Friday, Feb 28 2020 | Time 09:36 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಸಿಎಎ; ಅಭಿಯಾನಕ್ಕೆ ಮೋದಿ ಸೇರ್ಪಡೆ; ನ್ಯಾಯಾಲಯದ ಮೆಟ್ಟಿಲೇರಲಿರುವ ಕಾಂಗ್ರೆಸ್

ನವದೆಹಲಿ, ಡಿ 30 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್ ಡಿ ಹಾಗೂ ಕಾಂಗ್ರೆಸ್ ಮತ್ತಿತರರ ವಿಪಕ್ಷಗಳ ನಡುವಿನ ತಿಕ್ಕಾಟ ತಾರಕಕ್ಕೇರಿದೆ.

ಈಗಾಗಲೇ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಜಿ.ಕಿಷನ್ ರೆಡ್ಡಿ, ದೇಶದಲ್ಲಿ ಸಿಎಎ ಜಾರಿಯಾಗೇ ಆಗುತ್ತದೆ, ಅದೆಷ್ಟೇ ಪ್ರತಿಭಟನೆಗಳು, ಜಾಥಾಗಳು ನಡೆದರೂ ಕೂಡ ಎಂದಿದ್ದರು.

ಈ ನಡುವೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಿಎಎ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪುರುಲಿಯಾ ಪಟ್ಟಣದಲ್ಲಿ ಸಿಎಎ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದರು.

ಬಿಜೆಪಿ ಕೂಡ ಸಿಎಎ ಪರವಾಗಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ತೀವ್ರಗೊಳಿಸಿದ್ದು, ಇಂಡಿಯಾ ಸಪೋರ್ಟ್ಸ್ ಸಿಎಎ ಎಂಬ ಹ್ಯಾಷ್ ಟ್ಯಾಗ್ ಆರಂಬಿಸಿದೆ.

ಸಿಎಎ ಬೆಂಬಲಿಗರ ಸಭೆ ನಡೆಸಿದ ರೆಡ್ಡಿ, ಮೋದಿ ಸರ್ಕಾರ ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಕುರಿತು ಘೋಷಿಸಿದ್ದಾರೆ.
ಯುಎನ್ಐ ಎಸ್ಎಚ್ 1958