Friday, Oct 30 2020 | Time 07:10 Hrs(IST)
Karnataka Share

ವಿಪಕ್ಷಗಳ ಜೊತೆ ಚರ್ಚಿಸಿ ಅಧಿವೇಶನ ಕಡಿತಕ್ಕೆ ನಿರ್ಧಾರ; ಮುಖ್ಯಮಂತ್ರಿ

ಬೆಂಗಳೂರು, ಸೆ.21 (ಯುಎನ್ಐ) ವಿಧಾನಮಂಡಲ ಅಧಿವೇಶನವನ್ನು ಮೂರು ದಿನಕ್ಕೆ ಕಡಿತಗೊಳಿಸುವ ಬಗ್ಗೆ ವಿಪಕ್ಷ ಗಳ ಸಹಕಾರ ಕೋರುತ್ತೇವೆ, ಯಾಕೆಂದರೆ 50 ರಿಂದ 60 ಶಾಸಕರು ಕೊವೀಡ್ ನಿಂದ ಸದನಕ್ಕೆ ಬರುತ್ತಿಲ್ಲ. ಅವರನ್ನು ಹೊರಗಿಟ್ಟು ಸದನ ನಡೆಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯ ಸದಸ್ಯರು ಹೊರಗಿರುವುದರಿಂದ ಬೇಗ ಅಧಿವೇಶನ ಮುಗಿಸಲು ವಿಪಕ್ಷ ನಾಯಕರ ಸಹಕಾರ ಕೇಳುತ್ತೇನೆ. ಪ್ರತಿಪಕ್ಷಗಳು ಯಾವ ರೀತಿ ಸಹಕಾರ ಕೊಡುತ್ತಾರೆ ಎಂಬುದನ್ನು ನೋಡೋಣ. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಆ ಸಭೆಯಲ್ಲಿ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಹಣಕಾಸು ಮಸೂದೆಗಳಿಗೆ ಒಪ್ಪಿಗೆ ಪಡೆಯಬೇಕಾಗಿದೆ. ಹೀಗಾಗಿ ಅಧಿವೇಶನದಲ್ಲಿ ಅಗತ್ಯ ಮಸೂದೆ ಪಾಸ್ ಮಾಡಿಕೊಳ್ಳಲಾಗುವುದು. ಎಷ್ಟು ದಿನ ಮಾಡಬೇಕೆಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ತೆಗದುಕೊಳ್ಳುತ್ತೇವೆ ಎಂದರು.
ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿ, ಕೊರೊನಾ ಕಾರಣದಿಂದಾಗಿ 30-40 ಶಾಸಕರನ್ನು ಹೊರಗಿಟ್ಟು ಅಧಿವೇಶನ ನಡೆಸಬೇಕಾಗಿದೆ. ಕಲಾಪ ಸಲಹಾ ಸಮಿತಿ ಯಾವ ತೀರ್ಮಾನ ಕೈಗೊಳ್ಳುತ್ತಾರೋ ನೋಡೋಣ ಎಂದು ಹೇಳಿದರು.
ಕಲಾಪ ಸಲಹಾ ಸಮಿತಿ ಏಕಪಕ್ಷೀಯ ತೀರ್ಮಾನ ಕೈಗೊಳ್ಳುವುದಿಲ್ಲ, ಅಲ್ಲಿ ಸ್ಪೀಕರ್ ಕೂಡ ಇರುತ್ತಾರೆ ಎಂದು ಸಿ.ಟಿ.ರವಿ ಹೇಳಿದರು.
ಯುಎನ್ಐ ಎಸ್ ಎಂಆರ್ ಎಎಚ್ 1100
More News
ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

29 Oct 2020 | 9:12 PM

ಬೆಂಗಳೂರು, ಅ 28 (ಯುಎನ್ಐ) 1. ರಾಜ್ಯದಲ್ಲಿ 4 ಸಾವಿರದ 25 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸಂಖ್ಯೆ 8 ಲಕ್ಷದ 16 ಸಾವಿರದ 809ಕ್ಕೆ ಏರಿಕೆಯಾಗಿದೆ.

 Sharesee more..
ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

29 Oct 2020 | 8:53 PM

ತುಮಕೂರು,ಅ 29 (ಯುಎನ್ಐ) ಹಿಂದಿನ ಸರ್ಕಾರದ ಒಳ್ಳೆಯ ಯೋಜನೆ, ಕಾರ್ಯಕ್ರಮಗಳಿಗೆ ಅನುದಾನ ನೀಡದೇ ಇತಿಶ್ರೀ ಹಾಡಿದ್ದೆ ಬಿಜೆಪಿ, ಯಡಿಯೂರಪ್ಪ ಸರ್ಕಾರದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯವಾಗ್ದಾಳಿ ಮಾಡಿದ್ದಾರೆ.

 Sharesee more..