Wednesday, Feb 26 2020 | Time 10:34 Hrs(IST)
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಸಬ್ಸಿಡಿ ರಹಿತ ಎಲ್ ಪಿ ಜಿ ಬೆಲೆ ಹೆಚ್ಚಳ , ಗ್ರಾಹಕರಿಗೆ ಡಬಲ್ ಶಾಕ್

ನವದೆಹಲಿ, ಜ 1(ಯುಎನ್ಐ ) ಹೊಸ ವರ್ಷದ ಆರಂಭದಲ್ಲೇ ಸರ್ಕಾರ ಗ್ರಾಹಕರಿಗೆ ಕಹಿ ಸುದ್ದಿ ನೀಡಿದೆ, ರೈಲ್ವೆ ಪ್ರಯಾಣದ ದರ ಹೆಚ್ಚಳದ ಜೊತೆಗೆ ಎಲ್ ಪಿ ಜಿ ಬೆಲೆಯೂ ಹೆಚ್ಚಳವಾಗಿ ಗ್ರಾಹಕರಿಗೆ ಡಬಲ್ ಶಾಕ್ ನೀಡಿದೆ.
ಸಬ್ಸಿಡಿ ರಹಿತ ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ ಮಾಡಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ನವದೆಹಲಿಯಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ 19ರೂ ಏರಿಕೆಯಾಗಿದ್ದರೆ, ಮುಂಬೈನಲ್ಲಿ 19.5 ರೂ. ಹೆಚ್ಚಳವಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ. ಸದ್ಯ ದೆಹಲಿಯಲ್ಲಿ ಸಬ್ಸಿಡಿ ರಹಿತ ಒಂದು ಎಲ್ಪಿಜಿ ಸಿಲಿಂಡರ್ ಬೆಲೆ 714 ರೂ.ಗಳಿದ್ದರೆ, ಮುಂಬೈನಲ್ಲಿ 684 ರೂ.ಇದೆ. ಡಿಸೆಂಬರ್ ತಿಂಗಳಿನಲ್ಲಿಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 695 ರೂ ಇತ್ತು. ಮುಂಬೈನಲ್ಲಿ 665 ರೂ. ಇತ್ತು.
ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಕೂಡ ಸಬ್ಸಿಡಿ ರಹಿತ ಎಲ್ಪಿಜಿ ಗ್ಯಾಸ್ ಬೆಲೆಯಲ್ಲಿ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಗ್ಯಾಸ್ ಬೆಲೆ 21.5 ರೂ. ಏರಿಕೆಯಾದರೆ, ಚೆನ್ನೈನಲ್ಲಿ 20 ರೂ. ಹೆಚ್ಚಳವಾಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಎಲ್ಪಿಜಿ ಗ್ಯಾಸ್ ಬೆಲೆ 747 ರೂ ಇದ್ದರೆ, ಚೆನ್ನೈನಲ್ಲಿ 734 ರೂ.ಇದೆ.
ಡಿಸೆಂಬರ್ 1ರಿಂದಲೇ 19 ಕೆ.ಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕೃತಗೊಳಿಸಲಾಗಿತ್ತು.
ಯುಎನ್ಐ ಕೆಎಸ್ಆರ್ 1222