Wednesday, Feb 26 2020 | Time 09:27 Hrs(IST)
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಲೋಹ್ರಿ, ಮಕರ ಸಂಕ್ರಾಂತಿ, ಪೊಂಗಲ್ ಹಬ್ಬಗಳ ಶುಭಾಶಯ ಕೋರಿದ ರಾಷ್ಟ್ರಪತಿ

ಲೋಹ್ರಿ, ಮಕರ ಸಂಕ್ರಾಂತಿ, ಪೊಂಗಲ್ ಹಬ್ಬಗಳ ಶುಭಾಶಯ ಕೋರಿದ ರಾಷ್ಟ್ರಪತಿ
ಲೋಹ್ರಿ, ಮಕರ ಸಂಕ್ರಾಂತಿ, ಪೊಂಗಲ್ ಹಬ್ಬಗಳ ಶುಭಾಶಯ ಕೋರಿದ ರಾಷ್ಟ್ರಪತಿ

ನವದೆಹಲಿ, ಜ.12 (ಯುಎನ್‌ಐ) ಲೋಹ್ರಿ, ಮಕರ ಸಂಕ್ರಾಂತಿ ಪೊಂಗಲ್, ಭೋಗಲಿ ಬಿಹು, ಉತ್ತರಾಯನ್ ಮತ್ತು ಪೌಶ್ ಹಬ್ಬಗಳ ಮುನ್ನಾ ದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ನಾಗರಿಕರಿಗೆ ಶುಭ ಕೋರಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

“ಲೋಹ್ರಿ, ಮಕರ ಸಂಕ್ರಾಂತಿ, ಪೊಂಗಲ್, ಭೋಗಲಿ ಬಿಹು, ಉತ್ತರಾಯಣ್ ಮತ್ತು ಪೌಶ್ ಹಬ್ಬಗಳ ಸಂದರ್ಭದಲ್ಲಿ ಭಾರತ ಮತ್ತು ವಿದೇಶದಲ್ಲಿರುವ ಎಲ್ಲ ನಾಗರಿಕರಿಗೆ ನನ್ನ ಶುಭಾಶಯಗಳನ್ನು ಅರ್ಪಿಸುತ್ತೇನೆ ಎಂದು ರಾಷ್ಟ್ರಪತಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

"ಭಾರತವು ಹಬ್ಬಗಳ ನೆಲವಾಗಿದೆ. ದೇಶಾದ್ಯಂತ ವಿವಿಧ ಹೆಸರುಗಳು ಮತ್ತು ರೂಪಗಳಲ್ಲಿ ಆಚರಿಸಲಾಗುವ ಮುಂಬರುವ ಉತ್ಸವಗಳು ನಮ್ಮ ರೈತರ ನಿರಂತರ ಶ್ರಮದ ಬಗ್ಗೆ ನಮ್ಮ ಗೌರವವನ್ನು ಸೂಚಿಸುವ ಸಂದರ್ಭವಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಬ್ಬರ ಕುಟುಂಬ ಮತ್ತು ಸಮುದಾಯದೊಂದಿಗೆ ಹೊಸ ಬೆಳೆ ಹಂಚಿಕೊಳ್ಳುವ ಸಂತೋಷವನ್ನು ಸಂಕೇತಿಸುವ ಈ ಹಬ್ಬಗಳು ದೇಶದ ಆತ್ಮದಲ್ಲಿ ಹೆಣೆದುಕೊಂಡಿವೆ. ಎಲ್ಲಾ ಸಮುದಾಯಗಳು ಈ ಹಬ್ಬಗಳನ್ನು ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಭ್ರಾತೃತ್ವದ ಮನೋಭಾವದಿಂದ ಆಚರಿಸುತ್ತವೆ ಎಂದು ಅದು ಹೇಳಿದೆ.

ಇಂತಹ ಉತ್ಸವಗಳು ದೇಶದ ಭೌಗೋಳಿಕ, ಸಾಂಸ್ಕೃತಿಕ ಮತ್ತು ಭಾವನಾತ್ಮಕ ಏಕೀಕರಣದಲ್ಲಿ ಅಮೂಲ್ಯವಾದ ಕೊಡುಗೆಯನ್ನು ನೀಡಿವೆ. ಈ ಉತ್ಸವಗಳು ಶಾಂತಿಯುತ ಸಹಬಾಳ್ವೆ ಮತ್ತು ಐಕ್ಯತೆಯ ಮನೋಭಾವವನ್ನು ಮತ್ತಷ್ಟು ಬಲಪಡಿಸಲು ಸಹಾಯ ಮಾಡುತ್ತದೆ. ರಾಷ್ಟ್ರದ ಸಮೃದ್ಧಿ ಮತ್ತು ಸಂತೋಷವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಸಂದೇಶದಲ್ಲಿ ಕೋವಿಂದ್ ತಿಳಿಸಿದ್ದಾರೆ.

ಯುಎನ್ಐ ಎಎಚ್