Wednesday, Feb 26 2020 | Time 10:50 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ವುಹಾನ್‌ ವೈರಸ್‌: ಏಳು ವಿಮಾನ ನಿಲ್ದಾಣಗಳಲ್ಲಿ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ

ನವದೆಹಲಿ, ಜನವರಿ 21 (ಯುಎನ್‌ಐ) ಹಾಂಗ್ ಕಾಂಗ್ ಸೇರಿದಂತೆ ಚೀನಾದಿಂದ ಚೆನ್ನೈ, ಬೆಂಗಳೂರು, ಹೈದರಾಬಾದ್ ಮತ್ತು ಕೊಚ್ಚಿನ್ ಮೂಲಕ ಭಾರತಕ್ಕೆ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆಯನ್ನು ಆರಂಭಿಸಲಾಗಿದೆ. ವಿಶೇಷವಾಗಿ ದೇಹದ ಉಷ್ಣಾಂಶವನ್ನು ಪರಿಶೀಲಿಸಿ ವುಹಾನ್‌ ವೈರಸ್‌ನ ಸೋಂಕು ಇದೆಯೇ ಎಂದು ಪರಿಶೀಲಿಸಲಾಗುತ್ತಿದೆ.
ಇದಕ್ಕೂ ಮೊದಲು ದೆಹಲಿ, ಮುಂಬೈ ಮತ್ತು ಕೊಲ್ಕತ್ತಾ ವಿಮಾನ ನಿಲ್ದಾಣಗಳಲ್ಲಿ ಮಾತ್ರ ಈ ತಪಾಸಣೆಯನ್ನು ಕೈಗೊಳ್ಳಲಾಗುತ್ತಿತ್ತು. ಇದೀಗ ಇತರ ವಿಮಾನ ನಿಲ್ದಾಣಗಳಲ್ಲೂ ಈ ವ್ಯವಸ್ಥೆ ಜಾರಿಗೆ ತರಲಾಗಿದೆ.
ಚೀನಾದ ಹುಬೈ ಪ್ರಾಂತ್ಯದ ವುಹಾನ್‌ನಲ್ಲಿರುವ ‘ನೊವೆಲ್ ಕರೋನಾ ವೈರಸ್ ಕಾಯಿಲೆ (ಎನ್‌ಸಿಒವಿ)’ಯ ಸೋಂಕು ಹರಡುವ ಅಪಾಯದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಆರೋಗ್ಯ ನಿಯಂತ್ರಣ ಕೇಂದ್ರ, ಆರೋಗ್ಯ ಸೇವೆಗಳ ನಿರ್ದೇಶನಾಲಯದ ಸಲಹೆಯಂತೆ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕ್ರಿಯಾ ಯೋಜನೆಯನ್ನು ತಕ್ಷಣ ಜಾರಿಗೆ ತರಲು ಮತ್ತು ಗೊತ್ತುಪಡಿಸಲಾದ ವಿಮಾನ ನಿಲ್ದಾಣಗಳು ಮತ್ತು ಸಂಬಂಧಪಟ್ಟ ಎಲ್ಲಾ ವಿಮಾನಯಾನ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ವಿಮಾನಯಾನ ಸಚಿವಾಲಯ ಕರೆ ನೀಡಿದೆ.
ಜ್ವರ ಮತ್ತು ಕೆಮ್ಮು ಉಂಟಾಗಿರುವುದರ ಬಗ್ಗೆ ಮತ್ತು ಕಳೆದ 14 ದಿನಗಳಲ್ಲಿ ವುಹಾನ್ ನಗರಕ್ಕೆ ಭೇಟಿ ನೀಡಿರುವುದರ ಬಗ್ಗೆ ಸಂಬಂಧಪಟ್ಟ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅಥವಾ ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಸ್ವಯಂ ಹೇಳಿಕೆ ನೀಡಬೇಕು ಎಂದು ವಿಮಾನದಲ್ಲಿ ಕರೆ ನೀಡಲಾಗುತ್ತಿದೆ.
ವಿಮಾನಯಾನ ಸಿಬ್ಬಂದಿ, ವಿಮಾನದಿಂದ ಇಳಿಯುವ ಮೊದಲು ಪ್ರಯಾಣಿಕರಿಗೆ ಸ್ವಯಂ-ವರದಿ ಮಾಡುವ ನಮೂನೆಗಳನ್ನು ಭರ್ತಿ ಮಾಡಲು ಮಾರ್ಗದರ್ಶನ ನೀಡುತ್ತಾರೆ, ಇದರಿಂದಾಗಿ ಭರ್ತಿ ಮಾಡಿದ ಸ್ವರೂಪವನ್ನು ಎಪಿಹೆಚ್‌ಒ ಸಿಬ್ಬಂದಿ ಆಗಮಿಸಿದಾಗ ಪರಿಶೀಲಿಸುತ್ತಾರೆ.
ಆರೋಗ್ಯವಾಗಿರುವ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ತಮ್ಮ ಮುಂದಿನ ಪ್ರಯಾಣವನ್ನು ಮುಂದುವರಿಸಲು ಅವಕಾಶ ನೀಡಬೇಕು. ಅನಾರೋಗ್ಯದ ಪ್ರಯಾಣಿಕ ಅಥವಾ ಸಿಬ್ಬಂದಿಯಲ್ಲಿ ವುಹಾನ್ ಕರೋನಾ ವೈರಸ್ ಸಂಭವನೀಯ ಪ್ರಕರಣವೆಂದು ದೃಢಕರೀರಿಸಲ್ಪಟ್ಟರೆ, ಪ್ರಯಾಣಿಕರ ಲೊಕೇಟರ್ ಫಾರ್ಮ್ ಅನ್ನು ಬಳಸುವ ಸಂಪರ್ಕಗಳ ಬಗ್ಗೆ ಸಾರ್ವಜನಿಕ ಆರೋಗ್ಯ ಅಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಲಾಗಿದೆ.
ಯುಎನ್ಐ ಎಎಚ್ 2230