Monday, Jul 22 2019 | Time 19:47 Hrs(IST)
 • ಆರ್ ಟಿಐ ಮಸೂದೆಗೆ ಕಾಂಗ್ರೆಸ್ ವಿರೋಧ; ಹಿಂಪಡೆಯುವಂತೆ ಒತ್ತಾಯ
 • ಚಂದ್ರಯಾನ್-2ಕ್ಕೆ ಭಾರತೀಯ ಉಕ್ಕು ಪ್ರಾಧಿಕಾರದ ವಿಶೇಷ ಲೋಹ ಬಳಕೆ
 • ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಲ್ ರಾಜ್ ಮಿಶ್ರಾ ಪ್ರಮಾಣವಚನ
 • ವಿಧಾನಸಭೆಯಲ್ಲಿ ಲಿಂಬಾವಳಿ ಕಣ್ಣೀರು
 • ದಾಖಲೆ ನಿರ್ಮಿಸಿದ ಅಮರನಾಥ ಯಾತ್ರೆ; 22 ದಿನಗಳಲ್ಲಿ 2 85 ಲಕ್ಷ ಯಾತ್ರಿಕರ ಭೇಟಿ
 • ಪ್ರದರ್ಶನ ಅಥವಾ ರವಾನೆ ಸರಕುಗಳ ಮೇಲಿನ ಸಂಯೋಜಿತ ತೆರಿಗೆ ಐಜಿಎಸ್‌ಟಿ ರದ್ದು
 • ಕ್ರಿಪ್ಟೋ ಕರೆನ್ಸಿ ಮೇಲೆ ನಿಷೇಧ ವಿಧಿಸಲು ಸರ್ಕಾರ ನೇಮಿಸಿದ್ದ ಸಮಿತಿ ಸಲಹೆ
 • ಕಾಶ್ಮೀರದ ದೋಡಾದಲ್ಲಿ ಉಗ್ರರ ಅಡಗುದಾಣ ನಾಶ
 • ವಿಧಾನಸಭೆಯಲ್ಲಿ ಸದ್ದುಮಾಡಿದ ಝೀರೋ ಟ್ರಾಫಿಕ್
 • ಟಿವಿಎಸ್‌ ಮಾರಾಟ ಶೇ 7 8ರಷ್ಟು ಏರಿಕೆ
 • ಕಳೆದ 3 ವರ್ಷದಲ್ಲಿ ಭಾರತೀಯ ನೌಕಾ ಸಿಬ್ಬಂದಿ ಸಂಖ್ಯೆ ಜಾಗತಿಕವಾಗಿ ಶೇ 45ರಷ್ಟು ಏರಿಕೆ
 • ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್
 • ಕ್ಸಿಯೋಮಿಯಿಂದ ರೆಡ್‌ಮಿ ಕೆ 20 ಸರಣಿ, ರೆಡ್‌ಮಿ 7 ಎ ಸ್ಮಾರ್ಟ್‌ಪೋನ್ ಬಿಡುಗಡೆ
 • ಸುಪ್ರಿಂಕೋರ್ಟ್ ತೀರ್ಪು ಬರುವತನಕ ವಿಶ್ವಾಸಮತ ಮುಂದೂಡಬೇಕು : ದಿನೇಶ್ ಗುಂಡೂರಾವ್
 • ಟ್ರಂಪ್ ಭೇಟಿಗೆ ಮುಂದಾದ ಇಮ್ರಾನ್ ಖಾನ್
business economy Share

ವೃತ್ತಿಜೀವನದ ಕೌಶಲ್ಯಗಳೊಂದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಎಐಸಿಟಿಇ, ಟಿಸಿಎಸ್‌ ಒಪ್ಪಂದ

ನವದೆಹಲಿ, ಜುಲೈ 10 (ಯುಎನ್‌ಐ) ತಾಂತ್ರಿಕ ಶಿಕ್ಷಣಕ್ಕಾಗಿ ರಾಷ್ಟ್ರಮಟ್ಟದ ಉನ್ನತ ಸಲಹಾ ಮತ್ತು ನಿಯಂತ್ರಕ ಸಂಸ್ಥೆಯಾಗಿರುವ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌(ಟಿಸಿಎಸ್) ವೃತ್ತಿಜೀವನದ ಕೌಶಲ್ಯಗಳೊಂದಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿವೆ.
ಒಪ್ಪಂದದಂತೆ 10,000ಕ್ಕೂ ಹೆಚ್ಚು ಎಐಸಿಟಿಇ ಅನುಮೋದಿತ ಸಂಸ್ಥೆಗಳ ವಿದ್ಯಾರ್ಥಿಗಳು ಟಿಸಿಎಸ್ ಕೋರ್ಸ್‌ಗೆ ಉಚಿತ ಪ್ರವೇಶವನ್ನು ಪಡೆಯುತ್ತಾರೆ. ಈ ಕೋರ್ಸ್‌ ವಿದ್ಯಾರ್ಥಿಗಳಿಗೆ ತಮ್ಮ ಪದವಿ ಕೋರ್ಸ್‌ನ ಅವಧಿಯುದ್ದಕ್ಕೂ ಉಚಿತವಾಗಿ ಲಭ್ಯವಿರುತ್ತದೆ.
ಟಿಸಿಎಸ್‌ನ ಭಾಗವಾದ ಟಿಸಿಎಸ್ ಅಯಾನ್, ಕಾರ್ಪೊರೇಟ್ ಶಿಷ್ಟಾಚಾರ, ಪರಿಣಾಮಕಾರಿ ಇಮೇಲ್ ಬರವಣಿಗೆ, ಪರಿಣಾಮಕಾರಿ ಪ್ರೆಸೆಂಟೆಷನ್‌, ಐಟಿ ಜಾಗೃತಿ ಮುಂತಾದ ಉದ್ಯಮ ಅಗತ್ಯ ವಿಷಯಗಳನ್ನು ಒಳಗೊಂಡಿರುವ 20 ಗಂಟೆಗಳ ಅವಧಿಯ ಉಚಿತ ವೃತ್ತಿ ಕೌಶಲ್ಯ ಕೋರ್ಸ್ ಅನ್ನು ನೀಡಲಿದೆ.
ಟಿಸಿಎಸ್‌ ಅಯಾನ್‌ ಡಿಜಿಟಲ್‌ ವೇದಿಕೆಯಾಗಿದ್ದು, ನೋಂದಾಯಿತ ಬಳಕೆದಾರರು ಎಲ್ಲಿ ಬೇಕಾದರೂ, ಯಾವಾಗ ಬೇಕಾದರೂ ಇದರ ಪಠ್ಯಗಳನ್ನು ಪಡೆಯಬಹುದಾಗಿದೆ.
ಯುಎನ್‌ಐ ಕೆಎಸ್‌ವಿ ವಿಎನ್‌ಎಲ್‌ 2022