Wednesday, Feb 26 2020 | Time 10:39 Hrs(IST)
  • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
  • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
  • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
  • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
  • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
  • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
  • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
  • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
  • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
  • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
  • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
Karnataka Share

ಸಿಎಎ ವಿರುದ್ಧ ಜಮೀರ್ ಪ್ರತಿಭಟನೆ; ರೇಣುಕಾಚಾರ್ಯ ವಿರುದ್ಧ ವಾಗ್ದಾಳಿ

ಬೆಂಗಳೂರು,ಜ‌. 24(ಯುಎನ್‌ಐ) ಕೇಂದ್ರ ಜಾರಿಗೊಳಿಸಲು ಉದ್ದೇಶಿಸಿರುವ ಸಿಎಎ, ಎನ್ ಆರ್ ಸಿ ವಿರುದ್ಧ ಕಾಂಗ್ರೆಸ್ ಶಾಸಕ ಹಾಗೂ ಮುಸ್ಲಿಂ ಸಮುದಾಯದ ಮುಖಂಡ ಜಮೀರ್ ಅಹ್ಮದ್ ಪಕ್ಷದ ಕಾರ್ಯಕರ್ತರು ಹಾಗೂ ಸಮಾಜದ ಬಾಂಧವರೊಡನೆ ಮತಕ್ಷೇತ್ರ ಗೋರಿಪಾಳ್ಯದಲ್ಲಿ ಪ್ರತಿಭಟನೆ ನಡೆಸಿದರು.
ಗೋರಿಪಾಳ್ಯದ ಖುದ್ದೂಸ್ ಮೈದಾನದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಿ ಕೇಂದ್ರದ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಮೀರ್ ಅಹ್ಮದ್, ಸಚಿವ‌ ರೇಣುಕಾಚಾರ್ಯ ಬಾಯಿಗೆ ಬಂದಂತೆ ಮಾತನಾಡಬಾರದು. ಮುಸಲ್ಮಾನ್ ಸಮಾಜಕ್ಕೆ ಸೇರಿದ ನಾವುಗಳು ಈ ದೇಶದಲ್ಲೆ ಹುಟ್ಟಿದ್ದೇವೆ, ಇಲ್ಲೇ ಬದುಕು ನಡೆಸುತ್ತಿದ್ದೇವೆ ಎಂದರು.
ರೇಣುಕಾಚಾರ್ಯ ಅವರ ಬಗ್ಗೆ ತಮಗಿಂತಲೂ ನರ್ಸ್ ಜಯಲಕ್ಷ್ಮೀ ಚೆನ್ನಾಗಿ ಹೇಳುತ್ತಾರೆ. ಚುಮ್ಮ ಚುಮ್ಮ ಎಂದು ಹೋಗಿದ್ದು ರೇಣುಕಾಚಾರ್ಯವೇ ಹೊರತು ನಾನಲ್ಲ. ಅಂತವರ ಬಗ್ಗೆ ನಾನೇಕೆ ಮಾತನಾಡಲಿ ಎಂದು ತಿರುಗೇಟು ನೀಡಿದರು.
ರೇಣುಕಾಚಾರ್ಯ ಯಡಿಯೂರಪ್ಪನವರಿಗೆ ಮೋಸ ಮಾಡಿದ್ದಂತಹ ವ್ಯಕ್ತಿ. ಬಿಜೆಪಿ ಶಾಸಕರನ್ನು ಗೋವಾಗೆ ಕರೆದೊಯ್ದಿದ್ದ ರೇಣುಕಾಚಾರ್ಯ‌ ಈಗ ಅಪ್ಪಾಜಿ ಅಪ್ಪಾಜಿ ಎಂದು ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪ ಅವರ ಹಿಂದೆ ಮುಂದೆ ಓಡಾಡುತ್ತಿದ್ದಾರೆ. ಒಂದು ವೇಳೆ ಮಂತ್ರಿಗಿರಿ ಸಿಗದೇ ಹೋದರೆ ಮತ್ತೆ ಅವರ ತಿರುಗಿಬೀಳುತ್ತಾರೆ ಎಂದರು.
ನಾನು ಜೆಡಿಎಸ್ ಬಿಟ್ಟಿದ್ದು ನಿಜ, ಕಾಂಗ್ರೆಸ್ ಸೇರಿದ್ದು ನಿಜ. ಕಾಂಗ್ರೆಸ್ ಪಕ್ಷಕ್ಕೆ ಆಗಲಿ, ಜೆಡಿಎಸ್‌ಗೆ ಆಗಲೀ ಎಲ್ಲೂ ದ್ರೋಹ ಬಗೆದಿಲ್ಲ‌. ರೇಣುಕಾಚಾರ್ಯರಂತೆ ದ್ರೋಹ ಬಗೆದಿಲ್ಲ ಎಂದು ವಾಗ್ದಾಳಿ ನಡೆಸಿದರು‌.
ಯುಎನ್ಐ ಯುಎಲ್ ಎಎಚ್ 2155