Wednesday, Feb 26 2020 | Time 10:44 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಸಿಎಎ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ

ನವದೆಹಲಿ, ಜ 14 (ಯುಎನ್ಐ) ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸಿಎಎ ಅನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಮೊದಲ ರಾಜ್ಯ ಇದಾಗಿದೆ.
ಜೊತೆಗೆ ಪಾಸ್ ಪೋರ್ಟ್ ಕಾಯ್ದೆ ಮತ್ತು ವಿದೇಶಿ ಕಾಯ್ದೆಯ ನಿಯಮಗಳನ್ನು ಕೂಡ ಸರ್ಕಾರ ಪ್ರಶ್ನಿಸಿದೆ.
ಕೇಂದ್ರ ಸರ್ಕಾರ ಮತ್ತು ಇತರ ರಾಜ್ಯಗಳ ನಡುವಿನ ವ್ಯಾಜ್ಯಗಳ ವಿಚಾರಣೆಗೆ ಅವಕಾಶ ಕಲ್ಪಿಸಿದ ಸಂವಿಧಾನದ 131ನೇ ಪರಿಚ್ಚೇದ ಅಡಿಯಲ್ಲಿ ಈ ಅರ್ಜಿಯನ್ನು ಸಲ್ಲಿಸಲಾಗಿದೆ.
ಸಿಎಎ ಅನ್ನು ಸಂವಿಧಾನದ 14,21 ಮತ್ತು 25ರ ಉಲ್ಲಂಘನೆ ಮತ್ತು ದೇಶದ ಮೂಲ ಜಾತ್ಯತೀತತೆಯ ರಚನೆಗೆ ವಿರುದ್ಧವಾಗಿದೆ ಎಂದು ಘೋಷಿಸಿದೆ ಎಂದು ಸರ್ಕಾರ ಅರ್ಜಿಯಲ್ಲಿ ಕೋರಿದೆ.
ಪರಿಚ್ಛೇದ 14 ಸಮಾನತೆಯ ಹಕ್ಕು ಮತ್ತು 21 ಯಾವುದೇ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಹಾಗೂ 25 ಎಲ್ಲಾ ವ್ಯಕ್ತಿಗಳ ತಮ್ಮ ಆತ್ಮಸಾಕ್ಷಿಯಂತೆ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ಒದಗಿಸಿದೆ.
ಕೇಂದ್ರ ಸರ್ಕಾರದ ಪರವಾಗಿ ಕಾರ್ಯದರ್ಶಿ, ಕಾನೂನು ಮತ್ತು ನ್ಯಾಯದ ಸಚಿವಾಲಯವನ್ನು ಪ್ರತಿವಾದಿಯನ್ನಾಗಿಸಲಾಗಿದೆ.
ಇಲ್ಲಿಯವರೆಗೆ ಸಿಎಎ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ 60 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ನ್ಯಾಯಾಲಯ ಜ.22ರಂದು ವಿಚಾರಣೆ ನಡೆಸಲಿದೆ.
ಡಿ.31ರಂದು ಕೇರಳ ವಿಧಾನಸಭೆಯಲ್ಲಿ ಸಿಎಎ ಅನ್ನು ನಿಷೇಧಿಸುವ ನಿರ್ಣಯ ಕೈಗೊಳ್ಳಲಾಗಿತ್ತು.
ಕೇಂದ್ರ ಸರ್ಕಾರ ಜ. 10ರಂದು ಈ ಕಾಯ್ದೆಯ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು.
ಯುಎನ್ಐ ಎಸ್ಎಚ್ 1232