Sunday, Jul 5 2020 | Time 12:44 Hrs(IST)
 • ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡುವುದಿಲ್ಲ,ಬೆಂಗಳೂರು ಬಿಟ್ಟು ಊರಿಗೆ ತೆರಳಬೇಡಿ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ
 • ದೆಹಲಿಯಲ್ಲಿ ಸೋಂಕಿತರು ಮನೆಯಲ್ಲಿಯೇ ಚೇತರಿಸಿಕೊಳ್ಳುತ್ತಿದ್ದಾರೆ; ಕೇಜ್ರವಾಲ್
 • ದುಬೈನಲ್ಲಿ ಬಸವಣ್ಣ ಪ್ರತಿಮೆ ಸ್ಥಾಪನೆ
 • ಭಾರತದಲ್ಲಿ 24,850 ಕೋವಿಡ್ ಪ್ರಕರಣಗಳು ವರದಿ, ಗುಣಮುಖರಾದವರ 4 ಲಕ್ಷಕ್ಕೇರಿಕೆ
 • ನ್ಯೂಜಿಲೆಂಡ್‌ನಲ್ಲಿ ಹೊಸದಾಗಿ ಮೂರು ಕೊರೊನಾ ಪ್ರಕರಣ ದೃಢ
 • ಭಾನುವಾರದ ಲಾಕ್‌ಡೌನ್‌ ಬಹುತೇಕ ಯಶಸ್ವಿ: ಜನಜೀವನ ಸ್ತಬ್ಧ
 • ಕಂದಮಾಲ್‍ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ನಾಲ್ವರು ನಕ್ಸಲರು ಹತ
 • ಭಾರತದಲ್ಲಿ ಒಂದೇ ದಿನ ೨೪,೮೫೦ ಪ್ರಕರಣಗಳು, ೬೧೩ ಸಾವುಗಳು !
 • ಬ್ರೆಜಿಲ್‍ನಲ್ಲಿ ಒಂದೇ ದಿನ 38,000 ಹೊಸ ಕೊವಿಡ್‍ ಪ್ರಕರಣಗಳು ದೃಢ, 1,000ಕ್ಕೂ ಹೆಚ್ಚು ಸೋಂಕಿತರು ಸಾವು
 • ಭಾರತವನ್ನು ಅಮೆರಿಕಾ ಸದಾ ಪ್ರೀತಿಸುತ್ತದೆ; ಡೊನಾಲ್ಡ್ ಟ್ರಂಪ್
 • ಕೋವಿಡ್‌-19: ಹಾಸನದಲ್ಲಿ ಮತ್ತೊಂದು ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ
 • ಶ್ರೀನಗರ- ಪುಲ್ವಾಮ ರಸ್ತೆಯಲ್ಲಿ ಸ್ಫೋಟ, ಸಿಆರ್ಪಿಎಫ್ ಯೋಧನಿಗೆ ಗಾಯ
 • ಜಪಾನ್‍ ನಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ-ಏಳು ಮಂದಿ ಸಾವು
 • ಸಣ್ಣ ಉದ್ಯಮಗಳಿಗೆ ತುರ್ತು ಸಾಲ, ತಾತ್ಕಾಲಿಕ ವಿಸ್ತರಣೆಗೆ ಟ್ರಂಪ್ ಸಹಿ
 • ಅಮೆರಿಕನ್ನರ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ತಣ್ಣಿರು ಹಾಕಿದ ಕರೋನ
Karnataka Share

ವಿಪತ್ತು ನಿರ್ವಹಣಾ ನೀತಿ ಶೀಘ್ರ ಅಂತಿಮಗೊಳಿಸಿ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ನ 20 (ಯುಎನ್ಐ) ರಾಷ್ಟ್ರೀಯ ವಿಪತ್ತು ನಿರ್ವಹಣಾ ನೀತಿ ಮಾದರಿಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ನೀತಿ ಕರಡು ಸಿದ್ಧವಿದ್ದು, 8 ವಾರದೊಳಗೆ ಇದನ್ನು ಅಂತಿಮ ಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯನ್ನು 8 ವಾರದೊಳಗೆ ಅಂತಿಮ ಗೊಳಿಸಬೇಕು. ಪ್ರತಿ ಇಲಾಖೆಯಲ್ಲಿ ವಿಪತ್ತು ನಿರ್ವಹಣಾ ಯೋಜನೆ ರೂಪಿಸಬೇಕು.ವಿಪತ್ತು ನಿರ್ವಹಣೆ ಗೆ ಎಸ್ ಡಿ ಆರ್ ಎಫ್ ಗೆ 14 ನೇ ಹಣಕಾಸು ಆಯೋಗದಡಿ 1527 ಕೋಟಿ ರೂಪಾಯಿ ಅನುದಾನ ನಿಗದಿ ಪಡಿಸಲಾಗಿದೆ. ಇದರಲ್ಲಿ ಕೇಂದ್ರದ ಪಾಲು ಶೇ. 75 ರಷ್ಟು ಇದ್ದು, ರಾಜ್ಯದ ಪಾಲು ಶೇಕಡಾ 25 ರಷ್ಟಿದೆ. ಆದರೆ ರಾಜ್ಯ ಸರ್ಕಾರ ತುರ್ತು ಸಂದರ್ಭಗಳಲ್ಲಿ ಇನ್ನೂ ಹೆಚ್ಚಿನ ಮೊತ್ತ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದರು.
ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮಾತನಾಡಿ, ರಾಜ್ಯದ ಎಲ್ಲ ವಿಭಾಗಗಳಲ್ಲಿ ತಲಾ 50 ಜನರ ಎಸ್ ಡಿ ಆರ್ ಎಫ್ ರಕ್ಷಣಾ ತಂಡಗಳ ನಿಯೋಜನೆಗೆ ಕ್ರಮ ವಹಿಸಲಾಗಿದ್ದು, ಎಸ್ ಡಿಆರ್ ಎಫ್ ಅಡಿ ರಕ್ಷಣಾ ಉಪಕರಣಗಳ ಖರೀದಿಗೆ 20 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ವಿವರಿಸಿದರು.
ಇತ್ತೀಚೆಗೆ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ಸಂತ್ರಸ್ತರಿಗೆ ಪರಿಹಾರ ವಿತರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅರ್ಹ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ನಿಬಂಧನೆಗಳನ್ನು ಸರಳೀಕರಣಗೊಳಿಸುವಂತೆ ಇದೇ ವೇಳೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಮನೆ ಕಳೆದುಕೊಂಡವರಿಗೆ ಮೊದಲ ಕಂತಿನ 1 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಿದ ಕುರಿತು ಫಲಾನುಭವಿಗಳಿಗೆ ಪತ್ರ ಬರೆದು ಮಾಹಿತಿ ನೀಡಿ, ಮನೆ ನಿರ್ಮಿಸುವಂತೆ ಜನರಿಗೆ ತಿಳಿಸುವಂತೆ ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚಿಸಿದ್ದಾರೆ ಎಂದರು.
ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಪಶು ಸಂಗೋಪನಾ ಸಚಿವ ಪ್ರಭು ಚವಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಯುಎನ್ಐ ಎಸ್ಎಂಆರ್ ವಿಎನ್ 1610