Friday, Sep 25 2020 | Time 11:42 Hrs(IST)
 • ಡ್ರಗ್ಸ್ ಪ್ರಕರಣ: ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ
 • ಡ್ರಗ್ಸ್ ಪ್ರಕರಣ: ವಿಚಾರಣೆಗೆ ಕರೆದ ಮಾತ್ರಕ್ಕೆ ನಾನು ಅಪರಾಧಿಯಲ್ಲ; ನಟಿ ಅನುಶ್ರೀ
 • ಕೃಷಿ ಸಂಬಂಧಿತ ಮಸೂದೆಗೆ ವಿರೋಧ; ಹೆದ್ದಾರಿ ತಡೆದು ಅನ್ನದಾತರ ಆಕ್ರೋಶ
 • ಬಿಹಾರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಪ್ರಕಟ ಸಾಧ್ಯತೆ
 • ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86 ಸಾವಿರ ಹೊಸ ಕೊರೊನಾ ಪ್ರಕರಣಗಳು, 1141 ಸಾವು!
 • ಸೆನ್ಸೆಕ್ಸ್ 400 ಅಂಕ ಚೇತರಿಕೆ
 • ಶೋಪಿಯಾನ್ ಮಿನಿ ಸಚಿವಾಲಯದ ಭದ್ರತೆಯಲ್ಲಿದ್ದ ಸೈನಿಕನ ಮೇಲೆ ಉಗ್ರರ ದಾಳಿ
 • ಕೊವಿಡ್-19 : 3 ಕೋಟಿ 20 ಲಕ್ಷ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
 • ಅವಿಶ್ವಾಸ ನಿರ್ಣಯ: ಯಾವಾಗ ಬೇಕಾದರೂ ಚರ್ಚೆಗೆ ಸಿದ್ಧ-ಸಿದ್ದರಾಮಯ್ಯ
 • ಐಪಿಎಲ್‌ 2020: ಕಿಂಗ್ಸ್ ಇಲೆವೆನ್‌ ಪಂಜಾಬ್‌ ವಿರುದ್ಧ ಸೋಲಿನ ಜವಾಬ್ದಾರಿ ಹೊತ್ತ ವಿರಾಟ್‌ ಕೊಹ್ಲಿ
 • ಐಪಿಎಲ್‌ 2020: ನಿಧಾನಗತಿಯಲ್ಲಿ ಬೌಲಿಂಗ್‌ ಮಾಡಿದ್ದಕ್ಕಾಗಿ ಕೊಹ್ಲಿಗೆ 12 ಲಕ್ಷ ರೂ ದಂಡ
 • ಕೆ ಎಲ್‌ ರಾಹುಲ್‌ ಅವರ ಎರಡು ಕ್ಯಾಚ್‌ ಬಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್‌ ಕೊಹ್ಲಿ
 • ಪಂಜಾಬ್, ಹರಿಯಾಣದಲ್ಲಿ ರೈತರ ಬಂದ್ ಗೆ ಉತ್ತಮ ಪ್ರತಿಕ್ರಿಯೆ
Karnataka Share

ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್

ಬೆಂಗಳೂರು, ಜುಲೈ 22 (ಯುಎನ್ಐ) ರಾಜ್ಯ ರಾಜಕಾರಣದ ಬಿಕ್ಕಟ್ಟು ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರಂತರ ಆದೇಶದ ನಂತರವೂ, ವಿಧಾನಸಭೆಯ ಸ್ಪೀಕರ್ ಅವರು ಅಲ್ಪಮತಕ್ಕೆ ಕುಸಿದಿರುವ ರಾಜ್ಯ ಸರ್ಕಾರಕ್ಕೆ ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಆರೋಪಿಸಿ ವ್ಯಕ್ತಿಯೋರ್ವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷಕ್ಕೆ ವಿಶ್ವಾಸ ಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ನೀಡಬೇಕು ಹಾಗೂ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳ್ಳುವರೆಗೆ ಯಾವುದೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳದಂತೆ ಮುಖ್ಯಮಂತ್ರಿಗಳಿಗೆ ಸೂಚಿಸಬೇಕು ಎಂದು ಕೋರಿ ಆನಂದ ಮೂರ್ತಿ ಎಂಬ ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಹಾಗೂ ವಿಧಾನಸಭೆಯ ಸ್ಪೀಕರ್ ಅನ್ನು ಪ್ರತಿವಾದಿಗಳನ್ನಾಗಿಸಲಾಗಿದೆ. ಅರ್ಜಿ ಮಂಗಳವಾರ ಅಥವಾ ಬುಧವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
2018ರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ಐದು ವರ್ಷಗಳ ಅವಧಿಗೆ ಮೈತ್ರಿ ಸರ್ಕಾರ ರಚಿಸಿತ್ತು. 2019ರ ಜುಲೈ 1ರಂದು ಆಡಳಿತಾರೂಢ ಪಕ್ಷದ ಕೆಲ ಶಾಸಕರು ವಿಧಾನಸಭೆಯ ಸ್ಪೀಕರ್ ಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕೆಲವರು ಪಕ್ಷಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದಾರೆ. ಈ ಸಂಬಂಧ ರಾಜ್ಯಪಾಲರಿಗೂ ಲಿಖಿತ ಮಾಹಿತಿ ನೀಡಿದ್ದಾರೆ. ಜೊತೆಗೆ, ರಾಜೀನಾಮೆಯನ್ನು ಅಂಗೀಕರಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೂ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚಿಸುವುದಾಗಿ ವಿಧಾನಸಭೆಯಲ್ಲಿ ಘೋಷಿಸಿ, ಸ್ಪೀಕರ್ ಅವರಿಂದ ಸಮಯ ಕೇಳಿದ್ದರು.
ಆದರೆ, ವಿಶ್ವಾಸ ಮತ ಯಾಚನೆಗೆ ಮುನ್ನವೇ ಮುಖ್ಯಮಂತ್ರಿಗಳು ಕಡತಗಳ ವಿಲೇವಾರಿ, ವರ್ಗಾವಣೆ, ಬಡ್ತಿ ಸೇರಿದಂತೆ ಇತರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ನಡುವೆ, ರಾಜ್ಯಪಾಲರು ಕೂಡ ವಿಶ್ವಾಸ ಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ಪದೇ ಪದೇ ಸಂದೇಶ ನೀಡಿದ್ದರೂ, ಅದರ ಪಾಲನೆಯಾಗುತ್ತಿಲ್ಲ. ಇದರಿಂದ ರಾಜ್ಯದ ಜನರು ಅಭಿವೃದ್ಧಿ ಕಾರ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವಾಸ ಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಯುಎನ್ಐ ಎಸ್ಎಚ್ ಎಸ್ಎ 1835