Monday, Jun 1 2020 | Time 02:57 Hrs(IST)
Special Share

ಲೆಫ್ಟಿನೆಂಟ್ ಗವರ್ನರ್ ಅಧಿಕಾರ ಮೊಟಕು; ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿದ ವಿಭಾಗೀಯ ಪೀಠ

ಪುದುಚೆರಿ, ಮಾ 11 (ಯುಎನ್ಐ) ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಅಧಿಕಾರವನ್ನು ಮೊಟಕುಗೊಳಿಸುವ ಸಂಬಂಧ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
2018ರ ಏಪ್ರಿಲ್ 30ರಂದು ಏಕಸದಸ್ಯ ಪೀಠ, ಲೆಫ್ಟಿನೆಂಟ್ ಗವರ್ನರ್ ಅವರು ಆಡಳಿತದ ದಿನನಿತ್ಯದ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಆರ್. ಮಹದೇವನ್ ಅವರ ಏಕಸದಸ್ಯ ಪೀಠ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕಿರಣ್ ಬೇಡಿ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಚುನಾಯಿತ ಸರ್ಕಾರ ಹಾಗೂ ಲೆಫ್ಟಿನೆಂಟ್ ಜನರಲ್ ಒಟ್ಟಾಗಿ ಕೆಲಸ ನಿರ್ವಹಿಸಬೇಕು. ವಿಭಜಿತ ಅಧಿಕಾರ ನೀಡುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
ಯುಎನ್ಐ ಎಸ್ಎಚ್ 1736