Wednesday, Jan 29 2020 | Time 13:35 Hrs(IST)
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
 • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
 • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
 • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
 • ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಹರ್ಷವರ್ಧನ್ ಶ್ರಿಂಗ್ಲಾ ಅಧಿಕಾರ ಸ್ವೀಕಾರ
 • ನಿರ್ಭಯ ಪ್ರಕರಣ; ತಪ್ಪಿತಸ್ಥ ಮುಖೇಶ್ ಆರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
 • ಇರ್ಫಾನ್ ಪಠಾಣ್ ಮೊದಲ ಓವರ್ ಹ್ಯಾಟ್ರಿಕ್ ಸಾಧನೆಗೆ ಇದೀಗ 14 ವರ್ಷ
 • ನಿರ್ಭಯಾ ಪ್ರಕರಣ, ಅಪರಾಧಿ ಮುಖೇಶ್ ಮನವಿ ತಿರಸ್ಕೃತ
Parliament Share

ವಿಕ್ರಮ್ ಲ್ಯಾಂಡರ್ ವೈಫಲ್ಯ; ಇಸ್ರೋ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಟಿಎಂಸಿ ಸಂಸದನ ಆಗ್ರಹ

ನವದೆಹಲಿ, ಡಿ ೫( ಯುಎನ್‌ಐ) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಮಹತ್ವಾಕಾಂಕ್ಷೆಯ ಚಂದ್ರಯಾನ -೨ ಉಡಾವಣೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಸೌಗತಾ ರಾಯ್ ಅವರು ಲೋಕಸಭೆಯಲ್ಲಿ ಸಂಚಲನದ ಹೇಳಿಕೆ ನೀಡಿದ್ದಾರೆ.
ಚಂದ್ರನ ಮೇಲ್ಮೈಗೆ ಕಳುಹಿಸಲಾದ ವಿಕ್ರಮ್ ಲ್ಯಾಂಡರ್ ನಿಗದಿತ ಸ್ಥಳದಲ್ಲಿ ಇಳಿಯದೆ, ಚಂದ್ರ ಮೇಲ್ಮೈ ನಲ್ಲಿ ಅಪಘಾತಕ್ಕೀಡಾಗಿ ದೇಶದ ಪ್ರತಿಷ್ಟೆಗೆ ಭಂಗ ತಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೆ ಕಾರಣಕರ್ತರಾದ ಇಸ್ರೋ ಅಧಿಕಾರಿಗಳನ್ನು ಕೂಡಲೇ ಉದ್ಯೋಗದಿಂದ ವಜಾಗೊಳಿಸಬೇಕು ಒತ್ತಾಯಿಸಿದರು. ಚಂದ್ರಯಾನ -೩ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಹಣ ಹಂಚಿಕೆ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ಬಾಹ್ಯಕಾಶ ವಲಯದಲ್ಲಿ ಮತ್ತಷ್ಟು ಹಣ ಹಂಚಿಕೆ ಮಾಡುವುದು ವ್ಯರ್ಥ ಕಸರತ್ತು ಎಂದರು. ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚುವರಿ ನಿಧಿ ಮಂಜೂರು ಮಾಡುವ ಬಗ್ಗೆ ಲೋಕಸಭೆಯಲ್ಲಿ ಬುಧವಾರ ನಡೆದ ಚರ್ಚೆಯ ವೇಳೆ ಸೌಗತಾ ರಾಯ್ ಈ ಹೇಳಿಕೆ ನೀಡಿದ್ದಾರೆ.
ಆದರೆ, ಸೌಗತಾ ರಾಯ್ ಹೇಳಿಕೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಹುತೇಕ ಸಂಸದರು ಆಕ್ಷೇಪ ವ್ಯಕ್ತಪಡಿಸಿ, ಇಡೀ ಜಗತ್ತೇ ಇಸ್ರೋ ಸಾಧನೆಯನ್ನು ಕೊಂಡಾಡುತ್ತಿರುವಾಗ ಸೌಗತಾ ರಾಯ್ ಮಾತ್ರ ಇಸ್ರೋ ಸಾಧನೆಯನ್ನು ಟೀಕಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯುಎನ್‌ಐ ಕೆವಿಆರ್