Friday, Feb 28 2020 | Time 09:41 Hrs(IST)
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಸಿಡಿಎಸ್ ಹುದ್ದೆಗೆ ಬಿಪಿನ್ ರಾವತ್ ನೇಮಕದ ಔಚಿತ್ಯವೇನು: ಕಾಂಗ್ರೆಸ್

ನವದೆಹಲಿ, ಡಿ 31 (ಯುಎನ್ಐ) ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್ ) ಹುದ್ದೆಗೆ ಜನರಲ್ ಬಿಪಿನ್ ರಾವತ್ ಅವರನ್ನು ನೇಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮವನ್ನು ಕಾಂಗ್ರೆಸ್ ಖಂಡಿಸಿದ್ದು, ಈ ನಿರ್ಧಾರದ ಪರಿಣಾಮವನ್ನು ಕಾಲವೇ ತಿಳಿಸಲಿದೆ ಎಂದು ಹೇಳಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಂಸದ ಮತ್ತು ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ, ಸಿಡಿಎಸ್ ಗೆ ಸಂಬಂಧಿಸಿದಂತೆ ಸರ್ಕಾರ ತಪ್ಪು ನಿರ್ಧಾರ ತೆಗೆದುಕೊಂಡಿದೆ ಎಂದು ನಾನು ತೀವ್ರ ಪಶ್ಚಾತ್ತಾಪ ಮತ್ತು ಹೊಣೆಗಾರಿಕೆಯಿಂದ ಹೇಳಬಲ್ಲೆ’ ಎಂದಿದ್ದಾರೆ.
ರಕ್ಷಣಾ ಸಚಿವರ ಸೇನಾ ಸಲಹೆಗಾರರು ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರೊಂದಿಗೆ ಯಾವ ಸಂಬಂಧ ಹೊಂದಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.
ಯುಎನ್ಐ ಎಸ್ಎಚ್ ವಿಎನ್ 1810