Wednesday, Feb 26 2020 | Time 10:32 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ವಾಯುಗಡಿ ನೀಲನಕ್ಷೆಗೆ, ಸಿಡಿಎಸ್ ಮುಖ್ಯಸ್ಥ ರಾವತ್ ಗಡುವು

ನವದೆಹಲಿ, ಜ 2 (ಯುಎನ್ಐ) ಭಾರತೀಯ ವಾಯುಗಡಿಯನ್ನು ಮತ್ತಷ್ಟು ಶಕ್ತಿಶಾಲಿಗೊಳಿಸುವ ನಿಟ್ಟಿನಲ್ಲಿ ಬರುವ ಜೂನ್ ಅಂತ್ಯದೊಳಗೆ ನೀಲನಕ್ಷೆ ತಯಾರಿಸುವಂತೆ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ (ಸಿಡಿಎಸ್) ಅಧಿಕಾರ ಸ್ವೀಕರಿಸಿದ ಬಿಪಿನ್ ರಾವತ್, ಆದೇಶಿಸಿದ್ದಾರೆ.
ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ಆದೇಶವಾಗಿದೆ.
ಇದಲ್ಲದೆ, ಭಾರತೀಯ ವಾಯುಗಡಿಯೊಳಗಿನ ಕೆಲವು ಪ್ರದೇಶಗಳಲ್ಲಿ ಮೂರೂ ಪಡೆಗಳ ಸಹಭಾಗಿತ್ವದ ಕಾವಲು ಹಾಗೂ ಜಂಟಿ ಹೋರಾಟ ಅನಿವಾರ್ಯವೂ ಆಗಿದೆ ಎಂದು ಪ್ರಸ್ತಾಪಿಸಿದ್ದಾರೆ.

ಅಂಥ ವಲಯಗಳನ್ನು ಗುರುತಿಸಿ, ಅಲ್ಲಿ ಮೂರೂ ಪಡೆಗಳ ಪ್ರತಿನಿಧಿಗಳು ದಿನದ 24 ಗಂಟೆಯೂ ಸೇವೆಗೆ ಲಭ್ಯವಿರುವಂಥ ವಿನೂತನ ವ್ಯವಸ್ಥೆ ಜಾರಿಗೆ ತರಲು ರಾವತ್ ಅಲೋಚನೆ ಮಾಡಿದ್ದಾರೆ ಎನ್ನಲಾಗಿದೆ.
ಮೂರು ಪಡೆಗಳ ಸಹಭಾಗಿತ್ವಕ್ಕೆ ಪೂರಕವಾಗಿ ಯಾವ ಕ್ರಮಗಳನ್ನು ಮೂರೂ ಪಡೆಗಳು ಕೈಗೊಳ್ಳಬಹುದು ಎಂಬುದರ ಬಗ್ಗೆ ಪ್ರಸ್ತಾವನೆ ಸಲ್ಲಿಸಲೂ ಮೂರು ಪಡೆಗಳಿಗೆ ಅವರು ಡಿಸೆಂಬರ್ 31 ರ ಗಡುವು ನೀಡಿದ್ದಾರೆ ಎಂದೂ ಹೇಳಲಾಗಿದೆ.
ಯುಎನ್ಐ ಕೆಎಸ್ಆರ್ 2120