Wednesday, Feb 26 2020 | Time 09:03 Hrs(IST)
  • ಏರ್ ಇಂಡಿಯ ಖರೀದಿ ಪೈಪೋಟಿಗೆ ಅದಾನಿ ಗುಂಪು ?
  • ಇ ಪಿ ಎಫ್ ಅಡಿ ಡಿಸೆಂಬರ್ 2019 ರಲ್ಲಿ 7 8 ಲಕ್ಷ ಹೊಸ ಸೇರ್ಪಡೆ
  • ಪೂರ್ವ ಟರ್ಕಿಯಲ್ಲಿ 5 ತೀವ್ರತೆಯ ಭೂಕಂಪ
  • ಕರೋನಾ ಸೋಂಕು; ಚೈನಾದಲ್ಲಿ 2, 715ಕ್ಕೆ ಏರಿದ ಸಾವಿನ ಸಂಖ್ಯೆ, 29, 700 ಮಂದಿ ಚೇತರಿಕೆ
  • ಕೊರೋನವೈರಸ್ ಮೇಲೆ ಸ್ಯಾನ್ ಫ್ರಾನ್ಸಿಸ್ಕೋ ಮೇಯರ್ ಲಂಡನ್ ಬ್ರೀಡ್ ತುರ್ತು ಪರಿಸ್ಥಿತಿ ಘೋಷಣೆ
  • ನಾಗರಿಕರು ದೇಶದಿಂದ ಹೊರ ಹೋಗದಂತೆ ಜೆಕ್ ರಿಪಬ್ಲಿಕ್ಪ್ರಧಾನಿ ಶಿಫಾರಸು
Karnataka Share

