Sunday, Aug 9 2020 | Time 14:40 Hrs(IST)
 • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
 • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
Special Share

ವಿಶ್ವ ಆರೋಗ್ಯ ಸಂಸ್ಥೆ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಡಾ|| ಹರ್ಷವರ್ಧನ್ ಅಧಿಕಾರ ಸ್ವೀಕಾರ

ನವದೆಹಲಿ, ಮೇ ೨೨(ಯುಎನ್‌ಐ) ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ|| ಹರ್ಷ ವರ್ಧನ್ ಅವರು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಓ) ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕೊರೊನಾ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೇಂದ್ರ ಆರೋಗ್ಯ ಸಚಿವರು, ಜಪಾನ್ನ ಡಾ.ಹಿರೋಕಿ ನಕತಾನಿ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೊರೊನಾ ಜಾಗತಿಕ ಬಿಕ್ಕಟ್ಟಿನ ಅವಧಿಯಲ್ಲಿ ನಾನು ಅಧಿಕಾರ ವಹಿಸಿಕೊಂಡಿದ್ದೇನೆ ಎಂಬ ಅರಿವು ನನಗಿದೆ. ಮುಂದಿನ ೨ ದಶಕಗಳ ಕಾಲ ಹಲವು ಆರೋಗ್ಯ ಸವಾಲುಗಳು ಜಗತ್ತಿನ ಮುಂದೆ ಎದುರಾಗಲಿದ್ದು ಈ ಎಲ್ಲಾ ಸವಾಲುಗಳನ್ನು ಸಾಮೂಹಿಕವಾಗಿ ಎದುರಿಸಬೇಕು ಎಂದು ಬಯಸುವುದಾಗಿ ಅಧಿಕಾರ ವಹಿಸಿಕೊಂಡ ನಂತರ ಹರ್ಷವರ್ಧನ್ ಪ್ರತಿಕ್ರಿಯಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ಮಂಡಳಿ ಆರೋಗ್ಯ ವಲಯದಲ್ಲಿ ತಾಂತ್ರಿಕ ಅರ್ಹತೆ ಹೊಂದಿದ ೩೪ ವ್ಯಕ್ತಿಗಳನ್ನು ಒಳಗೊಂಡಿದೆ, ಪ್ರತಿಯೊಬ್ಬ ಸದಸ್ಯನೂ ವಿಶ್ವ ಆರೋಗ್ಯ ಸಂಸ್ಥೆಯ ಸದಸ್ಯ ರಾಷ್ಟ್ರದಿಂದ ನೇಮಕಗೊಂಡಿದ್ದಾರೆ. ಸದಸ್ಯ ರಾಷ್ಟ್ರಗಳನ್ನು ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ. ಮಂಡಳಿಯು ವರ್ಷಕ್ಕೆ ಎರಡು ಬಾರಿ ಸಭೆ ನಡೆಸಲಿದ್ದು, ಪ್ರಧಾನ ಸಭೆ ಜನವರಿಯಲ್ಲಿ ನಡೆಸಲಾಗುತ್ತದೆ.
ಯುಎನ್‌ಐ ಕೆವಿಆರ್ ೨೦೨೮