Wednesday, Feb 26 2020 | Time 10:41 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ 10 ವ್ಯಾಪಾರಿ ಒಕ್ಕೂಟದ ಪ್ರತಿಭಟನೆ

ನವದೆಹಲಿ, ಜ 6 (ಯುಎನ್ಐ) ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ಜನ ವಿರೋಧಿ ಹಾಗೂ ರಾಷ್ಟ್ರ ವಿರೋಧಿ ನೀತಿಗಳನ್ನು ವಿರೋಧಿಸಿ ಕೇಂದ್ರ ವ್ಯಾಪಾರಿ ಒಕ್ಕೂಟ (ಸಿಟಿಯು) ಜ. 8ರಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಇದರಲ್ಲಿ ಐಎನ್ ಟಿಯುಸಿ, ಎಐಟಿಯುಸಿ, ಎಚ್ ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್ ಇಡಬ್ಲ್ಯುಎ, ಎಐಸಿಸಿಟಿಯು, ಎಲ್ ಪಿಎಫ್, ಯುಟಿಯುಸಿ ಸದಸ್ಯರು ಸೇರಿದಂತೆ ಸುಮಾರು 25 ಕೋಟಿ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೆ. 30ರಂದು ನಡೆದ ಬಹಿರಂಗ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಈಗಾಗಲೇ ಕಾರ್ಮಿಕ ಇಲಾಖೆಗೆ ಪ್ರತಿಭಟನೆಯ ನೋಟಿಸ್ ಜಾರಿಗೊಳಿಸಿತ್ತು. ಈ ಸಂಬಂಧ ಜ.2ರಂದು ನಡೆದ ಸಭೆಯಲ್ಲಿ ಇಲಾಖೆ ಕಾರ್ಮಿಕರ ಬೇಡಿಕೆಗಳನ್ನು ಪೂರೈಸಲು ಮುಂದೆ ಬಂದಿಲ್ಲ ಎಂದು ಒಕ್ಕೂಟ ಆರೋಪಿಸಿದೆ.
ಕಾರ್ಮಿಕರ ಕುರಿತು ಇಲಾಖೆ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಭಾರತೀಯ ಕಾರ್ಮಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿಲ್ಲ. ಈ ಹಿಂದೆ ಇಲಾಖೆಯೊಂದಿಗೆ ನಡೆದ ಸಭೆಯಲ್ಲಿ 12 ಬೇಡಿಕೆಗಳನ್ನು ಮುಂದಿರಲಾಗಿತ್ತು. ಆದರೆ, ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಒಕ್ಕೂಟ ಆರೋಪಿಸಿದೆ.
ಯುಎನ್ಐ ಎಸ್ಎಚ್ 1821