Friday, Oct 30 2020 | Time 06:37 Hrs(IST)
Karnataka Share

ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಮೀನುಗಾರರ ರಕ್ಷಣೆ

ಉಡುಪಿ, ಸೆ.20 (ಯುಎನ್ಐ) ಉಡುಪಿ ಜಿಲ್ಲೆಯ ಮಲ್ಪೆ ಕರಾವಳಿಯ ಸೇಂಟ್ ಮೇರಿಸ್ ದ್ವೀಪದ ಬಳಿ ಭಾರೀ ಬಿರುಗಾಳಿಯ ಕಾರಣದಿಂದ ಸಿಲುಕಿಕೊಂಡಿದ್ದ ಆರು ಮಂದಿ ಮೀನುಗಾರರನ್ನು ಭಾನುವಾರ ಕೋಸ್ಟ್ ಗಾರ್ಡ್ ಪೊಲೀಸರು ರಕ್ಷಿಸಿದ್ದಾರೆ.
ದೋಣಿ ಬಂಡೆಯೊಂದಕ್ಕೆ ಡಿಕ್ಕಿ ಹೊಡೆದು ಎಂಜಿನ್ ಸ್ಥಗಿತಗೊಂಡಿತ್ತು. ಇದರಿಂದ ಮುಂದೆ ಚಲಿಸಲಾಗದೆ ಅಲ್ಲೇ ಸಿಲುಕಿಕೊಂಡಿತ್ತು. ಅಲ್ಲಿಂದ ಕೋಸ್ಟ್ ಗಾರ್ಡ್ ಪೊಲೀಸರು ಮಲ್ಪೆ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿ ಸಂಜೆಯ ಹೊತ್ತಿಗೆ ಮೀನುಗಾರರನ್ನು ಸುರಕ್ಷಿತವಾಗಿ ತೀರಕ್ಕೆ ಕರೆತಂದಿದ್ದಾರೆ.
ಹಲವು ದಶಕಗಳ ನಂತರ ಉಡುಪಿಯಲ್ಲಿ ಶನಿವಾರ ಮತ್ತು ಭಾನುವಾರ ಭಾರೀ ಬಿರುಗಾಳಿ ಸಮೇತ ಮಳೆಯಾಗುತ್ತಿತ್ತು. ಹಲವು ತಗ್ಗುಪ್ರದೇಶಗಳು ಜಲಾವೃತವಾಗಿವೆ. ಎಸ್ ಡಿಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ.
ಯುಎನ್ಐ ಎಎಚ್ 2237
More News
ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

ರಾಜ್ಯದಲ್ಲಿ 4,025 ಕೊರೋನಾ ಸೋಂಕು ದೃಢ: ಒಟ್ಟು ಸಂಖ್ಯೆ 8,16 809 ಕ್ಕೆ ಏರಿಕೆ

29 Oct 2020 | 9:12 PM

ಬೆಂಗಳೂರು, ಅ 28 (ಯುಎನ್ಐ) 1. ರಾಜ್ಯದಲ್ಲಿ 4 ಸಾವಿರದ 25 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸಂಖ್ಯೆ 8 ಲಕ್ಷದ 16 ಸಾವಿರದ 809ಕ್ಕೆ ಏರಿಕೆಯಾಗಿದೆ.

 Sharesee more..
ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

ಅನುದಾನಕ್ಕೆ ಇತಿಶ್ರೀ ಹಾಡಿದ್ದೇ ಸರ್ಕಾರದ ಸಾಧನೆ: ಸಿದ್ದರಾಮಯ್ಯ ಆಕ್ರೋಶ

29 Oct 2020 | 8:53 PM

ತುಮಕೂರು,ಅ 29 (ಯುಎನ್ಐ) ಹಿಂದಿನ ಸರ್ಕಾರದ ಒಳ್ಳೆಯ ಯೋಜನೆ, ಕಾರ್ಯಕ್ರಮಗಳಿಗೆ ಅನುದಾನ ನೀಡದೇ ಇತಿಶ್ರೀ ಹಾಡಿದ್ದೆ ಬಿಜೆಪಿ, ಯಡಿಯೂರಪ್ಪ ಸರ್ಕಾರದ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯವಾಗ್ದಾಳಿ ಮಾಡಿದ್ದಾರೆ.

 Sharesee more..