Friday, Feb 28 2020 | Time 09:51 Hrs(IST)
  • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ರೈಲ್ವೆ ಮಂಡಳಿ ಅಧ್ಯಕ್ಷರಾಗಿ ವಿನೋದ್ ಯಾದವ್ ಮರು ನೇಮಕ

ನವದೆಹಲಿ, ಜ1(ಯುಎನ್‍ಐ)- ರೈಲ್ವೆ ಮಂಡಳಿ ಅಧ್ಯಕ್ಷರಾಗಿ ಮರುನೇಮಕಗೊಂಡಿರುವ 1980ನೇ ವೃಂದದ ಐಆರ್‍ಎಸ್‍ಇಇ ಅಧಿಕಾರಿ ವಿನೋದ್ ಕುಮಾರ್ ಯಾದವ್ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಯಾದವ್ ಅವರನ್ನು ರೈಲ್ವೆ ಮಂಡಳಿ ಅಧ್ಯಕ್ಷರಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಲು ಸಚಿವ ಸಂಪುಟದ ನೇಮಕ ಸಮಿತಿ ಒಪ್ಪಿಗೆ ನೀಡಿತ್ತು.
2019ರ ಜನವರಿ 1 ರಂದು ರೈಲ್ವೆ ಮಂಡಳಿ ಅಧ್ಯಕ್ಷರಾಗಿ ನೇಮಕಗೊಳ್ಳುವ ಮುನ್ನ ಯಾದವ್ ಅವರು, ದಕ್ಷಿಣ ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಆಸ್ಟ್ರೇಲಿಯಾದ ಲಾ ಟ್ರೋಬ್ ನಿಂದ ಎಂಬಿಎ ನಲ್ಲಿ ಸ್ನಾತಕೋತ್ತರ ಪದವಿ, ಅಲಹಾಬಾದ್ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕ್ ಇಂಜನಿಯರಿಂಗ್ ವಿಷಯದಲ್ಲಿ ಇಂಜನಿಯರಿಂಗ್ ಪದವಿಯನ್ನು ಯಾದವ್ ಪಡೆದಿದ್ದಾರೆ.
ಯೋಜನೆ ನಿರ್ವಹಣೆ, ಸಾಮಾನ್ಯ ನಿರ್ವಹಣೆ, ಕೈಗಾರಿಕಾ ನೀತಿ ರಚನೆ, ವಿದೇಶಿ ಸಮನ್ವಯತಿ ಮತ್ತು ವಿದೇಶಿ ನೇರ ಬಂಡವಾಳ ಸೇರಿದಂತೆ ವಲಯಗಳಲ್ಲಿ ಯಾದವ್ ಅಪಾರ ಅನುಭವ ಹೊಂದಿದ್ದಾರೆ.
ತಮ್ಮ ವೃತ್ತಿ ಜೀವನದಲ್ಲಿ ಯಾದವ್ ಅವರು, ರೈಲ್ವೆ ಇಲಾಖೆಯಲ್ಲಿ ಅನೇಕ ಕಾರ್ಯನಿರ್ವಾಹಕ ಮತ್ತು ವ್ಯವಸ್ಥಾಪಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಟರ್ಕಿ ರೈಲ್ವೆ ವಿದ್ಯುದೀಕರಣ ಯೋಜನೆ ಯಶಸ್ವಿಯಾಗಿ ಕಾರ್ಯಗತವಾಗುವಲ್ಲಿ ಯಾದವ್ ಅವರ ಪಾತ್ರ ಬಹುಮುಖ್ಯವಾಗಿದೆ.
ಯುಎನ್‍ಐ ಎಸ್‍ಎಲ್‍ಎಸ್ 1547