Wednesday, Feb 26 2020 | Time 10:43 Hrs(IST)
 • 2007ರಲ್ಲಿ ತಿಲಕ್‌ ನಗರದಲ್ಲಿ ಜೋಡಿ ಕೊಲೆ: ರವಿ ಪೂಜಾರಿ ತೀವ್ರ ವಿಚಾರಣೆ
 • "ಕೇಜ್ರಿವಾಲ್‌ ಹೊರಗೆ ಬನ್ನಿ, ನಮ್ಮೊಂದಿಗೆ ಮಾತನಾಡಿ" ಘೋಷಣೆಯೊಂದಿಗೆ ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆ: ಪೊಲೀಸರಿಂದ ತೆರವು
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
National Share

ಸೇನಾ ದಿನ: ಯುದ್ಧ ಸ್ಮಾರಕಕ್ಕೆ ಸಿಡಿಎಸ್ ಮುಖ್ಯಸ್ಥರ ಗೌರವ ನಮನ

ನವದೆಹಲಿ, ಜನವರಿ 15 (ಯುಎನ್‌ಐ) 72 ನೇ ಸೇನಾ ದಿನಾಚರಣೆಯ ಅಂಗವಾಗಿ ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ ಮೊದಲಾದವರು ಇಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.

ಸಿಡಿಎಸ್ ಮತ್ತು ಸೇನಾ ಮುಖ್ಯಸ್ಥರೊಂದಿಗೆ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಭಡೌರಿಯಾ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಸಹ ಇಲ್ಲಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ' ಸೇನಾ ದಿನದಂದು, ಭಾರತೀಯ ಸೇನೆಯ ಧೀರ ಪುರುಷರು ಮತ್ತು ಮಹಿಳೆಯರಿಗೆ, ಮತ್ತು ಅವರ ಕುಟುಂಬದ ಸದಸ್ಯರಿಗೆ ಶುಭಾಶಯಗಳು. ಯೋಧರ ತ್ಬಾಗ ಬಲಿದಾನ ಮರೆಯುವಂತಿಲ್ಲ ಯೋಧರ ತ್ಯಾಗವು ಸಾರ್ವಭೌಮತ್ವವನ್ನು ಭದ್ರಪಡಿಸಿದೆ, ಎಂದು ಬಣ್ಣಿಸಿದ್ದಾರೆ '
ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಪೋಸ್ಟ್ ಮಾಡಿ, '' ಸೇನಾ ದಿನಾಚರಣೆಯಂದು, ಎಲ್ಲಾ ಸೈನಿಕರ ಧೈರ್ಯ, ಶೌರ್ಯ ಮತ್ತು ಶೌರ್ಯಕ್ಕಾಗಿ ಶಿರಬಾಗಿ ನಮಸ್ಕರಿಸುತ್ತೇನೆ. ಸೇನೆ ಅದರ ಅದರ ಮಾನವೀಯ ಮನೋಭಾವಕ್ಕಾಗಿ ಸದಾ ಕಾಲ ಗೌರವಿಸಲ್ಪಡುತ್ತದೆ ಎಂದು ಹೇಳಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ' ಇಂದು ಸೇನಾ ದಿನದಂದು, ನಾನು ಎಲ್ಲಾ ಧೀರ ಭಾರತೀಯ ಸೇನಾ ಸಿಬ್ಬಂದಿಗೆ ನಮಸ್ಕರಿಸುತ್ತೇನೆ ಮತ್ತು ಭಾರತವನ್ನು ಸುರಕ್ಷಿತ ಸ್ಥಳವನ್ನಾಗಿ ಮಾಡುವಲ್ಲಿ ಅವರ ಅದಮ್ಯ ಮನೋಭಾವ, ಶೌರ್ಯ ಮತ್ತು ತ್ಯಾಗಗಳನ್ನು ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತೇನೆಎಂದಿದ್ದಾರೆ.
ಪ್ರತಿ ವರ್ಷ ಜನವರಿ 15 ರಂದು ರಾಷ್ಟ್ರವು ಸೇನಾ ದಿನವನ್ನು ಆಚರಿಸುತ್ತದೆ, ಈ ದಿನದಂದು ಮೊದಲ ಭಾರತೀಯ ಜನರಲ್ ಭಾರತೀಯ ಸೇನೆಯ ಉಸ್ತುವಾರಿ ವಹಿಸಿಕೊಂಡಿದ್ದರು.
ಕರ್ನಾಟಕದ ಕೊಡಗಿನ ಹೆಮ್ಮೆಯ ಪುತ್ರ ಜನರಲ್ ಕೆ.ಎಂ. ಕಾರ್ಯಪ್ಪ (ನಂತರ ಫೀಲ್ಡ್ ಮಾರ್ಷಲ್) 1949 ರಲ್ಲಿ ಭಾರತದ ಕೊನೆಯ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಜನರಲ್ ಫ್ರಾನ್ಸಿಸ್ ಬುತ್ಚರ್ ಅವರಿಂದ ಸೇನೆ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡಿದ್ದರು.
ಯುಎನ್ಐ ಕೆಎಸ್ಆರ್ 1240