Sunday, Mar 29 2020 | Time 00:28 Hrs(IST)
Karnataka Share

ಶೋಷಣೆ, ತಾರತಮ್ಯ ರಹಿತ ಸಮಾಜ: ಯಡಿಯೂರಪ್ಪ ಕರೆ

ಬೆಂಗಳೂರು, ಜ 24 [ಯುಎನ್ಐ] ಹೆಣ್ಣು ಮಕ್ಕಳ ಶೋಷಣೆ ಹಾಗೂ ತಾರತಮ್ಯರಹಿತ ಸಮಾಜ ನಿರ್ಮಾಣದ ಕನಸನ್ನು ನನಸು ಮಾಡಲು ಎಲ್ಲರೂ ಮುಕ್ತ ಮನಸ್ಸಿನಿಂದ ಒಟ್ಟಾಗಿ ಹೆಜ್ಜೆ ಇಡೋಣ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ದೇಶಾದ್ಯಂತ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಯಡಿಯೂರಪ್ಪ, ಲಿಂಗ ತಾರತಮ್ಯ ನಿವಾರಣೆಯಾಗಬೇಕು ಎಂದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ , ಹೆಣ್ಣೆಂದರೆ ಪ್ರಕೃತಿ, ಹೆಣ್ಣೆಂದರೆ ಸಂಸ್ಕೃತಿ, ಪ್ರಕೃತಿಯನ್ನು ಉಳಿಸೋಣ, ಸಂಸ್ಕೃತಿಯನ್ನು ಬೆಳೆಸೋಣ ಎಂದು ಟ್ವೀಟ್ ಸಂದೇಶದ ಮೂಲಕ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಶುಭಾಶಯ ಕೋರಿದ್ದಾರೆ.
ರಾಜ್ಯಾದ್ಯಂತ ಹೆಣ್ಣುಮಕ್ಕಳ ದಿನದ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೆಣ್ಣು ಭ್ರೂಣ ರಕ್ಷಣೆ, ಹೆಣ್ಣು ಮಕ್ಕಳಿಗೆ ಅನುಕೂಲಕರ ಪರಿಸರ ನಿರ್ಮಾಣ , ಶಿಕ್ಷಣ ಹಾಗೂ ಹೆಣ್ಣು ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ವಿವಿದೆಡೆ ಆಯೋಜಿಸಲಾಗಿತ್ತು.
ಅಲ್ಲದೆ ಜಿಲ್ಲಾಡಳಿತ, ಮಹಿಳಾಶಕ್ತಿ ಕೇಂದ್ರ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಒಂದುವಾರ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಹೆಣ್ಣು ಮಕ್ಕಳ ಪಾಲನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗುತ್ತಾರೆ. ಶಾಲೆಗಳಲ್ಲಿ ಚಿತ್ರಕಲಾ ಸ್ಪರ್ಧೆ, ಹೆಣ್ಣುಮಕ್ಕಳ ಹೆಸರಲ್ಲಿ ಗಿಡ ನೆಡುವಿಕೆ, ಜಿಲ್ಲಾಮಟ್ಟದಲ್ಲಿ ಪ್ರತಿಭಾನ್ವಿತರಿಗೆ ಸನ್ಮಾನ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಯುಎನ್ಐ ವಿಎನ್ 1735
More News
ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

28 Mar 2020 | 9:54 PM

ಬೆಂಗಳೂರು,ಮಾ 28 []ಯುಎನ್ಐ] ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

 Sharesee more..
ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್

ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್

28 Mar 2020 | 9:41 PM

ಬೆಂಗಳೂರು, ಮಾ 28 (ಯುಎನ್ಐ) ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿರುವವರೆಗೆ ಸಾಲ‌ಗಾರರ ಆಸ್ತಿಪಾಸ್ತಿ ಅಥವಾ ವಾಹನಗಳ ಹರಾಜು ಪ್ರಕ್ರಿಯೆ ನಡೆಸುವಂತೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

 Sharesee more..