Friday, Feb 28 2020 | Time 09:52 Hrs(IST)
  • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಸಿಎಎ ವಿರೋಧಿಸಿ ದೇಶವ್ಯಾಪಿ ಯಾತ್ರೆ : ಯಶವಂತ ಸಿನ್ಹಾ

ನವದೆಹಲಿ, ಜ 4 (ಯುಎನ್ಐ) ಪೌರತ್ವ (ತಿದ್ದುಪಡಿ) ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಶನಿವಾರ ರಾಷ್ಟ್ರವ್ಯಾಪಿ 'ಯಾತ್ರೆ' ಪ್ರವಾಸ ಘೋಷಿಸಿದ್ದಾರೆ.

ತಮ್ಮ ಸಂಸ್ಥೆ ರಾಷ್ಟ್ರ ಮಂಚ್‌ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿರುವ ಈ ಅಭಿಯಾನವನ್ನು 'ಗಾಂಧಿ ಶಾಂತಿ ಯಾತ್ರೆ' ಎಂದು ಕರೆಯಲಾಗುವುದು ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಂಸದ ಶತ್ರುಘನ್ ಸಿನ್ಹಾ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಸುರೇಶ್ ಮೆಹ್ತಾ ಉಪಸ್ಥಿತರಿದ್ದರು.

ಜನವರಿ 9 ರಂದು ಮುಂಬೈನ ಅಪೊಲೊ ಬಂಡರ್‌ನಲ್ಲಿ ಯಾತ್ರೆ ಪ್ರಾರಂಭವಾಗಲಿದ್ದು, ಮಹಾರಾಷ್ಟ್ರ, ಗುಜರಾತ್, ರಾಜಸ್ತಾನ, ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿ ಮೂಲಕ ಹಾದುಹೋಗಿ 3,000 ಕಿ.ಮೀ ದೂರವನ್ನು ಕ್ರಮಿಸುತ್ತದೆ ಎಂದು ಯಶ್ವಂತ್ ಸಿನ್ಹಾ ತಿಳಿಸಿದ್ದಾರೆ.

ಹುತಾತ್ಮರ ದಿನವಾದ ಜನವರಿ 30 ರಂದು ದೆಹಲಿಯ ರಾಜ್ ಘಾಟ್‌ನಲ್ಲಿ ಯಾತ್ರೆ ಸಂಪನ್ನಗೊಳ್ಳಲಿದೆ.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹಿಂಸಾಚಾರ ನಡೆಯುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ದೇಶಾದ್ಯಂತ ಶಾಂತಿಯ ವಾತಾವರಣ ಹದಗೆಡಲು ಸರ್ಕಾರವೇ ಕಾರಣ ಎಂದು ಆರೋಪಿಸಿದರು.

ಅಭಿಯಾನವನ್ನು ಯಶಸ್ವಿಗೊಳಿಸಲು ಗುಜರಾತ್‌ನ ಜನರು ಮತ್ತು ಸಂಘಟನೆಗಳು ಮುಂದಾಗುವಂತೆ ಮೆಹ್ತಾ ಮನವಿ ಮಾಡಿದರು.

ಸಿಎಎ ಅಸಂವಿಧಾನಿಕವಾಗಿದ್ದು, ಸಮುದಾಯದ ವಿರುದ್ಧ ತಾರತಮ್ಯ ಮತ್ತು ಅದನ್ನು ಅವಮಾನಿಸುವ ಉದ್ದೇಶದಿಂದ ಕೂಡಿದೆ ಎಂದು ಗುಜರಾತ್ ಮಾಜಿ ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಇದನ್ನು ರದ್ದುಪಡಿಸಬೇಕು ಹಾಗೂ ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಜಾರಿಗೆ ತರಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆಯಲ್ಲಿ ನಿರತರಾಗಿರುವವರ ಮೇಲಿನ ಪೊಲೀಸರ ದೌರ್ಜನ್ಯವನ್ನು "ರಾಜ್ಯ ಪ್ರಾಯೋಜಿತ ಭಯೋತ್ಪಾದನೆ" ಎಂದು ಕರೆದಿರುವ ಅವರು, ಯಾತ್ರೆಯು ನಿರ್ದಿಷ್ಟವಾಗಿ ಪೊಲೀಸರ ಈ ನಡೆಯನ್ನು ವಿರೋಧಿಸುತ್ತದೆ ಎಂದು ಹೇಳಿದ್ದಾರೆ.
ಯುಎನ್ಐ ಜಿಎಸ್ಆರ್ 2312