Sunday, Dec 8 2019 | Time 14:24 Hrs(IST)
 • ನಾನು ಪರ ಶಿವ ನನ್ನನ್ನು ಯಾರೂ ಟಚ್ ಮಾಡಲಾರರು !
 • ರಣಜಿ ಟ್ರೋಫಿ: ಕರ್ನಾಟಕ-ತಮಿಳುನಾಡು ಕಾದಾಟ ನಾಳೆ
 • ರಾಮನಗರ ಕ್ಲೀನಿಂಗ್ ಮಾಡಲಿ, ಆಲ್‌ ದಿ ಬೆಸ್ಟ್‌ : ಡಿಸಿಎಂಗೆ ಡಿ ಕೆ ಶಿವಕುಮಾರ್ ಟಾಂಗ್
 • ಗಾಂಧಿ ಕೊನೆ ಕೈ ಬರಹದ ಹಸ್ತಪ್ರತಿ ಹರಾಜು !
 • ದೆಹಲಿ ಬೆಂಕಿ ದುರಂತ: ಮೃತಪರ ಕುಟುಂಬಗಳಿಗೆ ಪ್ರಧಾನಿಯವರಿಂದ ತಲಾ 2 ಲಕ್ಷ ರೂ ಪರಿಹಾರ ಘೋಷಣೆ
 • ಉನ್ನಾವೋ ಘಟನೆ : ಸಿಎಂ ಬರುವವರೆಗೂ ಅಂತ್ಯ ಸಂಸ್ಕಾರ ನಡೆಸದಿರಲು ಬಿಗಿಪಟ್ಟು
 • ದೆಹಲಿ ಅಗ್ನಿ ದುರಂತ; ತನಿಖೆಗೆ ಸಿಎಂ ಕೇಜ್ರೀವಾಲ್ ಆದೇಶ, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ
 • ಪರಿಷ್ಕೃತ ಪೌರತ್ವ ತಿದ್ದುಪಡಿ ಮಸೂದೆ: ಸೋಮವಾರ ಮಂಡನೆ
 • ಲಾ ಲೀಗಾ: ರೊನಾಲ್ಡೊ ದಾಖಲೆ ಮುರಿದ ಮೆಸ್ಸಿ
 • ಲಾ ಲೀಗಾ: ರೊನಾಲ್ಡೊ ದಾಖಲೆ ಮುರಿದ ಮೆಸ್ಸಿ
 • ನಾಳೆ ಉಪ ಕದನ ಫಲಿತಾಂಶ; ದೇವರ ಮೊರೆ ಹೋದ ಬಿಎಸ್‌ವೈ
 • ಲಾ ಲೀಗಾ ಫುಟ್ಬಾಲ್‌ ಟೂರ್ನಿ: ಮೆಸ್ಸಿ ಹ್ಯಾಟ್ರಿಕ್‌ ಗೋಲಿನ ನೆರವಿನಿಂದ ಬಾರ್ಸಿಲೋನಾಗೆ ಜಯ
 • ಭದ್ರತಾಪಡೆ ಗುಂಡಿಗೆ ಐವರು ಉಗ್ರರ ಬಲಿ
 • ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಣಿಪುರದಲ್ಲಿ ತೀವ್ರ ಪ್ರತಿಭಟನೆ: ಸಿಎಬಿಗೆ ಕಾಂಗ್ರೆಸ್, ಎಡಪಕ್ಷ ವಿರೋಧ
 • ಉಪದ್ರವ ಕೊಡುತ್ತಿದ್ದ ಚಿರತೆ ಕೊನೆಗೂ ಬಲೆಗೆ ಬಿತ್ತು
Karnataka Share

ವಿಧಾನಸಭೆಯಲ್ಲಿ ಸದ್ದುಮಾಡಿದ ಝೀರೋ ಟ್ರಾಫಿಕ್

ಬೆಂಗಳೂರು, ಜು 22 (ಯುಎನ್‍ಐ) ಅತೃಪ್ತ ಶಾಸಕರಿಗೆ ವಿಮಾನನಿಲ್ದಾಣಕ್ಕೆ ಹೋಗಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿರುವ ವಿಚಾರ ವಿಧಾನಸಭೆಯಲ್ಲಿ ಭಾರಿ ಸದ್ದು ಮಾಡಿತು
