Wednesday, Feb 26 2020 | Time 10:40 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಶ್ರೀಲಂಕಾ ನೌಕಾಪಡೆಯಿಂದ ನಾಲ್ವರು ಭಾರತೀಯ ಮೀನುಗಾರರ ಬಂಧನ, ದೋಣಿ ವಶ

ಪುದುಕೋಟೈ, ಜ 19 (ಯುಎನ್‌ಐ) ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ (ಐಎಂಬಿಎಲ್) ದಾಟಿ ತನ್ನ ವಿಶೇಷ ಆರ್ಥಿಕ ವಲಯದಲ್ಲಿ ಮೀನುಗಾರಿಕೆ ನಡೆಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಭಾನುವಾರ ನಾಲ್ವರು ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಅವರ ಯಾಂತ್ರಿಕೃತ ಮೀನುಗಾರಿಕೆ ದೋಣಿಯನ್ನು ವಶಪಡಿಸಿಕೊಂಡಿದೆ.

ಬಂಧಿತರಾದ ಮೀನುಗಾರರು ಜಿಲ್ಲೆಯ ಜೆಗದಪಟ್ಟಣಂ ಕರಾವಳಿ ಕುಗ್ರಾಮಕ್ಕೆ ಸೇರಿದವರಾಗಿದ್ದಾರೆ ಎಂದು ಮೀನುಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ. ಮೀನುಗಾರರಾಧ ಅಶೋಕನ್ (27), ಶಕ್ತಿ ಕುಮಾರ್ (30), ಭಾರತಿ (31) ಮತ್ತು ಮಣಿ (33) ಡೆಲ್ಫ್ಟ್ ದ್ವೀಪದ ಉತ್ತರದ ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಂಧಿಸಲಾಗಿದೆ.

ಮುಂದಿನ ಕ್ರಮಕ್ಕಾಗಿ ಮೀನುಗಾರರನ್ನು ಶ್ರೀಲಂಕಾದ ಕಂಕೇಶಾಂತುರೈ ಬಂದರಿಗೆ ಕರೆದೊಯ್ಯಲಾಗಿದೆ.
ಪುದುಕೊಟ್ಟೈ ಜಿಲ್ಲೆಯ ಜೆಗದಪಟ್ಟಣಂ ಮತ್ತು ಕೊಟ್ಟೈಪಟ್ಟಣಂ ಕರಾವಳಿ ಕುಗ್ರಾಮಗಳಿಂದ 1,500 ಕ್ಕೂ ಹೆಚ್ಚು ಮೀನುಗಾರರು ಶನಿವಾರ ಬೆಳಿಗ್ಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದರು.

ಯುಎನ್‍ಐ ಎಸ್‍ಎಲ್‍ಎಸ್‍ 1219