ಸಂಪುಟ ವಿಸ್ತರಣೆ ಸಂಕಟ: ವಲಸಿಗರಿಗೆ ಕೈತಪ್ಪುವ ಆತಂಕ

ಬೆಂಗಳೂರು, ಜ 24(ಯುಎನ್‌ಐ)ಮುಖ್ಯಮಂತ್ರಿ ದಾವೋಸ್ ಪ್ರವಾಸದಿಂದ ವಾಪಸ್ ಬರುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಆಸೆ ಚಿಗುರೊಡೆದಿದ್ದರೆ, ಕೆಲವು ಹಾಲಿ ಸಚಿವರಿಗೆ ಇರುವ ಹುದ್ದೆ ಕೈ ತಪ್ಪುತ್ತದೆಯೋ ಎನ್ನುವ ಆತಂಕ ಶುರುವಾಗಿದೆ.
ಮೂಲ ವಲಸಿಗರ ನಡುವೆ ಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿರುವುದರಿಂದ ಎಲ್ಲರನ್ನೂ ಸಮಾಧಾನ ಪಡಿಸಲು ಕೆಲವು ಪಕ್ಷ ನಿಷ್ಠರನ್ನು ಕೈ ಬಿಡುವ ಸಾಧ್ಯತೆ ಇದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿರುವುದರಿಂದ ಪಕ್ಷ ನಿಷ್ಠ ಸಚಿವರು ಜನವರಿ 29 ರ ನಂತರ ಏನಾಗುತ್ತದೆಯೋ ಎನ್ನುವ ಆತಂಕದಲ್ಲಿದ್ದಾರೆ.
ಇನ್ನೊಂದೆಡೆ 17 ಜನ ವಲಸಿಗರಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಗುತ್ತದೆ. ಸೋತವರಿಗೆ ಸಿಗದಿದ್ದರೇ ಏನು ಮಾಡುವುದು ಎನ್ನುವ ಬಗ್ಗೆ ವಲಸಿಗರ ಗುಂಪಿನ ನಾಯಕರು ಗೊಂದಲಕ್ಕೊಳಗಾಗಿದ್ದಾರೆ. ಚುನಾವಣೆಯಲ್ಲಿ ಗೆದ್ದಿರುವ 12 ಜನರಲ್ಲಿ ಕೇವಲ 9 ಜನರಿಗೆ ಮಂತ್ರಿ ಸ್ಥಾನ ನೀಡಿ, ಉಳಿದ ನಾಲ್ಕು ಸ್ಥಾನಗಳನ್ನು ಪಕ್ಷದ ಮೂಲ ಶಾಸಕರಿಗೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಲ್ಲದೇ ಸೋತವರಿಗೆ ಜೂನ್ ನಂತರ ಸಂಪುಟದಲ್ಲಿ ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೇ, ಮುಖ್ಯಮಂತ್ರಿ ದಾವೋಸ್‍ನಿಂದ ಆಗಮಿಸಿದ ತಕ್ಷಣ ಗೆದ್ದವರಿಗೆ ಸಂಪುಟದಲ್ಲಿ ಸ್ಥಾನ ನೀಡುವುದಾಗಿ ಹೇಳಿದ್ದು, ವಲಸಿಗರಲ್ಲಿ ಸೋತವರು ಮತ್ತು ಸ್ಪರ್ಧಿಸದೇ ಹೊರಗುಳಿದಿರುವ ಆರ್. ಶಂಕರ್ ಅವರನ್ನು ಮತ್ತಷ್ಟು ಆತಂಕಗೊಳ್ಳುವಂತೆ ಮಾಡಿದೆ.
ಗೆದ್ದವರಿಗೆ ಮಾತ್ರ ಎನ್ನುವ ಮುಖ್ಯಮಂತ್ರಿಯ ಹೇಳಿಕೆಗೆ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಕೊಟ್ಟ ಮಾತು ನೆನಪಿಸುತ್ತೇವೆ. ಸೋತವರಿಗೆ ಕೊಡದಿದ್ದರೆ ಸಂಪುಟ ಹೇಗೆ ವಿಸ್ತರಣೆ ಮಾಡುತ್ತಾರೆ ? ಎಂದು ಪ್ರಶ್ನಿಸುವ ಮೂಲಕ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ತಮ್ಮನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಆರ್. ಶಂಕರ್ ಕೂಡ 17 ಜನರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಇದನ್ನು ಹಲವು ಬಾರಿ ಹೇಳಿದ್ದಾರೆ. ಬಿಜೆಪಿ ರಾಜೀನಾಮೆ ಕೊಟ್ಟು ಬಂದಿರುವ 17 ಜನರಿಗೂ ಮಂತ್ರಿ ಮಾಡಬೇಕು. ನಮ್ಮ ಬಗ್ಗೆ ಬಿಜೆಪಿ ನಾಯಕರು ಅನಗತ್ಯ ಮಾತನಾಡುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್‍ನ ರಿಜ್ವಾನ್ ಅರ್ಷದ್‍ರಿಂದ ಖಾಲಿಯಾಗಿರುವ ವಿಧಾನ ಪರಿಷತ್ ಸ್ಥಾನವನ್ನು ತಮಗೇ ಕೊಡಬೇಕು. ಮುಖ್ಯಮಂತ್ರಿಗಳ ಮಾತಿಗೆ ಗೌರವ ಕೊಟ್ಟು, ಟಿಕೆಟ್ ಬೇರೆಯವರಿಗೆ ನೀಡಿದರೂ, ನಾನು ಕೆಲಸ ಮಾಡಿದ್ದೇನೆ. ನನ್ನ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಲಕ್ಷ್ಮಣ ಸವದಿಯವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಎರಡು ದಿನ ಬಿಟ್ಟು ಮತ್ತೆ ಮಂತ್ರಿಯಾಗಲಿ. ಅವರಿಗೆ ಮತ್ತೆ ಆರು ತಿಂಗಳು ಅವಕಾಶ ಸಿಗುತ್ತದೆ.
