Wednesday, Feb 26 2020 | Time 09:57 Hrs(IST)
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Karnataka Share

ಸಿಎಎ ಎನ್‌ಆರ್‌ಸಿ ವಿರುದ್ಧ ಮುಸ್ಲಿಂ ಸಂಘಟನೆ ಜೊತೆಗೂಡಿ ಜೆಡಿಎಸ್ ಪ್ರತಿಭಟನೆ

ಬೆಂಗಳೂರು, ಜ 24(ಯುಎನ್ಐ) ಸಮಾವೇಶದಲ್ಲಿ ಕೈಗೊಂಡ ನಿರ್ಣಯದಂತೆ ಜೆಡಿಎಸ್ , ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ, ಎನ್‌ಆರ್‌ಸಿ, ಎಂಪಿಆರ್ ವಿರುದ್ಧ ಬೀದಿಗಿಳಿದಿದೆ. ಶುಕ್ರವಾರ ರಾಜ್ಯದ ವಿವಿಧ ಮುಸ್ಲಿಂ ಸಂಘಟನೆಗಳ ಜೊತೆಗೂಡಿ ಪ್ರತಿಭಟನೆ ನಡೆಸಿತು.
ನಗರದ ಪುರಭವದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಗೋ ಬ್ಯಾಕ್ ಸಿಎಎ ಎನ್‌ಆರ್‌ಸಿ ಘೋಷಣೆ ,‌ಕೇಂದ್ರದ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು.
ಮಾಜಿ ಸಚಿವ ಬಂಡೆಪ್ಪ ಖಾಶಂಪೂರ ಮಾತನಾಡಿ, ಇಡೀ ವಿಶ್ವದಲ್ಲಿ ಭಾರತದಲ್ಲಿ ಮಾತ್ರವೇ ಬಲಿಷ್ಠವಾದ ಸಂವಿಧಾನವಿದೆ. ಗಂಗಾ ಜಮುನಾ ಹರಿಯುವ ಪವಿತ್ರ‌ ದೇಶವಿದು. ನೋಟು ಅಮಾನ್ಯೀಕರಣದಿಂದ ಮೋದಿ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಿದರು. ಬಡವರ ಖಾತೆಗೆ ಹದಿನೈದು ಲಕ್ಷ‌ ರೂ.ಹಾಕುತ್ತೇನೆಂದು ಸುಳ್ಳು ಭರವಸೆ ನೀಡಿ‌ ಗೆದ್ದ ಬಳಿಕ ಐದು ಪೈಸೆಯನ್ನೂ ಹಾಕಲಿಲ್ಲ ಎಂದು ಟೀಕಿಸಿದರು.
ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡ, ನಾಯಕ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟವಾಗಿ ಸಿಎಎ ಎನ್ಆರ್‌ಸಿ ವಿರೋಧಿಸಿ ನಿರ್ಣಯ ಕೈಗೊಂಡಿದ್ದಾರೆ. ಕೇಂದ್ರದ ಜನವಿರೋಧಿ ನೀತಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ, ವಿರೋಧಗಳು ಹೆಚ್ಚುತ್ತಿವೆ‌‌.
ಕೇಂದ್ರ ಈ ಕಾಯಿದೆಗಳನ್ನು ಹಿಂಪಡೆಯುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮೇಲ್ಮನೆ ಸದಸ್ಯ ಶರವಣ, ಬೆಂಗಳೂರು ಜೆಡಿಎಸ್ ಘಟಕದ ಅಧ್ಯಕ್ಷ ಪ್ರಕಾಶ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್ ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಯುಎನ್ಐ ಯುಎಲ್ ಎಎಚ್ 2203