Wednesday, Feb 26 2020 | Time 10:37 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಸಿಎಎ ಹಿಂಪಡೆಯಿರಿ, ಎನ್‌ಆರ್‌ಸಿ, ಎನ್‌ಪಿಆರ್ ಪ್ರಕ್ರಿಯೆ ತಕ್ಷಣ ನಿಲ್ಲಿಸಿ: 20 ವಿರೋಧ ಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ

ನವದೆಹಲಿ, ಜನವರಿ 13 (ಯುಎನ್‌ಐ) ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವುದರ ಮಧ್ಯೆಯೇ 20 ವಿರೋಧ ಪಕ್ಷಗಳು ಸೋಮವಾರ "ಸಿಎಎ ಹಿಂಪಡೆದುಕೊಳ್ಳಬೇಕು ಮತ್ತು ರಾಷ್ಟ್ರವ್ಯಾಪಿ ಎನ್‌ಆರ್‌ಸಿ, ಎನ್‌ಪಿಆರ್‌ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.
ಮೋದಿ ಸರ್ಕಾರ ದೇಶದ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿದ್ದು, ಇದರಿಂದ ಬಹುಪಾಲು ಜನರ ಜೀವನೋಪಾಯ ತಳಮಟ್ಟಕ್ಕೆ ಕುಸಿದಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿರೋಧ ಪಕ್ಷಗಳು, ಈ ಸಮಸ್ಯೆಗಳನ್ನು ಪರಿಹರಿಸುವ ಬದಲು ಮತ್ತು ಜನರಿಗೆ ಪರಿಹಾರವನ್ನು ನೀಡುವ ಬದಲು ಬಿಜೆಪಿ ಸರ್ಕಾರ, ಕೋಮು ಧ್ರುವೀಕರಣವನ್ನು ತೀಕ್ಷ್ಣಗೊಳಿಸುವ ಅಪಾಯಕಾರಿ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಹೇಳಿವೆ.
"ಅಧಿಕಾರ ವಹಿಸಿಕೊಂಡ ಕೂಡಲೇ, ಬಿಜೆಪಿ ಕೋಮು ಧ್ರುವೀಕರಣವನ್ನು ತೀಕ್ಷ್ಣಗೊಳಿಸುವ ಮತ್ತು ಪ್ರಜಾಪ್ರಭುತ್ವದ ಹಕ್ಕುಗಳು ಮತ್ತು ಲಕ್ಷಾಂತರ ಜನರು ಮತ್ತು ಅಂಚಿನಲ್ಲಿರುವ ಸಮುದಾಯಗಳ ಮೇಲೆ ಪರಿಣಾಮ ಬೀರುವ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ವಿರೋಧ ಪಕ್ಷಗಳು ಸಭೆಯಲ್ಲಿ ಅಂಗೀಕರಿಸಿದ ನಿರ್ಣಯವೊಂದರಲ್ಲಿ ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತೃದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಹಿರಿಯ ಕಾಂಗ್ರೆಸ್ ಮುಖಂಡರಾದ ಎ.ಕೆ.ಆಂಟನಿ, ಗುಲಾಮ್ ನಬಿ ಆಜಾದ್, ಅಹ್ಮದ್ ಪಟೇಲ್ ಮತ್ತು ಕೆ.ಸಿ.ವೇಣುಗೋಪಾಲ್, ಎನ್‌ಸಿಪಿ ವರಿಷ್ಠ ಶರದ್ ಪವಾರ್, ಎನ್‌ಸಿಪಿ ಮುಖಂಡ ಪ್ರಫುಲ್ ಪಟೇಲ್, ಜೆಎಂಎಂ ಮುಖ್ಯಸ್ಥ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ, ಲೋಕತಾಂತ್ರಿಕ ಜನತಾದಳ ಮುಖಂಡ ಶರದ್ ಯಾದವ್, ಆರ್‌ಎಲ್‌ಎಸ್‌ಪಿ ಮುಖಂಡ ಉಪೇಂದ್ರ ಕುಶ್ವಾಹ, ಆರ್‌ಎಲ್‌ಡಿ ನಾಯಕ ಅಜಿತ್ ಸಿಂಗ್, ಐಯುಎಂಎಲ್‌ನ ಪಿಕೆ ಕುನ್ಹಾಲೀಕುಟ್ಟಿ , ಕೆಸಿಎಂನ ಥಾಮಸ್ ಚಾಜಿಕಾದನ್, ಎಐಡಿಯುಎಫ್ ನ ಸಿರಾಜುದ್ದೀನ್ ಅಜ್ಮಲ್, ಎನ್‌ಸಿಯ ನ್ಯಾಯಮೂರ್ತಿ ಹಸ್ನೈನ್ ಮಸೂದಿ, ಪಿಡಿಪಿಯ ಮಿರ್ ಮುಹಮ್ಮದ್ ಫಯಾಜ್, ಜೆಡಿಎಸ್ ನಾಯಕ ಡಿ ಕುಪೇಂದ್ರ ರೆಡ್ಡಿ, ಎಚ್‌ಎಎಂನ ಜಿತನ್ ರಾಮ್ ಮಾಂಜಿ, ಸ್ವಾಭಿಮಾನ್ ಪಕ್ಷದ ರಾಜು ಶೆಟ್ಟಿ, ಫಾರ್ವರ್ಡ್ ಬ್ಲಾಕ್‌ನ ಜಿ. ದೇವರಾಜನ್.
, ವಿಸಿಕೆ ಪಕ್ಷದ ತೋಲ್ ತಿರುಮಾವಲನ್ ಮುಂತಾದವರು ಭಾಗವಹಿಸಿದ್ದರು. ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್, ಮಾಯಾವತಿಯ ಬಹುಜನ ಸಮಾಜ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಶಿವಸೇನೆ ಮತ್ತು ಡಿಎಂಕೆ ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಸರ್ಕಾರವು ದಬ್ಬಾಳಿಕೆಯ ಆಳ್ವಿಕೆ ನಡೆಸುತ್ತಿದ್ದು, ದ್ವೇಷವನ್ನು ಹರಡಿ, ಧರ್ಮಗಳ ಆಧಾರದಲ್ಲಿ ರಾಷ್ಟ್ರವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ಮತ್ತು ಗೃಹ ಸಚಿವ ಅಮಿತ್ ಶಾ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ

