Monday, Aug 3 2020 | Time 23:10 Hrs(IST)
  • ಪೋಖ್ರಿಯಾಲ್ ಅವರಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
  • ಕೊವಿಡ್‍:ದೆಹಲಿಯಲ್ಲಿ ಸತತ 2ನೇ ದಿನ 1,000ಕ್ಕೂ ಕಡಿಮೆ ಪ್ರಕರಣಗಳು ವರದಿ, ಚೇತರಿಕೆ ಪ್ರಮಾಣ ಶೇ89 72ಕ್ಕೆ ಏರಿಕೆ
  • 2004ರಲ್ಲಿ ಸುನಾಮಿಯಿಂದ ಪಾರಾದ ಬಗ್ಗೆ ವಿವರಿಸಿದ ಅನಿಲ್‌ ಕುಂಬ್ಳೆ
  • ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ-ಸಿಪಿಎಂ
  • ಮಹೇಂದ್ರ ಸಿಂಗ್‌ ಧೋನಿ ಸಹಾಯವನ್ನು ಸ್ಮರಿಸಿದ ಸ್ಯಾಮ್‌ ಬಿಲ್ಲಿಂಗ್ಸ್‌
  • 'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್ ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
  • ದ್ರಾವಿಡ್ ಎದುರಿಸಿದ್ದ ಸಮಸ್ಯೆ ಬಹಿರಂಗಪಡಿಸಿದ ದಲ್ಜಿತ್‌ ಸಿಂಗ್‌
  • ಕೌಂಟಿ ಕ್ರಿಕೆಟ್ ತೊರೆದು ಕಾರ್ಗಿಲ್‌ ಯುದ್ಧ ಮಾಡಲು ಮುಂದಾಗಿದ್ದೆ: ಶೊಯೇಬ್ ಅಖ್ತರ್
  • ಕೆಪಿಸಿಸಿಯಿಂದ ನಾಯಕತ್ವ, ಆಡಳಿತ ನಿರ್ವಹಣಾ ಸಮಿತಿ ರಚನೆ
  • ಕಾಸರಗೋಡು: ಯುವಕನಿಂದ ಕುಟುಂಬದ ನಾಲ್ವರ ಬರ್ಬರ ಹತ್ಯೆ
  • ಅಯೋಧ್ಯ ಭೂಮಿ ಪೂಜೆಗೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ:ಸಾವಿನ ಸಂಖ್ಯೆ 12ಕ್ಕೆ ಏರಿಕೆ
  • ಅಯೋಧ್ಯ ಭೂಮಿ ಪೂಜೆಗೆ ಬರುವಂತೆ ಮೊದಲ ಆಹ್ವಾನ ಮುಸ್ಲಿಂ ವ್ಯಕ್ತಿಗೆ !
  • ಲಾಕ್‌ಡೌನ್ ದಿನಗಳನ್ನು ಪರಿಷ್ಕರಿಸಿ ಹೊಸ ದಿನಾಂಕ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ
  • 50 ರೂ ತಾವು ಪಡೆದ ಮೊತ್ತ ಮೊದಲ ಸಂಪಾದನೆ ಎಂದ ರೋಹಿತ್‌ ಶರ್ಮಾ
Special Share

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ
ವಿಕಾಸ್ ದುಬೆ ಪ್ರಕರಣ; ಬ್ರಾಹ್ಮಣ ಸಮುದಾಯಕ್ಕೆ ಕಿರುಕುಳ ಬೇಡ; ಯೋಗಿ ಸರ್ಕಾರಕ್ಕೆ ಮಾಯಾವತಿ ಒತ್ತಾಯ

ಲಕ್ನೋ, ಜುಲೈ ೧೨ (ಯುಎನ್‌ಐ) ಭೂಗತ ಪಾತಕಿ ವಿಕಾಸ್ ದುಬೆ ಪ್ರಕರಣ ಸಂಬಂಧ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ವಾಸ್ತವಾಂಶಗಳ ಆಧಾರದ ಮೇಲೆ ಕ್ರಮ ಜರುಗಿಸಬೇಕು. ಬ್ರಾಹ್ಮಣ ಸಮುದಾಯದಲ್ಲಿ ಅನಗತ್ಯವಾಗಿ ಭೀತಿ ಸೃಷ್ಟಿಸುವಂತಹ ರಾಜಕೀಯದಲ್ಲಿ ತೊಡಗಬಾರದು ಎಂದು ಬಹು ಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ಆಗ್ರಹಿಸಿದ್ದಾರೆ.

ಅಪರಾಧ ಎಸಗಿದ್ದ ವ್ಯಕ್ತಿಗೆ ಸೇರಿದ ಇಡೀ ಸಮುದಾಯಕ್ಕೆ ಕಿರುಕುಳ ನೀಡಬಾರದು ಎಂದು ಮಾಯಾವತಿ ಸರಣಿ ಟ್ವೀಟ್ ಗಳಲ್ಲಿ ಹೇಳಿದ್ದಾರೆ.

ವಿಕಾಸ್ ದುಬೆ ಎಸಗಿದ ಅಪರಾಧಗಳಿಗಾಗಿ ಆ ವ್ಯಕ್ತಿಯ ಇಡೀ ಸಮುದಾಯಕ್ಕೆ ಕಿರುಕುಳ ನೀಡಬಾರದು. ಆತ ಎಸಗಿದ ಅಪರಾಧಕ್ಕಾಗಿ ಅವರ ಸಮುದಾಯವನ್ನು ಶಿಕ್ಷಿಸುವಂತಹ ದ್ವೇಷದ ಕ್ರಮಗಳಿಗೆ ಮುಂದಾಗಬಾರದು ಎಂದು ತಿಳಿಸಿದ್ದಾರೆ.

ಕಾನ್ಪುರ ಜಿಲ್ಲೆಯಲ್ಲಿ ಬ್ರಾಹ್ಮಣ ಸಮುದಾಯ ಭೀತಿಗೊಳಗಾಗುವಂತ, ಹಾಗೂ ಅಭದ್ರಗೊಳ್ಳುವಂತ ಯಾವುದೇ ಕ್ರಮವನ್ನು ರಾಜ್ಯ ಸರ್ಕಾರ ಕೈಗೊಳ್ಳಬಾರದು ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ಒತ್ತಾಯಿಸಿದ್ದಾರೆ.

ಯುಎನ್‌ಐ ಕೆವಿಆರ್ ೨೦೨೧