ತಾವು ಮಂತ್ರಿಯಾಗಿದ್ದರೂ, ರಾಜ್ಯದಲ್ಲಿ ಉತ್ತಮ ಸರ್ಕಾರ ಬರಲಿ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಶಾಸಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದೆ. ಬಿಜೆಪಿ 104 ಶಾಸಕರಿಂದ ಯಡಿಯೂರಪ್ಪ ಮುಖ್ಯಮಂತ್ರಿ ಆಗಿಲ್ಲ. 17 ಜನ ತ್ಯಾಗದಿಂದ ಬಿಜೆಪಿ ಸರ್ಕಾರ ಬಂದಿದೆ. ಸಿ.ಟಿ. ರವಿಯವರು ನಮ್ಮ ಬಗ್ಗೆ ಮಾತನಾಡುವುದು ಬೇಡ. ಸಂಪುಟ ವಿಸ್ತರಣೆಯಲ್ಲಿ ನಮ್ಮದು ಮೊದಲ ಪಂಕ್ತಿಯಲ್ಲಿ ಅವಕಾಶ ನೀಡಬೇಕು ಎಂದು ಖಾರವಾಗಿ ಮಾತನಾಡಿದ್ದಾರೆ.
ಇನ್ನೊಂದೆಡೆ ಸಚಿವಾಕಾಂಕ್ಷಿಯಾಗಿರುವ ವಲಸಿಗ ಶಾಸಕ ಬಿ.ಸಿ. ಪಾಟೀಲ್, ಸಚಿವ ಸಂಪುಟ ವಿಸ್ತರಣೆ ವಿಳಂಬವಾಗಿರುವುದಕ್ಕೆ ನೋವಾಗಿದ್ದು, ನಮಗಿಂತ ರಾಜ್ಯದ ಜನತೆಗೆ ಹೆಚ್ಚು ನೋವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೇವಲ 17 ಜನ ಮಾತ್ರ ಸರ್ಕಾರ ರಚಿಸುತ್ತಿದ್ದಾರೆ. ವಲಸೆ ಬಂದಿರುವ 17 ಜನರಿಗೂ ಮಂತ್ರಿ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ದಾವೋಸ್‍ನಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಈ ತಿಂಗಳಾಂತ್ಯದಲ್ಲಿ ಮುಖ್ಯಮಂತ್ರಿ ಸಂಪುಟ ವಿಸ್ತರಿಸುವ ಭರವಸೆ ನೀಡಿದ್ದಾರೆ. ಅಗತ್ಯ ಬಿದ್ದರೆ ದೆಹಲಿಗೆ ತೆರಳುವುದಾಗಿ ಹೇಳಿದ್ದಾರೆ. ಗೆದ್ದವರಿಗೆ ಎಲ್ಲರಿಗೂ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಸೋತವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ನಾನು ಮಾತನಾಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಬೇಕು ಎಂದು ಹೇಳಿದರು.
ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ವಲಸಿಗರೂ, ಮೂಲ ಬಿಜೆಪಿಗರಿಗೆ ನ್ಯಾಯ ಕೊಡಿಸಲು ಹಾಲಿ ಸಚಿವರನ್ನು ಕೈ ಬಿಡಬೇಕಾ ಎನ್ನುವ ಬಗ್ಗೆಯೂ ತೀರ್ಮಾನ ಕೈಗೊಳ್ಳುವ ಗೊಂದಲಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ವಲಸಿಗ ಶಾಸಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಜನವರಿ 29 ರ ನಂತರದ ಆತಂಕ:
ಸಂಪುಟ ವಿಸ್ತರಣೆ ಕಸರತ್ತು ಆರಂಭವಾಗುತ್ತಿರುವಂತೆ ಸಚಿವ ಸ್ಥಾನ ಕಳೆದುಕೊಳ್ಳುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಸಚಿವರೂ ಆತಂಕ ಮತ್ತು ಗೊಂದಲದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಪಕ್ಷ ನಿಷ್ಠರಾಗಿರುವ ಸಿ.ಸಿ. ಪಾಟೀಲ್, ಶಶಿಕಲಾ ಜೊಲ್ಲೆ, ಸುರೇಶ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈ ಬಿಡುತ್ತಾರೆ ಎಂಬ ಚರ್ಚೆಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿರುವುದರಿಂದ ಜನವರಿ 29 ನಂತರ ಏನಾಗುತ್ತದೆಯೋ ಎನ್ನುವ ಆತಂಕದಲ್ಲಿದ್ದಾರೆ ಎನ್ನಲಾಗುತ್ತಿದೆ. ಹುದ್ದೆ ಕಳೆದುಕೊಳ್ಳುವ ಆತಂಕದಲ್ಲಿರುವ ಕೆಲವು ಸಚಿವರು ಜನವರಿ 29 ರ ವರೆಗೂ ಯಾವುದೇ ರೀತಿಯ ಸರ್ಕಾರದ ಕೆಲಸಗಳನ್ನು ಮಾಡುವ ಬಗ್ಗೆಯೂ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಯುಎನ್‌ಐ ಯುಎಲ್ ಎಎಚ್ 2212
More News
ಸಾರಿಗೆ ಬಸ್‌ ಪ್ರಯಾಣ ದರ‌ ಶೇಕಡಾ 12ರಷ್ಟು ಹೆಚ್ಚಳ; ಮಧ್ಯರಾತ್ರಿಯಿಂದಲೇ ಜಾರಿ

ಸಾರಿಗೆ ಬಸ್‌ ಪ್ರಯಾಣ ದರ‌ ಶೇಕಡಾ 12ರಷ್ಟು ಹೆಚ್ಚಳ; ಮಧ್ಯರಾತ್ರಿಯಿಂದಲೇ ಜಾರಿ

25 Feb 2020 | 9:29 PM

ಬೆಂಗಳೂರು, ಫೆ. 25(ಯುಎನ್ಐ) ಕೆಎಸ್‌ಆರ್‌ಟಿಸಿ, ವಾಯವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರವನ್ನು ಶೇಕಡಾ 12ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಆದರೆ ಬಿಎಂಟಿಸಿ ಬಸ್ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿಲ್ಲ.

 Sharesee more..