Wednesday, Feb 26 2020 | Time 10:30 Hrs(IST)
 • ಕಾಶ್ಮೀರದಲ್ಲಿ ಮೂವರು ಉಗ್ರರ ಮನೆಗಳ ಮೇಲೆ ಭದ್ರತಾ ಪಡೆಯಿಂದ ದಾಳಿ
 • ಬಾಲಾಕೋಟ್ ಸರ್ಜಿಕಲ್ ದಾಳಿಗೆ ವರ್ಷಪೂರ್ಣ
 • ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
 • ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 17 ಕ್ಕೆ ಏರಿಕೆ
 • ದೆಹಲಿ ಹಿಂಸಾಚಾರ ಹಿನ್ನೆಲೆ: ಹಿಂಸೆಗೆ ಪ್ರಚೋದಿಸುವ ಸುದ್ದಿ ಪ್ರಸಾರ ಮಾಡದಂತೆ ಟಿವಿ ವಾಹನಿಗಳಿಗೆ ಸರ್ಕಾರ ತಾಕೀತು
 • ದೆಹಲಿ ಹಿಂಸಾಚಾರ: ಕಪಿಲ್ ಮಿಶ್ರಾ ಬಂಧನಕ್ಕೆ ಸಿಪಿಐಎಂ ಒತ್ತಾಯ
 • ಗಾಯಾಳುಗಳ ಚಿಕಿತ್ಸೆಗೆ ಭದ್ರತೆ ಒದಗಿಸಿ ಮಧ್ಯರಾತ್ರಿ ದೆಹಲಿ ಹೈಕೋರ್ಟ್ ಆದೇಶ
 • ದೆಹಲಿ ಪೊಲೀಸರ ಹಿಂದೇಟಿಗೆ ಮಂಗಳೂರು ಗಲಭೆಯಲ್ಲಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದ್ದೇ ಕಾರಣ: ರಾಜೀವ್ ಚಂದ್ರಶೇಖರ್
 • ಯುವತಿ ಮೇಲೆ ಶೂಟೌಟ್ ಮಾಡಿದ್ದ ಆರೋಪಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ
 • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
 • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
 • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
 • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
 • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
 • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
National Share

ಸೇನಾ ಮುಖ್ಯಸ್ಥರಾಗಿ ಮನೋಜ್ ಮುಕುಂದ್ ನರವಣೆ ಅಧಿಕಾರ

ನವದೆಹಲಿ, ಡಿ 31(ಯುಎಎನ್ಐ) ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರವಣೆ ಭಾರತೀಯ ಸೇನಾ ಪಡೆಯ ನೂತನ ಮುಖ್ಯಸ್ಥರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.

ಭೂ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರ ಅಧಿಕಾರವಧಿ ಇಂದಿಗೆ ಮುಗಿದ ಕಾರಣ ನೂತನ ಮಖ್ಯಸ್ಥರನ್ನು ನೇಮಿಸಲಾಗಿದೆ.
ಭಾರತೀಯ ಸೇನೆಯಲ್ಲಿ ಸುಮಾರು 37 ವರ್ಷ ಅನುಭವ ಹೊಂದಿರುವ ನರವಣೆ ಅವರು ಮಹಾರಾಷ್ಟ್ರ ಮೂಲದವರು. ಇಂಡಿಯನ್ ಮಿಲಿಟರಿ ಅಕಾಡಮಿ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡಮಿಯಲ್ಲಿ ತರಬೇತಿ ಪಡೆದಿದ್ದಾರೆ .

ಜಮ್ಮು ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಗಳಲ್ಲಿ ಪಳಗಿದ್ದಾರೆ. ಇವರ ನೇತೃತ್ವದಲ್ಲಿ ಭಾರತ- ಚೀನಾದ 4000 ಕಿ.ಮೀ ಗಡಿ ಪ್ರದೇಶದಲ್ಲಿ ಈಸ್ಟರ್ನ ಕಮ್ಯಾಂಡ್ ವಿಭಾಗದ ಪಡೆ ನಿಯೋಜನೆಗೊಂಡಿದೆ.
ಇದುವರೆಗೆ ಭೂ ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ಅವರು ದೇಶದ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥರನ್ನಾಗಿ ಸರಕಾರ ಇದೇ ಮೋದಲ ಭಾರಿಗೆ ನೇಮಕ ಮಾಡಿದೆ.
ಯುಎನ್ಐ ಕೆಎಸ್ಆರ್ 1423