Sunday, Aug 9 2020 | Time 14:15 Hrs(IST)
  • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
  • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
  • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
  • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
  • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
  • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
  • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
  • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
  • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
  • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
  • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
  • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
  • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
  • ಟ್ವಿಟರ್‌-ಟಿಕ್‌ಟಾಕ್‌ ವಿಲೀನ?-ಪ್ರಾಥಮಿಕ ಮಾತುಕತೆ ಹಂತದಲ್ಲಿ ಪ್ರಸ್ತಾವನೆ
  • ವಿಜಯವಾಡದ ಕೋವಿಡ್ ಆರೈಕೆ ಕೇಂದ್ರದಲ್ಲಿ ಬೆಂಕಿ ಘಟನೆ: ಶೋಕ ವ್ಯಕ್ತಪಡಿಸಿದ ಪ್ರಧಾನಿ
Special Share

ಶಾಕಿಂಗ್ ನ್ಯೂಸ್, ಒಂದೇ ಬಾವಿಯಿಂದ 9 ಮೃತದೇಹ ಪತ್ತೆ

ಹೈದರಾಬಾದ್ , ಮೇ 23 (ಯುಎನ್ಐ ) ತೆಲಂಗಾಣದ ವಾರಂಗಲ್ ನಲ್ಲಿ ಒಂದೇ ಬಾವಿಯಿಂದ ಬರೋಬ್ಬರಿ 9 ಮಂದಿಯ ಮೃತದೇಹಗಳು ಪತ್ತೆಯಾಗಿರುವ ಅಪರೂಪದ ವಿಚಿತ್ರ , ಶಾಕಿಂಗ್ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.
ವಾರಂಗಲ್ ಜಿಲ್ಲೆಯ ಗೋರ್ರೆಕುಂಟಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗುರುವಾರ ಬಾವಿಯಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದವು.

ಶುಕ್ರವಾರ ಮತ್ತೊಂದು ಮೃತದೇಹ ಪತ್ತೆಯಾಗಿತ್ತು. ಬಳಿಕ ಪೊಲೀಸರು ಬಾವಿಯಿಂದ ನೀರು ಹೊರಹಾಕಿದಾಗ ಮತ್ತೆ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದು ಈ ಮೂಲಕ ಒಂದೇ ದಿನ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸ್ಥಳೀಯ ಜನರು ಈ ಘಟನೆಯ ಬಗ್ಗೆ ಬೆಚ್ಚಿ ಬಿದ್ದಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ .
ಯುಎನ್ಐ ಕೆ ಎಸ್ಆರ್ 1205