Wednesday, May 27 2020 | Time 02:32 Hrs(IST)
  • ಬೆಂಗಳೂರು ಗಾಳಿ ಮಳೆಗೆ ಓರ್ವ ಯುವತಿ ಬಲಿ : ಧರೆಗುರುಳಿದ ಮರ,ವಿದ್ಯುತ್ ಕಂಬಗಳು
Election Share

ವಿಧಾನಸಭಾ ಚುನಾವಣೆಗೂ ಮುನ್ನ ಮೂರು ರಾಜ್ಯಗಳ ಹಿರಿಯ ನಾಯಕರ ಜೊತೆ ಶಾ ಸಭೆ

ವಿಧಾನಸಭಾ ಚುನಾವಣೆಗೂ ಮುನ್ನ ಮೂರು ರಾಜ್ಯಗಳ ಹಿರಿಯ ನಾಯಕರ ಜೊತೆ ಶಾ ಸಭೆ
ವಿಧಾನಸಭಾ ಚುನಾವಣೆಗೂ ಮುನ್ನ ಮೂರು ರಾಜ್ಯಗಳ ಹಿರಿಯ ನಾಯಕರ ಜೊತೆ ಶಾ ಸಭೆ

ನವದೆಹಲಿ, ಜೂ 9 (ಯುಎನ್ಐ) ಲೋಕಸಭೆ ಚುನಾವಣೆಯಲ್ಲಿ 303 ಸ್ಥಾನಗಳೊಂದಿಗೆ ಭಾರಿ ಗೆಲುವು ಸಾಧಿಸಿದ ನಂತರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಭಾನುವಾರ ಇದೇ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳ ಹಿರಿಯ ನಾಯಕರ ಸಭೆ ನಡೆಸಿ ಚರ್ಚಿಸಿದ್ದಾರೆ.

ದೇಶದ ರಾಜಧಾನಿ ದೆಹಲಿಯಲ್ಲಿಂದು ಅಮಿತ್ ಶಾ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ವಿಧಾನಸಭೆ ಚುನಾವಣೆ ನಡೆಯಲಿರುವ ಪ್ರಮುಖ ರಾಜ್ಯಗಳಾದ ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡನ ಹಿರಿಯ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಮೂರು ರಾಜ್ಯಗಳ ಹಿರಿಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿದ್ದು, ಬಿಜೆಪಿ ಆಡಳಿತವಿರುವ ಮೂರು ರಾಜ್ಯಗಳಲ್ಲಿ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿವೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಹರ್ಯಾಣದ ಎಲ್ಲಾ ಹತ್ತು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಮಹಾರಾಷ್ಟ್ರದಲ್ಲಿ 23 ಹಾಗೂ ಜಾರ್ಖಂಡದಲ್ಲಿ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ಯುಎನ್ಐ ಡಿವಿ ವಿಎನ್ 1411

There is no row at position 0.