Wednesday, Sep 23 2020 | Time 01:07 Hrs(IST)
Karnataka Share

ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿಗೆ ಹೆರಿಗೆ : ಸರಳತೆ ಮೆರೆದ ಸುಂದರೇಶ್ ಬಾಬು

ಗದಗ ಅ 9 [ಯುಎನ್ಐ] ಕೊರೋನಾ ಸೊಂಕು ನಿಯಂತ್ರಣದಲ್ಲಿ ಮಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಎಡೆಬಿಡದ ಕೆಲಸದ ಒತ್ತಡದ ನಡುವೆಯೂ ಐಶಾರಾಮಿ ಸವಲತ್ತುಗಳ ಮೊರೆ ಹೋಗದೇ ತಮ್ಮ ಪತ್ನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆರಿಗೆ ಮಾಡಿಸಿ ಸರಳತೆ ಮೆರೆದಿದ್ದಾರೆ

ಗದಗ ನಗರದ ಕೆಸಿ ರಾಣಿ ರಸ್ತೆಯ ದುಂಡಪ್ಪ‌ ಮಾನ್ವಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿಗೆ ಪ್ರಸವವಾಗಿದೆ. ಅವರು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು ಇಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ.

ಸರ್ಕಾರಿ ಆಸ್ಪತ್ರೆಯಿಂದ ದೂರವೇ ಉಳಿಯುತ್ತಿರುವ ಸಂದರ್ಭದಲ್ಲಿ ವ್ಯವಸ್ಥೆಯ ಬಗ್ಗೆ ನಂಬಿಕೆ ಮೂಡಿಸಿ, ಸರ್ಕಾರಿ ಆಸ್ಪತ್ರೆಯ ಮಹತ್ವವನ್ನು ಸಮಾಜಕ್ಕೆ ಸಾರುವ ಉದ್ದೇಶದಿಂದ ಜಿಲ್ಲಾಧಿಕಾರಿಗಳು ಕೈಗೊಂಡಿರುವ ಕ್ರಮ ಮಾದರಿಯಾಗಿದೆ.

ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳ ಸಹವಾಸವೇ ಬೇಡ ಎನ್ನುವವರು ಹೆಚ್ಚಾಗುತ್ತಿದ್ದಾರೆ. ಆದರೆ ಸರ್ಕಾರಿ ವೈದ್ಯರ ಮೇಲಿನ ನಂಬಿಕೆಯಿಂದ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಉತ್ತಮ ನಿರ್ಧಾರ ಕೈಗೊಂಡಿದ್ದು, ಸರ್ಕಾರಿ ವೈದ್ಯರು ಸಹ ಸಂತಸಗೊಂಡಿದ್ದಾರೆ.

ಯುಎನ್ಐ ವಿಎನ್ 1254
More News
ರಾಜ್ಯದಲ್ಲಿ 6974 ಹೊಸ ಕೋವಿಡ್‌ ಪ್ರಕರಣಗಳ ವರದಿ; ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೇರಿಕೆ

ರಾಜ್ಯದಲ್ಲಿ 6974 ಹೊಸ ಕೋವಿಡ್‌ ಪ್ರಕರಣಗಳ ವರದಿ; ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷಕ್ಕೇರಿಕೆ

22 Sep 2020 | 10:23 PM

ಬೆಂಗಳೂರು, ಸೆ 22 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6974 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 83 ಮಂದಿ ಮೃತಪಟ್ಟಿದ್ದಾರೆ.

 Sharesee more..

ಕಾಂಗ್ರೆಸ್ ವಕ್ತಾರರ ಪಟ್ಟಿ ಸಿದ್ಧತೆ

22 Sep 2020 | 9:27 PM

 Sharesee more..