Wednesday, Feb 26 2020 | Time 10:51 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ವಿಶೇಷ ಸಬ್ ಇನ್ಸ್ ಪೆಕ್ಟರ್ ಹತ್ಯೆ ಪ್ರಕರಣ: ಯುಎಪಿಎ ಕಾಯ್ದೆಯಡಿ ಐವರು ಪೊಲೀಸರ ವಶಕ್ಕೆ

ಕನ್ಯಾಕುಮಾರಿ, ಜ 21(ಯುಎನ್‍ಐ)- ಈ ತಿಂಗಳ 8ರಂದು ತಮಿಳುನಾಡು-ಕೇರಳ ಗಡಿಯಲ್ಲಿ 57 ವರ್ಷದ ವಿಶೇಷ ಸಬ್ ಇನ್ಸ್‍ಪೆಕ್ಟರ್ (ಎಸ್‍ಎಸ್‍ಐ) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಸ್ಲಾಮಿಕ್ ಮೂಲಭೂತವಾದಿಗಳ ಜೊತೆ ನಂಟು ಹೊಂದಿದ್ದಾರೆನ್ನಲಾದ ಐವರನ್ನು ಕಾನೂನು ಬಾಹಿರ ಚಟುವಟಿಕೆ(ತಡೆ) ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ತಿರುನಲ್ವೇಲಿ ಜಿಲ್ಲೆಯ ವಿವಿಧ ಭಾಗಗಳಿಗೆ ಸೇರಿದ ಎಸ್.ಮೊಹಮದ್ ಜಕಾರಿಯಾ(37), ಅಲ್ ಹಬೀಬ್(31), ಎಂ.ಮೊಹಮದ್ ಅಲಿಯಾಸ್ ಮೆಷಾಕ್, ಎ.ಅಬ್ದುಲ್ ಖಾದರ್ (31) ಹಾಗೂ ಎಂ.ಸಯ್ಯದ್ ಖಾಜಾ ಕರೀಮ್ ನವಾಜ್ ಬಂಧಿತರಾಗಿದ್ದು, ಇವರೆಲ್ಲಾ ಶಂಕಿತ ಭಯೋತ್ಪಾದಕರಾದ ಎ.ಅಬ್ದುಲ್ ಶಮೀಮ್(32) ಹಾಗೂ ಎಂ.ತೌಫಿಕ್ (28) ರೊಂದಿಗೆ ಯೋಜನೆ ರೂಪಿಸಿ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಡಂತಲುಮೂಡು ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಎಸ್‍ಎಸ್‍ಐ ವಿಲ್ಸನ್ ಅವರನ್ನು ಅಬ್ದುಲ್ ಶಮೀಮ್ ಮತ್ತು ತೌಫಿಕ್ ಇರಿದು, ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಹಂತಕರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಿರ್ದಿಷ್ಟ ಮಾಹಿತಿಯಂತೆ ಪೊಲೀಸ್ ತಂಡಗಳು ವಿಕ್ರಮಸಿಂಘೆ ಪುರಂ, ತೆಂಕಾಸಿ ಮತ್ತು ಪೆಟ್ಟೈ ಪ್ರದೇಶಗಳಿಗೆ ತೆರಳಿ ಐವರನ್ನು ಬಂಧಿಸಿವೆ.
ಇದಕ್ಕೂ ಮೊದಲು ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವುದಕ್ಕಾಗಿ ಅಬ್ದುಲ್ ಶಮೀಮ್ ಮತ್ತು ತೌಫಿಕ್ ಅವರನ್ನು ಯುಎಪಿಎ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1544