Wednesday, Jan 29 2020 | Time 14:15 Hrs(IST)
 • ರೋಹಿತ್ ಸ್ಪೋಟಕ ಅರ್ಧಶತಕ: ನ್ಯೂಜಿಲೆಂಡ್‌ಗೆ 180 ರನ್ ಗುರಿ
 • ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಎಂಟು ಮಂದಿ ಸಾವು, 40 ಜನರಿಗೆ ಗಾಯ
 • ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ‌ ನಾನಲ್ಲ: ಡಿ ಕೆ ಶಿವಕುಮಾರ್
 • ಕೇರಳ ವಿಧಾನಸಭೆಯಲ್ಲಿ ಮತ್ತೆ ಸಿಎಎ ಕಲಹ: ರಾಜ್ಯಪಾಲರ ಆಗಮನಕ್ಕೆ ತಡೆ ಒಡ್ಡಿದ ವಿಪಕ್ಷ ಸದಸ್ಯರು
 • ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವಂತೆ ನಾವು ಒತ್ತಡ ಹಾಕುತ್ತೇವೆ : ಡಾ ಜಿ ಪರಮೇಶ್ವರ್
 • ಹಾಕಿ: ಭಾರತ ವನಿತೆಯರಿಗೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಸೋಲು
 • ಟಿಸಿಐ ಎಕ್ಸ್ ಪ್ರೆಸ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಸಾಧನೆ ಪ್ರಕಟ: 26 ಕೋಟಿ ರೂ ನಿವ್ವಳ ಲಾಭ
 • ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್
 • ಆಸ್ಟ್ರೇಲಿಯಾ ಓಪನ್: ಮೊದಲ ಬಾರಿ ಗ್ರ್ಯಾನ್ ಸ್ಲ್ಯಾಮ್ ಸೆಮಿಫೈನಲ್ ತಲುಪಿದ ಜ್ವೆರೆವ್
 • ರೌಡಿಶೀಟರ್ ಹತ್ಯೆಗೈದಿದ್ದ ಒಂಭತ್ತು ಜನರ ಬಂಧನ
 • ಕರೊನಾ ವೈರಸ್ ನಿಗ್ರಹಕ್ಕೆ “ತಾರಾ ಮಂತ್ರ” ದಿಂದ ಬ್ರಹ್ಮಾಂಡ ಪರಿಹಾರ; ದಲಾಯಿ ಲಾಮಾ ಸಲಹೆ
 • ಕಾಶ್ಮೀರದಲ್ಲಿ ಹೈಸ್ಪೀಡ್, ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್‌ ಸ್ಥಗಿತ ಮುಂದುವರಿಕೆ
 • ಮೂರನೇ ಟಿ-20 ಪಂದ್ಯ: ಟಾಸ್ ಗೆದ್ದು ಪೀಲ್ಡಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
 • ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
 • ಪುಸ್ತಕ ಪ್ರೇಮಿಗಳಾಗಿ, ಜ್ಞಾನಾರ್ಜನೆ ಮಾಡಿಕೊಳ್ಳಿ ಸಿಎಂ ಮಮತಾ ಕಿವಿಮಾತು
Parliament Share

ಸುಡಾನ್‌ ಕಾರ್ಖಾನೆ ಸ್ಫೋಟದಲ್ಲಿ 18 ಭಾರತೀಯರು ಸಾವು: ಲೋಕಸಭೆಯಲ್ಲಿ ಪ್ರಸ್ತಾಪ

ನವದೆಹಲಿ, ಡಿ.5 (ಯುಎನ್ಐ) ಸುಡಾನ್‌ನಲ್ಲಿ ಕಾರ್ಖಾನೆಯೊಂದರಲ್ಲಿ ನಡೆದ ಸ್ಫೋಟದಲ್ಲಿ 18 ಭಾರತೀಯರು ಮೃತಪಟ್ಟಿರುವ ವಿಷಯವನ್ನು ಲೋಕಸಭೆಯಲ್ಲಿಂದು ಡಿಎಂಕೆ ಸದಸ್ಯ ಟಿ.ಆರ್. ಬಾನು ಪ್ರಸ್ತಾಪಿಸಿ, ಸರ್ಕಾರದ ಗಮನ ಸೆಳೆದರು.
ಶೂನ್ಯವೇಳೆಯಲ್ಲಿ ಡಿಎಂಕೆ ಸದಸ್ಯ ವಿಷಯ ಪ್ರಸ್ತಾಪಿಸಿ, ಮೃತದೇಹಗಳನ್ನು ಆದಷ್ಟು ಶೀಘ್ರದಲ್ಲಿ ಭಾರತಕ್ಕೆ ತರಲು ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಿದ ಬಿಜೆಪಿ ಸದಸ್ಯ ರಾಜೀವ್ ಪ್ರತಾಪ್ ರೂಡಿ, ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸುತ್ತರ ಸುಡಾನ್‌ನ ಖಾರ್ಟೂಮ್ ನ ಸೆರಾಮಿಕ್ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 23 ಜನರು ಸಾವನ್ನಪ್ಪಿ, ಇತರ 130 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರಲ್ಲಿ 18 ಮಂದಿ ಭಾರತೀಯರು ಇದ್ದಾರೆ.
ಯುಎನ್ಐ ಎಎಚ್ 1420