Friday, Feb 28 2020 | Time 09:38 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಸಿಎಎ; ಎಲ್ಲಾ ಅರ್ಜಿಗಳ ಒಂದೆಡೆ ವಿಚಾರಣೆ ನಡೆಸುವಂತೆ ಸುಪ್ರೀಂ ಗೆ ಕೇಂದ್ರ ಮನವಿ

ನವದೆಹಲಿ, ಜ 8 (ಯುಎನ್ಐ) ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ದೇಶದ ವಿವಿಧ ಹೈಕೋರ್ಟ್ ಗಳಲ್ಲಿರುವ ವ್ಯಾಜ್ಯಗಳನ್ನು ಉನ್ನತ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದೆ.
ಈ ಅರ್ಜಿಯ ವಿಚಾರಣೆಯನ್ನು ಜ. 10ರಂದು ನಡೆಸಲು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ ಸಮ್ಮತಿ ಸೂಚಿಸಿತು.
ಆರಂಭದಲ್ಲಿ ಹೈಕೋರ್ಟ್ ಗಳು ಆಯಾ ರಾಜ್ಯಗಳ ಅರ್ಜಿಗಳ ವಿಚಾರಣೆ ನಡೆಸಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ಹೈಕೋರ್ಟ್ ಗಳು ಈ ಕುರಿತು ವಿಭಿನ್ನ ದೃಷ್ಟಿಕೋನ ಹೊಂದಿರಬಹುದು ಎಂದಿತು. ನಂತರ ಕೇಂದ್ರ ಸರ್ಕಾರದ ಮನವಿಗೆ ಒಪ್ಪಿಗೆ ಸೂಚಿಸಿತು.
ಯುಎನ್ಐ ಎಸ್ಎಚ್ 2023