ದೇಶದ ಆರ್ಥಿಕತೆ ಕುಸಿದಿದ್ದು, ಜನರ ಗಮನವನ್ನು ಅದರಿಂದ ಬೇರೆಡೆಗೆ ತಿರುಗಿಸಲು ಯತ್ನಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.


ಪ್ರಸ್ತುತ ದೇಶದೆಲ್ಲೆಡೆ, ಪ್ರಕ್ಷುಬ್ಧತೆಯಿದ್ದು, ಸಂವಿಧಾನವನ್ನು ದುರ್ಬಲಗೊಳಿಸಲಾಗುತ್ತಿದೆ. ಆಡಳಿತ ಯಂತ್ರದ ದುರುಪಯೋಗವಾಗುತ್ತಿದೆ. ಕುಸಿಯುತ್ತಿರುವ ಆರ್ಥಿಕತೆ ಹಾಗೂ ಬಡವರ ಏಳಿಗೆಯ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸುವಂತೆ ಪ್ರಧಾನಮಂತ್ರಿಗೆ ಸವಾಲು ಹಾಕಿದರು, ಮೋದಿಯವರಿಗೆ ವಿದ್ಯಾರ್ಥಿಗಳ ಮುಂದೆ ನಿಲ್ಲುವ ಧೈರ್ಯವಿಲ್ಲ ಎಂದು ಟೀಕಿಸಿದರು.
ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಸಂವಿಧಾನ ವಿರೋಧಿ ಕಾಯ್ದೆಗಳಾಗಿವೆ. ಇದು ನಿರ್ದಿಷ್ಟವಾಗಿ ಬಡವರು, ದೀನ ದಲಿತರು, ಎಸ್‌ಸಿ / ಎಸ್‌ಟಿಗಳು ಮತ್ತು ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸುತ್ತವೆ. ಸಿಎಎ ಹಿಂಪಡೆಯಲು ಮತ್ತು ರಾಷ್ಟ್ರವ್ಯಾಪಿ ಎನ್‌ಆರ್‌ಸಿ / ಎನ್‌ಪಿಆರ್ ಅನ್ನು ತಕ್ಷಣ ನಿಲ್ಲಿಸುವಂತೆ ನಾವು ಒತ್ತಾಯಿಸುತ್ತೇವೆ ಎಂದು ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.
ವಿರೋಧ ಪಕ್ಷಗಳ ಸಭೆಯು ಎನ್‌ಪಿಆರ್ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸುವಂತೆ ಕರೆ ನೀಡಿದೆ. ಎನ್‌ಪಿಆರ್ ಪ್ರಕ್ರಿಯೆ ಎನ್‌ಆರ್‌ಸಿಗೆ ಮುನ್ನುಡಿಯಾಗಿರುವುದರಿಂದ, ಎಲ್ಲಾ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಎನ್‌ಆರ್‌ಸಿಯನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧದ 'ಶಾಂತಿಯುತ' ಬಹು-ಧಾರ್ಮಿಕ, ಜನಪ್ರಿಯ ಪ್ರತಿಭಟನೆಗಳನ್ನು ಸ್ವಾಗತಿಸಿದ ನಿರ್ಣಯವು, "ಭಾರತೀಯ ಸಂವಿಧಾನವನ್ನು ಕಾಪಾಡಲು ಇಂತಹ ಎಲ್ಲಾ ಶಾಂತಿಯುತ ಪ್ರತಿಭಟನೆಗಳ ಪರವಾಗಿ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ" ಎಂದು ಹೇಳಿದೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23 ರಂದು, ಗಣರಾಜ್ಯೋತ್ಸವವಾದ ಜನವರಿ 26, ಮತ್ತು ಮಹಾತ್ಮ ಗಾಂಧಿಯ ಹುತಾತ್ಮ ದಿನದಂದು ಜನವರಿ 30 ರಂದು 'ಭಾರತೀಯ ಸಂವಿಧಾನದ ರಕ್ಷಣೆ ಮತ್ತು ನಮ್ಮ ಸಾಮಾಜಿಕ ಪ್ರಜಾಪ್ರಭುತ್ವ ಗಣರಾಜ್ಯವನ್ನು ಕಾಪಾಡುವ ಕಾರ್ಯಕ್ರಮಗಳೊಂದಿಗೆ ನಾಗರಿಕರು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.
ಯುಎನ್ಐ ಎಎಚ್ 2150