Wednesday, Feb 26 2020 | Time 10:34 Hrs(IST)
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಶಂಕಿತ ಉಗ್ರರಿಂದ ಹತ್ಯೆಯಾದ ಸಬ್ ಇನ್ಸ್‍ಪೆಕ್ಟರ್ ಕುಟುಂಬಕ್ಕೆ ಪಳನಿಸ್ವಾಮಿ ಒಂದು ಕೋಟಿ ರೂ ಹಸ್ತಾಂತರ

ಶಂಕಿತ ಉಗ್ರರಿಂದ ಹತ್ಯೆಯಾದ ಸಬ್ ಇನ್ಸ್‍ಪೆಕ್ಟರ್ ಕುಟುಂಬಕ್ಕೆ ಪಳನಿಸ್ವಾಮಿ ಒಂದು ಕೋಟಿ ರೂ ಹಸ್ತಾಂತರ
ಶಂಕಿತ ಉಗ್ರರಿಂದ ಹತ್ಯೆಯಾದ ಸಬ್ ಇನ್ಸ್‍ಪೆಕ್ಟರ್ ಕುಟುಂಬಕ್ಕೆ ಪಳನಿಸ್ವಾಮಿ ಒಂದು ಕೋಟಿ ರೂ ಹಸ್ತಾಂತರ

ಚೆನ್ನೈ, ಜ 13(ಯುಎನ್‍ಐ)- ಕನ್ಯಾಕುಮಾರಿ ಜಿಲ್ಲೆಯಲ್ಲಿ ಕಳೆದ ವಾರ ಶಂಕಿತ ಇಬ್ಬರು ಉಗ್ರರ ಗುಂಡೇಟಿಗೆ ಬಲಿಯಾದ ವಿಶೇಷ ಸಬ್ ಇನ್ಸ್‍ಪೆಕ್ಟರ್ ವಿಲ್ಸನ್ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸೋಮವಾರ ಒಂದು ಕೋಟಿ ರೂ ಹಣಕಾಸು ನೆರವನ್ನು ಹಸ್ತಾಂತರಿಸಿದ್ದಾರೆ.

ಕಳೆದ ಶುಕ್ರವಾರ ಪ್ರಕಟಿಸಿದಂತೆ ಮುಖ್ಯಮಂತ್ರಿಯವರು ಸಚಿವಾಲಯದ ಕಟ್ಟಡದಲ್ಲಿ ಸಬ್ ಇನ್ಸ್‍ಪೆಕ್ಟರ್ ಕುಟುಂಬಕ್ಕೆ ಒಂದು ಕೋಟಿ ರೂ. ಮೊತ್ತದ ಪರಿಹಾರ ಚೆಕ್ ಅನ್ನು ಹಸ್ತಾಂತರಿಸಿ, ಕುಟುಂಬದವರನ್ನು ಸಂತೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಳನಿಸ್ವಾಮಿ ಅವರು, ವಿಶೇಷ ಸಬ್ ಇನ್ಸ್‍ಪೆಕ್ಟರ್ ಅವರ ಮಹಾತ್ಯಾಗವನ್ನು ಪರಿಗಣಿಸಿ ಒಂದು ಕೋಟಿ ರೂ. ಪರಿಹಾರ ಪ್ರಕಟಿಸಲಾಗಿತ್ತು. ಅದರಂತೆ ಪರಿಹಾರವನ್ನು ಅವರ ಕುಟುಂಬಕ್ಕೆ ನೀಡಲಾಗಿದೆ. ಅನುಕಂಪದ ಆಧಾರದ ಮೇಲೆ ವಿದ್ಯಾರ್ಹತೆಯನ್ನು ಪರಿಗಣಿಸಿ ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಹುತಾತ್ಮರಾದ ಸಬ್ ಇನ್ಸ್ ಪೆಕ್ಟರ್ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

uni sls 1551