Friday, Oct 30 2020 | Time 07:10 Hrs(IST)
Karnataka Share

ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಯಡಿಯೂರಪ್ಪ

ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಯಡಿಯೂರಪ್ಪ
ಸಚಿವ ಸಂಪುಟ ವಿಸ್ತರಣೆಗಾಗಿ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ: ಯಡಿಯೂರಪ್ಪ

ಬೆಂಗಳೂರು, ಸೆ 21 [ಯುಎನ್ಐ] ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕೇಂದ್ರದ ನಾಯಕರ ಜತೆ ಚರ್ಚೆ ನಡೆಸಿದ್ದು, ವರಿಷ್ಠರ ಸೂಚನೆಗಾಗಿ ತಾವು ಕಾಯುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ಕೊರೋನಾ ಸೋಂಕು ಪತ್ತೆಗಾಗಿ ಸಾಯಿ ಹೆಲ್ತ್ ಟೆಕ್ನಾಲಜಿ ಸಂಸ್ಥೆಯ ಸಂಚಾರಿ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಉದ್ಘಾಟಿಸಿದರು.ಬಳಿಕ ಯಡಿಯೂರಪ್ಪ, ವರಿಷ್ಠರಿಂದ ಸೂಚನೆ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆಯಾಗಲಿದೆ. ಆದರೆ ಈವರೆಗೆ ತಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಇಂದು ಲೋಕಾರ್ಪಣೆ ಮಾಡಿರುವ ಸುಸಜ್ಜಿತ ಸಂಚಾರ ಪ್ರಯೋಗಾಲಯ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದರು.ಸಾಯಿ ಹೆಲ್ತ್ ಟೆಕ್ನಾಲಜಿ ಸಂಸ್ಥೆ 65 ಲಕ್ಷ ರೂ ವೆಚ್ಚದಲ್ಲಿ ಇಂತಹ ಪ್ರಯೋಗಾಲಯ ಸ್ಥಾಪಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಇಂತಹ ತಲಾ ಒಂದು ಪ್ರಯೋಗಾಲಯ ನೀಡುವುದಾಗಿ ಭರವಸೆ ನೀಡಿದೆ. ಇದರಿಂದ ಸೋಂಕು ಪತ್ತೆಗೆ ನೆರವಾಗಲಿದೆ ಎಂದು ಯಡಿಯೂರಪ್ಪ ಹೇಳಿದರು.ಆರೋಗ್ಯವಂತರೂ ಸಹ ಸೋಂಕಿಗೆ ಬಲಿಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆರೋಗ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಸುರಕ್ಷತಾ ಕ್ರಮಗಳ ಮೂಲಕ ಸೋಂಕು ನಿಯಂತ್ರಣಕ್ಕೆ ಜನತೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಉಳಿದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಹೆಚ್ಚಿನ ಪ್ರಮಾಣದ ಜೀವ ಹಾನಿಯಾಗಿಲ್ಲ, ಸರ್ಕಾರ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರದಿಂದಲೂ ಪ್ರವಾಹ ನಿಯಂತ್ರಣಕ್ಕೆ ಸೂಕ್ತ ನೆರವಿನ ನಿರೀಕ್ಷೆಯಲ್ಲಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.ಯುಎನ್ಐ ವಿಎನ್ 1120

More News
ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

29 Oct 2020 | 9:12 PM

ಬೆಂಗಳೂರು, ಅ 28 (ಯುಎನ್ಐ) 1. ರಾಜ್ಯದಲ್ಲಿ 4 ಸಾವಿರದ 25 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸಂಖ್ಯೆ 8 ಲಕ್ಷದ 16 ಸಾವಿರದ 809ಕ್ಕೆ ಏರಿಕೆಯಾಗಿದೆ.

 Sharesee more..
ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

29 Oct 2020 | 8:53 PM

ತುಮಕೂರು,ಅ 29 (ಯುಎನ್ಐ) ಹಿಂದಿನ ಸರ್ಕಾರದ ಒಳ್ಳೆಯ ಯೋಜನೆ, ಕಾರ್ಯಕ್ರಮಗಳಿಗೆ ಅನುದಾನ ನೀಡದೇ ಇತಿಶ್ರೀ ಹಾಡಿದ್ದೆ ಬಿಜೆಪಿ, ಯಡಿಯೂರಪ್ಪ ಸರ್ಕಾರದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯವಾಗ್ದಾಳಿ ಮಾಡಿದ್ದಾರೆ.

 Sharesee more..