ಸೋಮವಾರ ಮಧ್ಯಾಹ್ನ ವಿಶ್ವಾಸಮತ ನಿರ್ಣಯದ ಮೇಲಿನ ಮುಂದುವರೆದ ಚರ್ಚೆಯಲ್ಲಿ ಪಾಲ್ಗೊಂಡ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ವಿಮಾನ ನಿಲ್ದಾಣದಿಂದ ವಿಧಾನಸೌಧಕ್ಕೆ ಬರಲು, ವಾಪಸ್ ಅಲ್ಲಿಗೆ ತೆರಳಲು ಝೀರೋ ಟ್ರಾಫಿಕ್ ಮಾಡಿಕೊಟ್ಟಿದ್ದ ಅಂಶವನ್ನು ಪ್ರಸ್ತಾಪಿಸಿದರು. ಶಾಸಕರಿಗೆ ಝೀರೋ ಟ್ರಾಫಿಕ್ ನೀಡಲು ಶಿಷ್ಟಾಚಾರದಲ್ಲಿ ಅವಕಾಶವಿದೆಯೇ ? ಅಂಗವಿಕಲರಿಗೆ, ಗರ್ಭಿಣಿಯರಿಗೆ ತುರ್ತು ಪರಿಸ್ಥಿತಿಯಲ್ಲಿದ್ದಾಗ ಝೀರೋ ಟ್ರಾಫಿಕ್ ನೀಡದ ಪೊಲೀಸ್ ಇಲಾಖೆ, ಅತೃಪ್ತ ಶಾಸಕರಿಗೆ ಏಕೆ ? ಝಿರೋ ಟ್ರಾಫಿಕ್ ನೀಡಿದರು ಎಂದು ಪ್ರಶ್ನಿಸಿದರು.
ಕಾನೂನಿಗಿಂತ, ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ .ಪೊಲೀಸ್ ಮಹಾನಿರ್ದೇಶಕರು ಕಾನೂನಿಗಿಂತ ದೊಡ್ಡವರಲ್ಲ. ಜನಸಾಮಾನ್ಯರಿಗೆ ಟ್ರಾಫಿಕ್ ವ್ಯವಸ್ಥೆ ಬಗ್ಗೆ ಒಪ್ಪಿಗೆ ಇಲ್ಲ. ಅರಾಜಕತೆ ಸೃಷ್ಟಿಸುವವರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದು ಸಣ್ಣ ಕೆಲಸವೇನಲ್ಲ ಎಂದು ಎ.ಟಿ.ರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿ, ಶಾಸಕರಿಗೆ ರಕ್ಷಣೆ ಕಲ್ಪಿಸುವ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ಸೂಚನೆ ಹೋಗಿತ್ತು. ಹೀಗಾಗಿ ಅವರಿಗೆ ಝಿರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ಉತ್ತರಿಸಿದರು.
ಎಂ.ಬಿ.ಪಾಟೀಲ್ ಸ್ಪಷ್ಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ರಮೇಶ್ ಕುಮಾರ್, ರಾಜ್ಯಪಾಲರು ಶಾಸಕರಿಗೆ ರಕ್ಷಣೆ ನೀಡುವಂತೆ ಆದೇಶಿಸಿದ್ದರು. ಆದರೆ ಝೀರೋ ಟ್ರಾಫಿಕ್ ಕೊಡಲು ಆದೇಶಿಸಿದವರು ಯಾರು ? ಎಂದು ಪ್ರಶ್ನಿಸಿದರು.
ಆಗ ಎಂ.ಬಿ.ಪಾಟೀಲ್, ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡುವಂತೆ ಯಾರೂ ಆದೇಶಿಸಿಲ್ಲ , ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿರಲಿಲ್ಲ. ಹೆಚ್ ಎಎಲ್ ನಿಂದ ವಿಧಾನಸೌಧಕ್ಕೆ ಬರಲು ಅವರು ನಲವತ್ತು ನಿಮಿಷ ಅವಧಿ ತೆಗೆದುಕೊಂಡಿದ್ದಾರೆ.ಹಾಗಾಗಿ ಝೀರೋ ಟ್ರಾಫಿಕ್ ಕೊಟ್ಟಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಬೇಕು ಎಂದರು.
