Wednesday, Jan 29 2020 | Time 14:08 Hrs(IST)
 • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
 • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
 • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
 • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
 • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
 • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
 • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
Karnataka Share

ರಾಹುಲ್ ಗಾಂಧಿ ಹೇಳಿಕೆಗೆ ಉಪಮುಖ್ಯಮಂತ್ರಿ ಸವದಿ ಖಂಡನೆ

ಬೆಂಗಳೂರು, ಡಿ.8 (ಯುಎನ್ಐ) ಭಾರತವು ಅತ್ಯಾಚಾರಗಳ ರಾಜಧಾನಿ ಆಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಹೇಳಿರುವುದು ತೀರಾ ಖಂಡನೀಯ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಹುಲ್ ಗಾಂಧಿಯವರು ಕಾಂಗ್ರೆಸ್ ನಂತಹ ಹಿರಿಯ ಪಕ್ಷದ ಮುಖಂಡರಾಗಿದ್ದಾರೆ. ಅವರು ತಮ್ಮ ಜವಾಬ್ದಾರಿಯನ್ನು ಅರಿತು ಮಾತನಾಡಬೇಕಿತ್ತು. ಇಂತಹ ಬೇಜವಾಬ್ದಾರಿಯಿಂದ ಮಾತನಾಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ರಾಷ್ಟ್ರದ ಗೌರವ ಮಣ್ಣುಪಾಲಾಗುತ್ತದೆ ಎಂಬ ಕನಿಷ್ಠ ತಿಳಿವಳಿಕೆ ಅವರಿಗೆ ಇಲ್ಲದಿರುವುದು ದುರ್ದೈವದ ಸಂಗತಿ ಎಂದು ಹೇಳಿದರು.
ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಈ ಮುಂತಾದ ಸಾಮಾಜಿಕ ಪಿಡುಗುಗಳನ್ನು ಮಟ್ಟಹಾಕಲು ಎಲ್ಲಾ ಪಕ್ಷಗಳು ಸಂಘಟಿತವಾಗಿ ಹೋರಾಡುವುದು ಅಗತ್ಯವಾಗಿದೆ, ಅದನ್ನು ಬಿಟ್ಟು ಈ ರೀತಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಈ ರೀತಿಯ ಸಮಸ್ಯೆಗಳಿದ್ದಾಗ ಪ್ರಚೋದನಕಾರಿ ಹೇಳಿಕೆ ನೀಡುವುದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆಯೇ ವಿನಃ ಪರಿಹಾರವಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಹಿಂಸಾಚಾರದಲ್ಲಿ ನಂಬಿಕೆ ಹೊಂದಿದ್ದಾರೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ಹಿಂದೆ ದೆಹಲಿಯಲ್ಲಿ ಸಿಕ್ ಜನಾಂಗದ ಮೇಲೆ ಅಮಾನುಷವಾಗಿ ಹಿಂಸಾಚಾರ ನಡೆಸಿದ್ದು ಯಾರು ಎಂಬುದನ್ನು ರಾಹುಲ್ ಗಾಂಧಿಯವರು ನೆನಪಿಸಿಕೊಂಡರೆ ಹಿಂಸಾವಾದಿಗಳು ಯಾರು ಎಂಬ ಸತ್ಯ ಬಯಲಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಯುಎನ್ಐ ಎಸ್‌ಎಂಆರ್ ಎಎಚ್ 1305