Monday, Jul 22 2019 | Time 19:47 Hrs(IST)
 • ಆರ್ ಟಿಐ ಮಸೂದೆಗೆ ಕಾಂಗ್ರೆಸ್ ವಿರೋಧ; ಹಿಂಪಡೆಯುವಂತೆ ಒತ್ತಾಯ
 • ಚಂದ್ರಯಾನ್-2ಕ್ಕೆ ಭಾರತೀಯ ಉಕ್ಕು ಪ್ರಾಧಿಕಾರದ ವಿಶೇಷ ಲೋಹ ಬಳಕೆ
 • ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಲ್ ರಾಜ್ ಮಿಶ್ರಾ ಪ್ರಮಾಣವಚನ
 • ವಿಧಾನಸಭೆಯಲ್ಲಿ ಲಿಂಬಾವಳಿ ಕಣ್ಣೀರು
 • ದಾಖಲೆ ನಿರ್ಮಿಸಿದ ಅಮರನಾಥ ಯಾತ್ರೆ; 22 ದಿನಗಳಲ್ಲಿ 2 85 ಲಕ್ಷ ಯಾತ್ರಿಕರ ಭೇಟಿ
 • ಪ್ರದರ್ಶನ ಅಥವಾ ರವಾನೆ ಸರಕುಗಳ ಮೇಲಿನ ಸಂಯೋಜಿತ ತೆರಿಗೆ ಐಜಿಎಸ್‌ಟಿ ರದ್ದು
 • ಕ್ರಿಪ್ಟೋ ಕರೆನ್ಸಿ ಮೇಲೆ ನಿಷೇಧ ವಿಧಿಸಲು ಸರ್ಕಾರ ನೇಮಿಸಿದ್ದ ಸಮಿತಿ ಸಲಹೆ
 • ಕಾಶ್ಮೀರದ ದೋಡಾದಲ್ಲಿ ಉಗ್ರರ ಅಡಗುದಾಣ ನಾಶ
 • ವಿಧಾನಸಭೆಯಲ್ಲಿ ಸದ್ದುಮಾಡಿದ ಝೀರೋ ಟ್ರಾಫಿಕ್
 • ಟಿವಿಎಸ್‌ ಮಾರಾಟ ಶೇ 7 8ರಷ್ಟು ಏರಿಕೆ
 • ಕಳೆದ 3 ವರ್ಷದಲ್ಲಿ ಭಾರತೀಯ ನೌಕಾ ಸಿಬ್ಬಂದಿ ಸಂಖ್ಯೆ ಜಾಗತಿಕವಾಗಿ ಶೇ 45ರಷ್ಟು ಏರಿಕೆ
 • ವಿಶ್ವಾಸಮತ ಯಾಚನೆಗೆ ಕಾಲಮಿತಿ ನಿಗದಿಪಡಿಸುವಂತೆ ಸ್ಪೀಕರ್ ಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಪಿಐಎಲ್
 • ಕ್ಸಿಯೋಮಿಯಿಂದ ರೆಡ್‌ಮಿ ಕೆ 20 ಸರಣಿ, ರೆಡ್‌ಮಿ 7 ಎ ಸ್ಮಾರ್ಟ್‌ಪೋನ್ ಬಿಡುಗಡೆ
 • ಸುಪ್ರಿಂಕೋರ್ಟ್ ತೀರ್ಪು ಬರುವತನಕ ವಿಶ್ವಾಸಮತ ಮುಂದೂಡಬೇಕು : ದಿನೇಶ್ ಗುಂಡೂರಾವ್
 • ಟ್ರಂಪ್ ಭೇಟಿಗೆ ಮುಂದಾದ ಇಮ್ರಾನ್ ಖಾನ್
business economy Share

ವಾಹನ ಉದ್ಯಮದಲ್ಲಿ ಕಳಪೆ ಸಾಧನೆಗೆ ಕೇಂದ್ರವೇ ಕಾರಣ: ಕಾಂಗ್ರೆಸ್‌ ಆರೋಪ

ನವದೆಹಲಿ, ಜುಲೈ 11 (ಯುಎನ್‌ಐ) ವಾಹನಗಳ ಮಾರಾಟ ಕುಸಿತ ಮತ್ತು ಉದ್ಯಮದ ಆರ್ಥಿಕ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ಗುರುವಾರ ಕಾಂಗ್ರೆಸ್‌ ಆರೋಪಿಸಿದೆ.
10 ವರ್ಷಗಳಲ್ಲಿ ವಾಹನ ಮಾರಾಟ ಅತ್ಯಂತ ಕಳಪೆ ಮಟ್ಟ ತಲುಪಿದ್ದು, ಪ್ರಯಾಣಿಕ ಕಾರುಗಳು ಮತ್ತು ವಾಣಿಜ್ಯ ವಾಹನಗಳ ಉತ್ಪಾದನಾ ಪ್ರಮಾಣವು ಕಳೆದ 6 ವರ್ಷಗಳಲ್ಲಿ ಕಡಿಮೆಯಾಗಿದೆ. ಮಾರಾಟವು ಶೇ.25ರಷ್ಟು ಕುಸಿದಿದೆ ಎಂದು ಎಐಸಿಸಿ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಮಾಧ್ಯಮಗಳ ವರದಿ ಉಲ್ಲೇಖಿಸಿದರು.

ಆಟೋ ಕಂಪೆನಿಗಳು ಕಾರ್ಮಿಕರಿಗೆ ಕೆಲಸಕ್ಕೆ ಬರದಂತೆ ಒತ್ತಾಯಿಸುವ ಸ್ಥಿತಿ ಬಂದಿದೆ ಎಂದು ಆಟೋಮೊಬೈಲ್ ಉತ್ಪಾದಕರ ಒಕ್ಕೂಟ(ಎಸ್‌ಐಎಮ್) ಹೇಳಿದೆ.
2008-09 ಮತ್ತು 2011-12ಕ್ಕಿಂತ ಇಂದಿನ ವಾಹನ ಮಾರುಕಟ್ಟೆ ಸ್ಥಿತಿ ಶೋಚನೀಯವಾಗಿದೆ ಎಂದು ಎಸ್‌ಐಎಎಂ ತಿಳಿಸಿದೆ.
ಯುಎನ್‌ಐ ಕೆಎಸ್‌ವಿ ವಿಎನ್‌ಎಲ್‌ 1904