Wednesday, Feb 26 2020 | Time 10:37 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಸಿಎಎ ವಿರೋಧಿ ಪ್ರತಿಭಟನೆ ನೆಪದಲ್ಲಿ ‘ಜಿನ್ನಾ ವಾಲಿ ಆಜಾದಿ’ ಘೋಷಣೆ: ವಿಡಿಯೋ ಶೇರ್ ಮಾಡಿದ ಬಿಜೆಪಿ

ನವದೆಹಲಿ, ಜ 10 (ಯುಎನ್‍ಐ) ದೇಶದ ಬಹುತೇಕ ಪ್ರದೇಶಗಳಲ್ಲಿ ಪೌರತ್ವ ವಿರೋಧಿ ಕಾಯ್ದೆ ಪ್ರತಿಭಟನೆ ನೆಪದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ಪ್ರಚೋದಿಸಲಾಗಿದ್ದು, ಈ ಕುರಿತ ವಿಡಿಯೋವೊಂದನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ.
ವಿಡಿಯೊದೊಂದಿಗೆ ವೆಬ್‌ಸೈಟ್‌ನ ಲಿಂಕ್ ಅನ್ನು ಟ್ವೀಟ್ ಮಾಡಿ ದೆಹಲಿ ಬಿಜೆಪಿ ವಕ್ತಾರ ತಾಜಿಂದರ್ ಪಾಲ್ ಸಿಂಗ್ ಬಗ್ಗಾ, "ಜಿಹಾನಿ ವಾಲಿ ಆಜಾದಿ ಘೋಷಣೆಗಳು ಶಾಹೀನ್ ಬಾಗ್‌ನಲ್ಲಿ ಎದ್ದಿವೆ. ಸಿಎಎ ವಿರೋಧಿ ಪ್ರತಿಭಟನೆಗಳ ನಿಜವಾದ ಮುಖ ಮತ್ತು ಈ ಘೋಷಣೆಗಳ ಅರ್ಥವೇನು" ಎಂದು ಬರೆದಿದ್ದಾರೆ.


ಬಿಜೆಪಿ ನಾಯಕರಾದ ಜಿವಿಎಲ್ ನರಸಿಂಹ ರಾವ್ ಮತ್ತು ಗೌರವ್ ಭಾಟಿಯಾ ಕೂಡ ಸರ್ಕಾರ ವಿರೋಧಿ ಪ್ರತಿಭಟನೆ ಕುರಿತು ಟೀಕಿಸಿದ್ದಾರೆ.

"ಜಿನ್ನಾ-ವಾಲಿ ಆಜಾದಿ ಪಾಕಿಸ್ತಾನ ಎನ್ನುತ್ತಿರುವ ಜನರು ಆ ರೀತಿಯ ಆಡಳಿತವನ್ನು ಬಯಸಿದರೆ, ಅವರು ಪಾಕಿಸ್ತಾನದ ಪೌರತ್ವವನ್ನು ಪಡೆಯಬಹುದು ಮತ್ತು ಅಲ್ಲಿಗೆ ಹೋಗಿ ಅಲ್ಲಿ ವಾಸಿಸಬಹುದು ಎಂದು ನಾನು ಭಾವಿಸುತ್ತೇನೆ” ಎಂದು ನರಸಿಂಹರಾವ್, ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

"ಈ ಜನರು (ಪ್ರತಿಭಟನಾಕಾರರು) ಕಾಲೇಜು ಕ್ಯಾಂಪಸ್‌ಗಳಲ್ಲಿ ಕಳಂಕವಾಗುತ್ತಿದ್ದಾರೆ ಮಾತ್ರವಲ್ಲ, ಅವರು ಪಾಕಿಸ್ತಾನ ಪ್ರಾಯೋಜಿತ ವಿವಿಧ ಭಯೋತ್ಪಾದಕ ಸಂಘಟನೆಗಳಿಗೆ ಸಹವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.
ಮತ್ತೋರ್ವ ಬಿಜೆಪಿ ಮುಖಂಡ ಗೌರವ್ ಭಾಟಿಯಾ ಈ ಜನರು "ರಾಷ್ಟ್ರ ವಿರೋಧಿಗಳಾಗಿದ್ದು, ದೇಶದ ಭದ್ರತೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ. ನಮ್ಮ ದೇಶದ ಏಕತೆಯನ್ನು ಮುರಿಯಲು ಬಯಸುತ್ತಿರುವ ಕಾರಣ ಕಾನೂನಿನ ಪ್ರಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು" ಎಂದು ತಿಳಿಸಿದ್ದಾರೆ.
ವೀಡಿಯೊದಲ್ಲಿನ ವರದಿಗಳು ಶಾಹೀನ್ ಬಾಗ್ ಪ್ರದೇಶದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನಾಕಾರರು '' ಹಮ್ ಲಡ್ಕೆ ಲೇಂಗೆ ಆಜಾದಿ. ನೆಹರೂ ವಾಲಿ ಆಜಾದಿ. ಗಾಂಧಿ ವಾಲಿ ಆಜಾದಿ .... ಜಿನ್ನಾ ವಾಲಿ ಆಜಾದಿ " ಘೋಷಣೆಗಳನ್ನು ಕೂಗಿದ್ದಾರೆ.

ಶಹೀನ್ ಬಾಗ್ ದೆಹಲಿಯ ದಕ್ಷಿಣ ದೆಹಲಿ ಜಿಲ್ಲೆಯ ನೆರೆಹೊರೆಯಾಗಿದ್ದು, ಅಲ್ಪಸಂಖ್ಯಾತ ಸಮುದಾಯ ಜನಸಂಖ್ಯೆಯನ್ನು ಹೊಂದಿದೆ.
ಯುಎನ್‍ಐ ಎಸ್‍ಎ ವಿಎನ್ 1552