Sunday, Aug 9 2020 | Time 14:34 Hrs(IST)
 • ಸುಶಾಂತ್‌ ಪ್ರಕರಣ; ರಿಯಾ ಸಹೋದರನನ್ನು 18 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ
 • ಕನ್ನಡಿಗರು-ತಮಿಳರನ್ನು ಬೆಸೆದ ಸರ್ವಜ್ಞ,ತಿರುವಳ್ಳುವರ್ : ಡಿಸಿಎಂ ಅಶ್ವತ್ಥ್ ನಾರಾಯಣ್
 • ತಿರುಪತಿ ತಿಮ್ಮಪ್ಪನ ವಾರ್ಷಿಕ ಬಜೆಟ್ ೩,೨೦೦ ಕೋಟಿ
 • ಕೋವಿಡ್‌; ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
 • ಕೃಷಿ ವಲಯದ 1 ಲಕ್ಷ ಕೋಟಿ ರೂ ಮೊತ್ತದ ಯೋಜನೆಗೆ ಮೋದಿ ಚಾಲನೆ; ಪಿಎಂ-ಕಿಸಾನ್‌ 6ನೇ ಕಂತಿನ ಬಿಡುಗಡೆ
 • ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಬಿಡುಗಡೆ : ಹಾಸನದ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಜೊತೆ ಪ್ರಧಾನಿ ಸಂವಾದ
 • ಆಯೋಧ್ಯೆ ಮಾದರಿಯಲ್ಲಿ ನೇಪಾಳದಲ್ಲೂ ಶ್ರೀರಾಮ ಮಂದಿರ !
 • ಕೇರಳದ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ
 • ಮುಖ್ಯಕಾರ್ಯದರ್ಶಿಗೆ ಕರೆ ಮಾಡಿ ಅತಿವೃಷ್ಠಿ,ಪ್ರವಾಹದ ಮಾಹಿತಿ ಪಡೆದ ಮುಖ್ಯಮಂತ್ರಿ ಯಡಿಯೂರಪ್ಪ
 • ಶ್ರೀಲಂಕಾ ಪ್ರಧಾನಿಯಾಗಿ ಮಹೀಂದ್ರ ರಾಜಪಕ್ಷ ಪ್ರಮಾಣವಚನ ಸ್ವೀಕಾರ
 • ಅಮಿತ್‌ ಶಾ ಕೋವಿಡ್‌ ವರದಿ ನೆಗೆಟೀವ್‌; ಮನೋಜ್ ತಿವಾರಿ ಟ್ವೀಟ್
 • ಕಳೆದ ವರ್ಷದ ಅತಿವೃಷ್ಟಿ ಹಾನಿ, ಪರಿಹಾರದ ವಿವರ ಕೇಳಿದ ಸಿದ್ದರಾಮಯ್ಯ
 • ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 21 5 ಲಕ್ಷಕ್ಕೆ ಏರಿಕೆ
 • ಉತ್ತರ ಪ್ರದೇಶ ಎಸ್‍ಟಿಎಫ್‍ ಪಡೆಯಿಂದ ಮಾಫಿಯಾ ಶಾರ್ಪ್-ಶೂಟರ್ ನ ಗುಂಡಿಕ್ಕಿ ಹತ್ಯೆ
 • ಕ್ವಿಟ್ ಇಂಡಿಯಾ ಚಳವಳಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಮುಖ್ಯಮಂತ್ರಿ ಗೌರವ ನಮನ
National Share

ಸರಕು ಮತ್ತು ಸೇವಾ ತೆರಿಗೆ ಮೇಲೆ ವಿಪತ್ತು ಸೆಸ್ ಕೇವಲ ವದಂತಿ

ನವದೆಹಲಿ, ಮೇ 23 (ಯುಎನ್ಐ) ಕೊರೊನಾ ವೈರಾಣು ಸೋಂಕಿನಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿಗೆ ಪರಿಹಾರವಾಗಿ ಸರಕು ಮತ್ತು ಸೇವಾ ತೆರಿಗೆ ಜಿ ಎಸ್ ಟಿ ಮೇಲೆ ವಿಪತ್ತು ಸೆಸ್ ವಿಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಧ್ಯಮ ವರದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ.

ಕೋವಿಡ್ – 19 ಬಿಕ್ಕಟ್ಟಿನ ಕಾರಣ ಜಿ ಎಸ್ ಟಿ ಮೇಲೆ ಹೆಚ್ಚುವರಿ ವಿಪತ್ತು ಸೆಸ್ ಸಂಗ್ರಹಿಸಿದರೆ ಅದು ಇನ್ನಷ್ಟು ಹೊರೆಯೇ ಆಗಲಿದೆ ಎಂದು ಹೇಳಿರುವ ಸಚಿವಾಲಯ ಮಾಧ್ಯಮ ವರದಿಗಳು ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದೆ.

ಹೆಚ್ಚುವರಿ ತೆರಿಗೆ ಅಥವಾ ಸೆಸ್ ವಿಧಿಸಿದಲ್ಲಿ ಗ್ರಾಹಕರ ಖರೀದಿ ಮನೋಭಾವ ಕುಗ್ಗುತ್ತದೆ. ಇದರಿಂದಾಗಿ ಮಾರುಕಟ್ಟೆ ಇನ್ನಷ್ಟು ದುರ್ಬಲಗೊಳ್ಳುತ್ತದೆ. ಸರ್ಕಾರಿ ಖರೀದಿಯನ್ನು ಪ್ರೋತ್ಸಾಹಿಸಲು ಬಯಸಿದೆ ಎಂದು ಮೂಲಗಳು ತಿಳಿಸಿವೆ.

ಅಭಿವೃದ್ಧಿ ಹೊಂದಿದ ಅಥವಾ ಹೊಂದುತ್ತಿರುವ ಯಾವುದೇ ದೇಶವಾಗಿರಲಿ ಕೊರೊನಾ ಸಂಕಷ್ಟದಿಂದ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನ ಚೇತರಿಕೆಗೆ ತೆರಿಗೆಯ ಹೊರೆ ಹೊರಿಸುವುದಿಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಯುಎನ್ಐ ಜಿಎಸ್ಆರ್ 2309