Sunday, Mar 29 2020 | Time 00:48 Hrs(IST)
Special Share

ಸಿಎಎ ವಿರುದ್ದ ಸಿಡಿದು ಬಿಜೆಪಿ ತೊರೆದ ಸ್ಥಳೀಯ ನಾಯಕರು..!

ಕೊಹಿಮಾ,ಫೆ13(ಯುಎನ್ಐ) ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯ ವಿರುದ್ಧ ಪ್ರತಿಭಟನೆ ಬೆಂಬಲಿಸಿ ಬಿಜೆಪಿಗೆ ಗುಡ್ ಬೈ ಹೇಳಿ 22 ಸ್ಥಳೀಯ ನಾಯಕರು ಗುರುವಾರ ಪ್ರತಿಪಕ್ಷ ನಾಗಾ ಪೀಪಲ್ಸ್ ಫ್ರಂಟ್ (ಎನ್ಪಿಎಫ್)ಗೆ ಸೇರಿದ್ದಾರೆ.
ದಿಮಾಪುರದಲ್ಲಿನಡೆದ ಸಮಾರಂಭದಲ್ಲಿ ಬಿಜೆಪಿ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಎನ್ಪಿಎಫ್ ಅಧ್ಯಕ್ಷ ಶುರಹೊಜೆಲಿ ಲೆಜಿತ್ಸು ಅವರು,ಈ ನಾಯಕರು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಜೆಪಿ ನಾಯಕರು ಎನ್ಪಿಎಫ್ಗೆ ಸೇರುವ ನಿರೀಕ್ಷೆಯಿದೆ ಎಂದೂ ಸ್ಥಳೀಯ ಮಾಧ್ಯಮ ವರದಿ ಮಾಡಿವೆ.
ಎನ್ಪಿಎಫ್ಗೆ ಸೇರ್ಪಡೆಗೊಂಡವರಲ್ಲಿ ಬಿಜೆಪಿಯ ಕಾನೂನು ಮತ್ತು ಕಾನೂನು ವ್ಯವಹಾರಗಳ ಘಟಕದ ಸಂಚಾಲಕ ತೋಷಿ ಲೊಂಗ್ಕುಮೆರ್ ಮತ್ತು ಅಲ್ಪಸಂಖ್ಯಾತ ಮೋರ್ಚಾದ ಮಾಜಿ ರಾಜ್ಯಾಧ್ಯಕ್ಷ ಮುಖಿಬುರ್ ರೆಹಮಾನ್ ಕೂಡ ಸೇರಿದ್ದಾರೆ.
ಸಿಎಎ ಶೀಘ್ರವೇ ಇಲ್ಲ ಅಥವಾ ತಡವಾಗಿಯಾದರೂ ಈಶಾನ್ಯ ರಾಜ್ಯಗಳ ಜನರಿಗೆ ತೊಂದರೆ ಮಾಡಲಿದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಯುಎನ್ಐ ಕೆಎಸ್ಆರ್ 2236
More News

ಮೋದಿ ನಾಡಿನಲ್ಲೂ ಕರೋನ ಸೋಂಕಿಗೆ ನಾಲ್ವರ ಬಲಿ

28 Mar 2020 | 9:49 PM

 Sharesee more..
ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

ಕೋವಿಡ್-19; 15 ಸಾವಿರ ಆಹಾರ ಪೊಟ್ಟಣ ವಿತರಿಸಿದ ಟಿಟಿಡಿ

28 Mar 2020 | 9:36 PM

ತಿರುಪತಿ, ಮಾ 28 (ಯುಎನ್ಐ) ಕೊರೋನಾ ವೈರಸ್ ಸೋಂಕನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ), ವಸತಿರಹಿತರ ನೆರವಿಗೆ 15 ಸಾವಿರ ಪುಳಿಯೋಗರೆ ಪೊಟ್ಟಣಗಳನ್ನು ವಿತರಿಸಿದೆ.

 Sharesee more..
ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ  ಡಿಜಿಪಿ ಪ್ರವೀಣ್ ಸೂದ್  ಮನವಿ

ಬಡವರಿಗೆ ಆಹಾರ ಒದಗಿಸಲು ನೆರವಾಗುವಂತೆ ಪರೋಪಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಮನವಿ

28 Mar 2020 | 9:22 PM

ಬೆಂಗಳೂರು, ಮಾ ೨೮(ಯುಎನ್‌ಐ) ರಾಷ್ಟ್ರೀಯ ಲಾಕ್ ಡೌನ್ ಜಾರಿಗೊಳಿಸಿರುವ ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರ ಒದಗಿಸಲು ಬಯಸುವ ಪರೋಪಕಾರಿಗಳು ಆಹಾರವನ್ನು ಸಮೀಪದ ಪೊಲೀಸ್ ಠಾಣೆಗಳಿಗೆ ತಲುಪಿಸಿದರೆ, ಅಗತ್ಯವಿರುವ ಜನರಿಗೆ ತಲುಪಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಮನವಿ ಮಾಡಿಕೊಂಡಿದ್ದಾರೆ.

 Sharesee more..
ಕಲ್ಲಿದ್ದಲು ಸುಗಮ ಸರಬರಾಜಿಗೆ  ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

ಕಲ್ಲಿದ್ದಲು ಸುಗಮ ಸರಬರಾಜಿಗೆ ಸಕಲ ಕ್ರಮ; ಸಚಿವ ಪ್ರಹ್ಲಾದ್ ಜೋಷಿ

28 Mar 2020 | 7:27 PM

ನವದೆಹಲಿ, ಮಾ 28 (ಯುಎನ್‌ಐ) ದೇಶದಲ್ಲಿ ಕಲ್ಲಿದ್ದಲು ಸರಬರಾಜನ್ನು ಅತ್ಯಗತ್ಯ ಸೇವೆ ಎಂದು ಘೋಷಿಸಲಾಗಿದ್ದು, ಲಾಕ್‌ ಡೌನ್ ಅವಧಿಯಲ್ಲಿ ನಿರ್ಣಾಯಕ ಕಲ್ಲಿದ್ದಲು ಪೂರೈಕೆಯನ್ನು ಖಾತರಿ ಪಡಿಸಲು ಅಹರ್ನಿಶಿ ಶ್ರಮಿಸುವಂತೆ ಸಚಿವಾಲಯದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಶನಿವಾರ ನಿರ್ದೇಶನ ನೀಡಿದ್ದಾರೆ.

 Sharesee more..