Wednesday, Feb 26 2020 | Time 10:38 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಸಬ್ ಇನ್ಸ್ ಪೆಕ್ಟರ್ ಹತ್ಯೆ: ಮೂಲಭೂತವಾದಿ ಸಂಘಟನೆಯ ಇಬ್ಬರ ಬಂಧನ

ಪಾಲಕ್ಕಾಡ್, ಜ 10(ಯುಎನ್‍ಐ ತಮಿಳುನಾಡು-ಕೇರಳ ಗಡಿಯ ಕಲಿಯಕ್ಕವಿಲೈ ಸಮೀಪದ ಚೆಕ್‍ಪೋಸ್ಟ್ ನಲ್ಲಿ ಬುಧವಾರ ವಿಶೇಷ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕನ್ಯಾಕುಮಾರಿಯ ಎಂ ತೌಫಿಕ್ ಮತ್ತು ಅಬ್ದುಲ್ ಶಮೀಮ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಮೂಲಭೂತವಾದಿ ಸಂಘಟನೆಗೆ ಸೇರಿದವರಾಗಿದ್ದಾರೆ. ಎಂದು ಬಂಧಿತರ ಫೋಟೋ ಬಿಡುಗಡೆ ಮಾಡಿದ ತಮಿಳುನಾಡಿನ ಅಪರಾಧ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ ಕಲಿಯಕ್ಕವಿಲೈ ಪೊಲೀಸ್ ಠಾಣೆ ವ್ಯಾಪ್ತಿಯ ವಿಶೇಷ ಸಬ್ ಇನ್ಸ್ ಪೆಕ್ಟರ್ ವಿಲ್ಸನ್ (57) ಹಾಗೂ ಇತರ ಪೊಲೀಸರು ಎಂದಿನಂತೆ ಪಡಂತಲುಮೂಡು ಚೆಕ್‍ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾಗ, ತಿರುವನಂತಪುರಂ ಕಡೆಯಿಂದ ಬಂದ ಟಿಎನ್ 57 ಎಡಬ್ಲ್ಯೂ -1559 ಸಂಖ್ಯೆಯ ಮಹೀಂದ್ರಾ ಸ್ಕಾರ್ಪಿಯೋ ವಾಹನವನ್ನು ತಡೆದಿದ್ದರು.
ಈ ವೇಳೆ ಸ್ಕಾರ್ಪಿಯೋ ನಿಂದ ಕೆಳಗಿಳಿದ ವ್ಯಕ್ತಿ ಪೊಲೀಸ್ ಅಧಿಕಾರಿ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದ. ತಕ್ಷಣವೇ ಅಪರಿಚಿತರು ವಾಹನದಲ್ಲಿ ಕೇರಳದ ಕಡೆ ಪರಾರಿಯಾಗಿದ್ದರು.
ಹೊಟ್ಟೆ ಮತ್ತು ಎದೆಗೆ ಗುಂಡು ತಗುಲಿದ್ದ ವಿಲ್ಸನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ದುಷ್ಕರ್ಮಿಗಳ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿತ್ತು. ಪೊಲೀಸರು ಹತ್ತಿರದ ಸ್ಥಳವೊಂದರಿಂದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದರು. ವಿಲ್ಸನ್ ಅವರು ಐದು ತಿಂಗಳಲ್ಲಿ ನಿವೃತ್ತಿಯಾಗಲಿದ್ದರು. ಅವರು ಪತ್ನಿ, ಮಗಳು ಮತ್ತು ಮಗನನ್ನು ಅಗಲಿದ್ದಾರೆ.
ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ಇಬ್ಬರು ಹಂತಕರು ಕೇರಳಕ್ಕೆ ಪರಾರಿಯಾದ ನಂತರ ಅವರ ಸುಳಿವು ನೀಡಿದವರಿಗೆ ಕೇರಳ ಪೊಲೀಸರು ಬಹುಮಾನ ಘೋಷಿಸಿದ್ದರು.
ಮೂಲಭೂತವಾದಿ ಸಂಘಟನೆಯಿಂದಲೇ ಸಬ್ ಇನ್ಸ್‍ಪೆಕ್ಟರ್ ಹತ್ಯೆಯಾಗಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಕೇರಳ ಮತ್ತು ತಮಿಳುನಾಡಿನ ಜಂಟಿ ಪೊಲೀಸ್ ತಂಡ ಭಾವಿಸಿದೆ.
ಯುಎನ್‍ಐ ಎಸ್‍ಎಲ್‍ಎಸ್ 1325