Wednesday, Feb 26 2020 | Time 09:54 Hrs(IST)
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ವಾದ್ರಾ ನಿಕಟವರ್ತಿ, ದುಬೈ ಮೂಲದ ಉದ್ಯಮಿ ಇಡಿ ವಶಕ್ಕೆ

ನವದೆಹಲಿ ಜನವರಿ,24 (ಯುಎನ್ಐ ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ, ರಾಬರ್ಟ್ ವಾದ್ರಾ ಶಾಮೀಲಾಗಿರುವ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ್ರಾ ನಿಕಟವರ್ತಿ, ದುಬೈ ಮೂಲದ ಉದ್ಯಮಿ ಸಿಸಿ ಥಾಂಪಿಯನ್ನು ಕೋರ್ಟ್ 4 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದೆ.
ಅಕ್ರಮ ಹಣಕಾಸು ಪ್ರಕರಣದಲ್ಲಿ ತನಿಖೆ ಇನ್ನೂ ಬಾಕಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ವರದಿಯಾಗಿದೆ.
ಅಲ್ಲದೇ ಹೆಚ್ಚಿನ ಸಾಕ್ಷಿಗಳನ್ನು ತನಿಖೆಗೆ ಒಳಪಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಥಾಂಪಿಯನ್ನು ಕಸ್ಟಡಿಗೆ ಒಪ್ಪಿಸಬೇಕೆಂದು ಇ.ಡಿ ಅಧಿಕಾರಿಗಳ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದ್ದರು.
ಕಕ್ಷಿದಾರ (ಥಾಂಪಿ) ಕಳೆದ ಒಂದು ವಾರದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶದಲ್ಲಿದ್ದಾರೆ ಹೀಗಾಗಿ ಇನ್ನಷ್ಟು ದಿನ ಕಸ್ಟಡಿಗೆ ಕೊಡುವ ಅಗತ್ಯವಿಲ್ಲ. ಈಗಾಗಲೇ ನಿರೀಕ್ಷಣಾ ಜಾಮೀನಿಗೆ ಮನವಿ ಮಾಡಲಾಗಿದೆ ಎಂದು ಥಾಂಪಿ ಪರವಕೀಲರು ಪ್ರತಿವಾದ ಮಂಡಿಸಿದ್ದರು.
ರಾಬರ್ಟ್ ವಾದ್ರಾ ನಿಕಟವರ್ತಿಯಾಗಿದ್ದ ಥಾಂಪಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ 20ರಂದು ಬಂಧಿಸಿದ್ದರು.
ಯುಎನ್ಐ ಕೆಎಸ್ಆರ್ 2135