Sunday, Mar 29 2020 | Time 00:23 Hrs(IST)
National Share

ಶ್ರೀನಗರದಲ್ಲಿ ಸ್ಫೋಟ: ಓರ್ವ ಸೈನಿಕನಿಗೆ ಗಾಯ

ಶ್ರೀನಗರ, ಫೆ 6 (ಯುಎನ್‌ಐ) ಜಮ್ಮು-ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದ ಹೊರವಲಯದಲ್ಲಿನ ಪೊಲೀಸ್ ಠಾಣೆ ಬಳಿ ನಿಗೂಢವಾಗಿ ಸಂಭವಿಸಿದ ಸ್ಫೋಟದಲ್ಲಿ ಭದ್ರತಾ ಪಡೆಯ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

‘ನಗರದ ಹೊರವಲಯದಲ್ಲಿ ಲಾಲ್ ಬಜಾರ್ ಪೊಲೀಸ್ ಠಾಣೆ ಬಳಿ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಭದ್ರತಾ ಪಡೆ ಯೋಧ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.’ ಎಂದು ಮೂಲಗಳು ತಿಳಿಸಿವೆ.
ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿವೆಯಾದರೂ ಯಾರನ್ನೂ ಬಂಧಿಸಲಾಗಿಲ್ಲ. ಪೊಲೀಸ್, ಸಿಆರ್‌ಪಿಎಫ್ ಮತ್ತು ಇತರ ಭದ್ರತಾ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.

ಈ ಮಧ್ಯೆ, ಈ ಮಧ್ಯೆ ಶ್ರೀನಗರದಲ್ಲಿ ಭಾನುವಾರ ಗ್ರೆನೇಡ್ ದಾಳಿ ನಡೆಸಿದ್ದ ಉಗ್ರನೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಗ್ರೆನೇಡ್ ದಾಳಿಯಿಂದ ಇಬ್ಬರು ಸಿಆರ್ ಪಿಎಫ್ ಯೋಧರು ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದರು. ಗುಪ್ತಚರ ಮಾಹಿತಿ ಆಧರಿಸಿ ನಗರದ ರಾಜ್ ಬಾಗ್ ನಲ್ಲಿ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುಎನ್ಐ ಎಸ್ಎಲ್ಎಸ್ 1327
More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..