Sunday, Mar 29 2020 | Time 00:41 Hrs(IST)
National Share

ಸಶಸ್ತ್ರ ಪಡೆಗಳು ರಾಜಕೀಯದಿಂದ ದೂರ: ಸಿಡಿಎಸ್ ರಾವತ್ ಭರವಸೆ

ಸಶಸ್ತ್ರ ಪಡೆಗಳು ರಾಜಕೀಯದಿಂದ ದೂರ: ಸಿಡಿಎಸ್ ರಾವತ್ ಭರವಸೆ
ಸಶಸ್ತ್ರ ಪಡೆಗಳು ರಾಜಕೀಯದಿಂದ ದೂರ: ಸಿಡಿಎಸ್ ರಾವತ್ ಭರವಸೆ

ನವದೆಹಲಿ, ಜ.1 (ಯುಎನ್‌ಐ) ಹೊಸದಾಗಿ ನೇಮಕಗೊಂಡ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಸಶಸ್ತ್ರ ಪಡೆಗಳು ರಾಜಕೀಯದಿಂದ ದೂರವಿರುತ್ತವೆ ಮತ್ತು ಅಂದಿನ ಸರ್ಕಾರದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಬುಧವಾರ ಹೇಳಿದ್ದಾರೆ.

ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌)ರಾಗಿ ಬುಧವಾರ ಅಧಿಕಾರ ವಹಿಸಿಕೊಂಡ ನಂತರ ಅವರು ಮಾತನಾಡಿದರು.

ಸಶಸ್ತ್ರ ಪಡೆಗಳನ್ನು ರಾಜಕೀಯಗೊಳಿಸಲಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಮಧ್ಯಯೇ ರಾವತ್ ಈ ಹೇಳಿಕೆ ನೀಡಿದ್ದಾರೆ.

ನಾವು ನಮ್ಮನ್ನು ರಾಜಕೀಯದಿಂದ ದೂರವಿರಿಸಿಕೊಳ್ಳುತ್ತೇವೆ, ನಾವು ಅಂದಿನ ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತೇವೆ ಎಂದು ರಾವತ್ ಹೇಳಿದರು.

ದೇಶದ ಮೊದಲ ಸಿಡಿಎಸ್ ಆದ ನಂತರ ಸುದ್ದಿಗಾರರೊಂದಿಗೆ ನಡೆಸಿದ ಮೊದಲ ಸಂವಾದದಲ್ಲಿ, ಜನರಲ್ ರಾವತ್ ಅವರು, ಮೂರು ಪಡೆಗಳು ನಡೆಸುತ್ತಿರುವ ಪ್ರಯತ್ನಗಳನ್ನು ಸಂಯೋಜಿಸುವುದು ಮತ್ತು ತಂಡವಾಗಿ ಕೆಲಸ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಮೂರು ಪಡೆಗಳಿಗೆ ಒದಗಿಸಲಾದ ಸಂಪನ್ಮೂಲಗಳ ಉತ್ತಮ ಮತ್ತು ಸೂಕ್ತ ಬಳಕೆಯನ್ನು ಖಾತರಿಪಡಿಸುವತ್ತ ಗಮನ ಹರಿಸುವುದಾಗಿ ಅವರು ಹೇಳಿದರು.

ತಂಡವಾಗಿ, ನಾವು 1 + 1 + 1 ಐದು ಅಥವಾ ಏಳು ಮತ್ತು ಮೂರು ಅಲ್ಲದ ಗುರಿಯತ್ತ ಕೆಲಸ ಮಾಡುತ್ತೇವೆ. ಇದರ ಅರ್ಥವೇನೆಂದರೆ, ಈ ಸೇವೆಗಳ ನಡುವೆ ಸಮನ್ವಯತೆ ಸಾಧಿಸುವುದಾಗಿದೆ ಎಂದು ತಿಳಿಸಿದರು.

ಯುಎನ್ಐ ಎಎಚ್ 1206

More News
ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

28 Mar 2020 | 7:17 PM

ನವದೆಹಲಿ, ಮಾ 28 (ಯುಎನ್ಐ) ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

 Sharesee more..
ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ  ನೆರವು ನೀಡಿದ ಟಾಟಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ ನೆರವು ನೀಡಿದ ಟಾಟಾ

28 Mar 2020 | 7:10 PM

ನವದೆಹಲಿ, ಮಾ 28 (ಯುಎನ್ಐ) ದೇಶದ ಮುಂಚೂಣಿಯ ಉದ್ಯಮ ಸಂಸ್ಥೆ ಟಾಟಾ ಟ್ರಸ್ಟ್, ದೇಶದ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ 500 ಕೋಟಿ ರೂ.ನೆರವು ನೀಡುವುದಾಗಿ ಘೋಷಿಸಿದೆ.

 Sharesee more..