Wednesday, Feb 26 2020 | Time 10:20 Hrs(IST)
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಶಸ್ತ್ರಾಸ್ತ್ರ ಪರವಾನಗಿ ಪ್ರಕರಣ:13 ಕಡೆ ಸಿಬಿಐ ವ್ಯಾಪಕ ಶೋಧನೆ

ನವದೆಹಲಿ, ಡಿ 30 (ಯುಎನ್ಐ) ಶಸ್ತ್ರಾಸ್ತ್ರ ಪರವಾನಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಜಮ್ಮು ಮತ್ತು ಕಾಶ್ಮೀರ, ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಒಟ್ಟು 13 ಸ್ಥಳಗಳಲ್ಲಿ ಸಿಬಿಐ ವ್ಯಾಪಕ ಶೋಧ ನಡೆಸುತ್ತಿದೆ.
ಐಎಎಸ್ ಅಧಿಕಾರಿಗಳಾದ ಯಶಾ ಮುಡ್ಗಿಲ್ ಮತ್ತು ರಾಜೀವ್ ರಂಜನ್ ಮತ್ತು ಮಾಜಿ ಹಿರಿಯ ಅಧಿಕಾರಿಗಳ ನಿವಾಸಗಳ ಮೇಲೂ ಶೋದನೆ ನಡೆಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಮರುಸಂಘಟಿಸಿದ ನಂತರ ಇದು ಸಿಬಿಐ ಕೈಗೊಂಡ ಮೊದಲ ಪ್ರಮುಖ ಕಾರ್ಯಾಚರಣೆಯಾಗಿದೆ. ಇದನ್ನು ನಿಯಂತ್ರಿಸುವ ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆಯಡಿ ಅಲ್ಲಿ ಕಾರ್ಯನಿರ್ವಹಿಸುವ ಅಧಿಕಾರವನ್ನು ಅದು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೀಡಿದೆ ಸಿಬಿಐ ಜಮ್ಮು ಮತ್ತು ಕಾಶ್ಮೀರ ಸೇರಿ 13 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಆಗಸ್ಟ್ 5 ರಂದು ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜನೆ ಮಾಡಲಾಗಿತ್ತು ಐಎಎಸ್ ಅಧಿಕಾರಿಗಳಾದ ಯಶಾ ಮುಡ್ಗಿಲ್ ಮತ್ತು ರಾಜೀವ್ ರಂಜನ್ ಮತ್ತು ಮಾಜಿ ಹಿರಿಯ ಅಧಿಕಾರಿಗಳ ನಿವಾಸಗಳ ಮೇಲೂ ಲು ಶೋದನೆ ಮಾಡಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ, ಜಮ್ಮು, ಗುರಗಾಂವ್ ಮತ್ತು ನೋಯ್ಡಾದ ಸುಮಾರು 13 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ವಿವಿಧ ಜಿಲ್ಲೆಗಳಿಂದ ಸುಮಾರು ಎರಡು ಲಕ್ಷ ಶಸ್ತ್ರಾಸ್ತ್ರ ಪರವಾನಗಿಗಳನ್ನು ನೀಡುವಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಎರಡು ಸಿಬಿಐ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂದಿನ ಉಪ ಆಯುಕ್ತರು ಮತ್ತು ಕುಪ್ವಾರಾ, ಬಾರಾಮುಲ್ಲಾ, ಉಧಂಪುರ್, ಕಿಶ್ತ್ವಾರ್, ಶೋಪಿಯಾನ್, ರಾಜೌರಿ, ದೋಡಾ, ಪುಲ್ವಾಮಾ ಜಿಲ್ಲಾ ನ್ಯಾಯಾಧೀಶರ ಆವರಣದಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.
ಶೋಧನೆಯನ್ನು ಆಯಾ ಜಿಲ್ಲಾಧಿಕಾರಿಗಳು ನಡೆಸುತ್ತಿದ್ದಾರೆ.ನಿಯಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ಅನಿವಾಸಿಗಳಿಗೆ ಪರವಾನಗಿ ನೀಡುವಲ್ಲಿ ಅಂದಿನ ಸರ್ಕಾರಿ ನೌಕರರು ಅಕ್ರಮ ಲಂಚ ಪಡೆದಿದ್ದರೂ ಎಂದು ಆರೋಪಿಸಲಾಗಿದೆ.
ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಈ ವಿಷಯಕ್ಕೆ ಸಂಬಂಧಿಸಿದ ದಂಧೆಯನ್ನು ಹತ್ತಿಕ್ಕಿದ್ದರಿಂದ ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ ಒಪಿ ಗಲ್ಹೋತ್ರಾ ಅವರ ಶಿಫಾರಸ್ ಮೇರೆಗೆ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.
ಕಳೆದ ದಶಕದಲ್ಲಿ ಉಗ್ರಗಾಮಿ ಹಾವಳಿಗೆ ಒಳಗಾದ ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಿಂದ ಸುಮಾರು 4.29 ಲಕ್ಷ ಶಸ್ತ್ರಾಸ್ತ್ರ ಪರವಾನಗಿಗಳನ್ನು ನೀಡಲಾಗಿದೆ ಎಂದು ರಾಜಸ್ಥಾನ್ ಎಟಿಎಸ್ ಅಂದಾಜು ಮಾಡಿತ್ತು.
ಯುಎನ್ಐ ಕೆಎಸ್ಆರ್ 1558