲ. ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಕಾರ್ಯಾಚರಣಾ ಅನುಪಾತ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.ಯುಎನ್‌ಐ ಎಸ್‌ಎಲ್‌ಎಸ್‌ ಕೆವಿಆರ್ 1521
More News

ಲೋಕಸಭೆ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

20 Aug 2019 | 6:52 PM

 Sharesee more..
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

07 Aug 2019 | 4:18 PM

ನವದೆಹಲಿ, ಆಗಸ್ಟ್ 7 (ಯುಎನ್ಐ) ರಾಜ್ಯಸಭೆಯಲ್ಲಿ ಬುಧವಾರ ಆಡಳಿತ ಹಾಗೂ ವಿಪಕ್ಷ ಸದಸ್ಯರ ಸಮ್ಮತಿ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ 2019 ಯಾವುದೇ ಚರ್ಚೆಯಿಲ್ಲದೆ ಅಂಗೀಕಾರವಾಯಿತು.

 Sharesee more..
ರಾಜ್ಯಸಭೆಯಲ್ಲಿ ಸುಷ್ಮಾ ಸ್ವರಾಜ್‍ಗೆ ಸಂತಾಪ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ರಾಜ್ಯಸಭೆಯಲ್ಲಿ ಸುಷ್ಮಾ ಸ್ವರಾಜ್‍ಗೆ ಸಂತಾಪ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

07 Aug 2019 | 2:32 PM

ನವದೆಹಲಿ, ಆ 7 (ಯುಎನ್ಐ) ಕಳೆದ ರಾತ್ರಿ ನಿಧನರಾದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವೆ ಹಾಗೂ ಮೇಲ್ಮನೆಯ ಮಾಜಿ ಸದಸ್ಯೆ ಸುಷ್ಮಾ ಸ್ವರಾಜ್ ಅವರಿಗೆ ರಾಜ್ಯಸಭೆಯಲ್ಲಿ ಸಂತಾಪ ಸಲ್ಲಿಸಿ 249ನೇ ರಾಜ್ಯಸಭೆಯ ಕಲಾಪವನ್ನು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

 Sharesee more..