Friday, Feb 28 2020 | Time 09:48 Hrs(IST)
  • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
  • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
  • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
  • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
  • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
  • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
  • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
National Share

ಸುಪ್ರೀಂ ಕೋರ್ಟ್ ನಲ್ಲಿ ಸಿಎಎ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ

ನವದೆಹಲಿ, ಜನವರಿ 22 (ಯುಎನ್ಐ) ಕೇಂದ್ರ ಸರ್ಕಾರ ಜಾರಿಗೆ ತಂದಿರುವ, ದೇಶಾದ್ಯಂತ ಪ್ರತಿಭಟನೆಗೆ ಕಾರಣವಾದ ಪೌರತ್ವ ತಿದ್ದುಪಡಿ (ಸಿಎಎ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ 143 ಅರ್ಜಿಗಳ ವಿಚಾರಣೆ ಇಂದು ಸುಪ್ರಿಂ ಕೋರ್ಟ್ ನಲ್ಲಿ ನಡೆಯಲಿದೆ.
ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿತ್ತು. ಇದನ್ನು ಪ್ರಶ್ನಿಸಿ ಮುಸ್ಲಿಂ ಒಕ್ಕೂಟ ಸಂಘ (ಐಯುಎಂಎಲ್), ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್ ಸೇರಿ 143 ಅರ್ಜಿಗಳು ಸಲ್ಲಿಕೆಯಾಗಿದೆ . ಈ ವಿಚಾರವಾಗಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದ್ದರು.
ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರು ಎನಿಸಿಕೊಂಡು 2014 ಡಿಸೆಂಬರ್ 31ರ ಒಳಗೆ ಭಾರತ ಪ್ರವೇಶಿಸಿದ ಹಿಂದು, ಸಿಖ್, ಬೌದ್ಧ, ಕ್ರೈಸ್ತ, ಜೈನ ಹಾಗೂ ಪಾರ್ಸಿ ಸಮುದಾಯದ ಜನರಿಗೆ ಪೌರತ್ವ ನೀಡಲು ಸರ್ಕಾರ ಮುಂದಾಗಿದೆ.
ಇದು ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯಕ್ಕೆ, ಸ್ವಜನಪಕ್ಷಪಾತಕ್ಕೆ ಹಾದಿಯಾಗಿದೆ ಎಂಬ ವಿರೋಧದ ಕೂಗು ಬಹಳವಾಗಿದೆ ಎದ್ದಿದೆ.
ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಅನುಮೋದನೆ ಸಿಗುತ್ತಿದ್ದಂತೆಯೇ ದೇಶದ ಹಲವೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಕೇರಳ ಇದನ್ನು ಪ್ರಶ್ನೆ ಮಾಡಿ, ಕೋರ್ಟ್ ಕದ ತಟ್ಟಿದೆ.ಇನ್ನು ಕೆಲವು ರಾಜ್ಯಗಳು ವಿರುದ್ದ ಬಹಳ ಆಕ್ರೋಶ ವ್ಯಕ್ತಪಡಿಸಿವೆ.
ಯುಎನ್ಐ ಕೆಎಸ್ಆರ್ 1200