ಇದಕ್ಕೆ ಶಾಸಕ ಹೆಚ್.ಕೆ.ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿ, ಎಲ್ಲಾ ಮಾಧ್ಯಮಗಳಲ್ಲಿ ಶಾಸಕರು ಝೀರೋ ಟ್ರಾಫಿಕ್ ನಲ್ಲಿ ಬಂದಿರುವ ಬಗ್ಗೆ ವರದಿಯಾಗಿದೆ. ಸತ್ಯವನ್ನು ಮರೆಮಾಚಬೇಡಿ. ನಿಮಗೆ ತಪ್ಪು ಮಾಹಿತಿ ಕೊಟ್ಟವರು ಯಾರು ಎಂಬ ಬಗ್ಗೆ ಸದನಕ್ಕೆ ತಿಳಿಸಿ. ತಾವು ನೀಡಿದ ಸ್ಪಷ್ಟನೆ ತಪ್ಪು ಎಂದನಿಸಿದರೆ ನಿಮ್ಮ ಹೇಳಿಕೆ ಹಿಂಪಡೆಯಿರಿ ಎಂದು ಸಲಹೆ ನೀಡಿದರು.
ಆಗ ಸಚಿವ ಎಂ.ಬಿ.ಪಾಟೀಲ್ ಅವರನ್ನು ತರಾಟೆಗೆ ತೆಗೆದುಕೊಂಡ ರಮೇಶ್ ಕುಮಾರ್, ಗೃಹಸಚಿವರಾದ ನಿಮಗೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದರೆ ಹೇಗೆ ? ಹಾಗಾದರೆ ಯಾರೂ ಬೇಕಾದರೂ ಗೃಹಸಚಿವರಾಗಬಹುದೇ ? ಅಧಿಕಾರಿಗಳು ಕೊಟ್ಟಿದ್ದಾರೋ, ಯಾರೂ ಕೊಟ್ಟಿದ್ದಾರೋ ಎನ್ನುವುದೇ ನಿಮಗೆ ಗೊತ್ತಿಲ್ಲ ಎಂದರೆ ಹೇಗೆ.? ನಿಮ್ಮ ಅಧಿಕಾರಿಗಳು ಝಿರೋ ಟ್ರಾಫಿಕ್ ಮಾಡಿಕೊಟ್ಟಿರುವುದನ್ನು ಇಡೀ ದೇಶವೇ ನೋಡಿದೆ. ಈ ರೀತಿ ಹೇಳಿಕೆ ಕೊಡಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೇ ? ದೇಶಭಕ್ತರಿಗೆ, ಅನಿವಾರ್ಯ ಪರಿಸ್ಥಿತಿಯಲ್ಲಿ ಇರುವವರಿಗೆ ನೀಡಬೇಕಾದ ವ್ಯವಸ್ಥೆಯನ್ನು ಇಂತಹವರಿಗೆಲ್ಲ ನೀಡಿದರೆ ಸಮಾಜವನ್ನು ಮುನ್ನಡೆಸಲು ಹೇಗೆ ಸಾಧ್ಯ? ಎಂದು ರಮೇಶ್ ಕುಮಾರ್ ಕಿಡಿಕಾರಿದರು.
ಸ್ಪೀಕರ್ ಆಕ್ರೋಶಕ್ಕೆ ಮೌನವಾದ ಗೃಹಸಚಿವರು, ಇದನ್ನು ಗಂಭೀರವಾಗಿ ಪರಿಗಣಿಸಿ, ದೃಶ್ಯಾವಳಿಗಳನ್ನು ಪುನರ್ ಪರಿಶೀಲಿಸುವುದಾಗಿ ಸದನಕ್ಕೆ ಭರವಸೆ ನೀಡಿದರು.
ಇನ್ನು ಕಳೆದ ಶುಕ್ರವಾರ ವಿಶ್ವಾಸಮತ ಯಾಚನೆ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಎಚ್.ಡಿ.ರೇವಣ್ಣ, ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬರಲು ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಿದ್ದೇಕೆ ಎಂದು ನಗರ ಪೊಲೀಸ್ ಆಯುಕ್ತರನ್ನು ಸದನಕ್ಕೆ ಕರೆಯಿಸಿ ಕೇಳಬೇಕು ಎಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿದ್ದರು.
ಯುಎನ್‍ಐ ಯುಎಲ್ ಎಸ್‍ಎಂಆರ್ ಕೆವಿಆರ್ 1845